“19 ಫೆಬ್ರವರಿ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ಶೀಘ್ರವೇ ನೋವಿಲ್ಲದ ಚಿಕಿತ್ಸೆ!

ಸುದ್ಧಿಯಲ್ಲಿ ಏಕಿದೆ ?ಗಂಭೀರ ಕಾಯಿಲೆಗಳಿಗೆ ತುತ್ತಾಗಿ ಕೊನೆಯ ದಿನಗಳನ್ನು ಎಣಿಸುತ್ತಿರುವ ರೋಗಿಗಳಿಗಾಗಿ ನೋವುರಹಿತ ಚಿಕಿತ್ಸಾ ಪದ್ಧತಿ ಜಾರಿಗೆ ತರಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿದ್ಧತೆ ನಡೆಸಿದೆ.

ಯೋಜನೆಯ ಉದ್ದೇಶ

  • ಕ್ಯಾನ್ಸರ್, ಏಡ್ಸ್ ಸೇರಿ ಗುಣಪಡಿಸಲಾಗದ ಕಾಯಿಲೆಗೆ ಒಳಪಟ್ಟವರು ಹಾಗೂ ಸಾವಿನಂಚಿನಲ್ಲಿರುವ ರೋಗಿಗಳ ನೋವಿನ ಬಾಧೆ ತಪ್ಪಿಸಲು ಈ ಯೋಜನೆ ಜಾರಿಗೆ ತರಲಾಗುತ್ತಿದೆ.
  • ಕಿದ್ವಾಯಿ ಕ್ಯಾನ್ಸರ್ ಗಂಥಿ ಸಂಸ್ಥೆ ಹಾಗೂ ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಮಾತ್ರ ಸದ್ಯ ಉಪಶಾಮಕ ಚಿಕಿತ್ಸೆ ಲಭ್ಯವಿದೆ. ಖಾಸಗಿ ಆಸ್ಪತ್ರೆಯಲ್ಲಿ ಈ ಚಿಕಿತ್ಸೆಗೆ ಪ್ರತಿ ದಿನಕ್ಕೆ 40 ಸಾವಿರ ರೂ.ವರೆಗೂ ಪಾವತಿ ಮಾಡಬೇಕಾಗುತ್ತದೆ. ಆದರೆ, ಸರ್ಕಾರಿ ಆಸ್ಪತ್ರೆಯಲ್ಲಿ ಈ ಚಿಕಿತ್ಸೆಯನ್ನು ಉಚಿತವಾಗಿ ನೀಡಲು ನಿರ್ಧರಿಸಲಾಗಿದ್ದು, ಕೊನೆಯ ದಿನಗಳನ್ನು ಮನೆಯಲ್ಲಿ ಕುಟುಂಬದ ಸದಸ್ಯರೊಂದಿಗೆ ಕಳೆಯ ಬಹುದಾಗಿದೆ.
  • 6 ತಿಂಗಳ ಕಾಲಾವಕಾಶ: ಯಾವುದೇ ರೋಗಿ ಆರು ತಿಂಗಳು ಹಾಗೂ ಅದಕ್ಕಿಂತ ಕಡಿಮೆ ಅವಧಿ ಮಾತ್ರ ಬದುಕುಳಿಯುತ್ತಾನೆ ಅಂದಾಗ ಮಾತ್ರ ಉಪಶಾಮಕ ಚಿಕಿತ್ಸೆ ನೀಡಲಾಗುತ್ತದೆ. ಇದಕ್ಕೆ ಉಪಶಾಮಕ ಚಿಕಿತ್ಸೆ ಅಭ್ಯಾಸ ನಡೆಸಿರುವ ವೈದ್ಯರು, ಶುಶ್ರೂಷಕರು, ಚಿಕಿತ್ಸಕರು ಅಗತ್ಯವಾಗಿದೆ. ಇದಕ್ಕೆ ಪ್ರತ್ಯೇಕವಾದ ಕೋರ್ಸ್ ಹಾಗೂ ತರಬೇತಿಗಳು ಸಹ ಲಭ್ಯವಿದೆ.

ಮನೆಯಂಗಳದಲ್ಲೇ ರೋಗ ಪತ್ತೆ!

  • ಅನಾರೋಗ್ಯಕ್ಕೊಳಗಾದರೆ ಇನ್ನು ಆತಂಕಪಡುವ ಅಗತ್ಯವಿಲ್ಲ. ನಿಮ್ಮ ಮನೆಯಂಗಳದಲ್ಲೇ ಮನೆಮಂದಿಯ ತಪಾಸಣೆ ನಡೆಸಿ, ಅಗತ್ಯ ಚಿಕಿತ್ಸೆಗೆ ಸಲಹೆ ಕೊಡಿಸುವ ಆರೋಗ್ಯ ಸೇವೆಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಂದಾಗಿದೆ.
  • ದೀರ್ಘಾವಧಿಯ ಮಧುಮೇಹ, ಪಾರ್ಶ್ವವಾಯು, ಹೃದಯ ಕಾಯಿಲೆ, ಕ್ಯಾನ್ಸರ್, ರಕ್ತದೊತ್ತಡ ಮತ್ತಿತರ ರೋಗಗಳನ್ನು ಲಕ್ಷಣದ ಆಧಾರದ ಮೇಲೆ ಆರಂಭಿಕ ಹಂತದಲ್ಲಿಯೇ ಗುರುತಿಸಿ, ಚಿಕಿತ್ಸೆ ಕೊಡಿಸಲು ರಾಷ್ಟ್ರೀಯ ಆರೋಗ್ಯ ಅಭಿಯಾನದ ಸಹಯೋಗದೊಂದಿಗೆ (ಎನ್​ಎಚ್​ಎಂ) ಆರೋಗ್ಯ ಇಲಾಖೆ ಯೋಜನೆ ರೂಪಿಸಿದೆ.

ರಾಷ್ಟ್ರೀಯ ಆರೋಗ್ಯ ಅಭಿಯಾನ

  • ಈ ಕಾರ್ಯಕ್ಕೆ ಅಂದಾಜು 37 ಸಾವಿರ ಆಶಾ ಕಾರ್ಯಕರ್ತೆಯರನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ತರಬೇತಿ ನೀಡುವ ಜತೆಗೆ ವಿವಿಧ ಕಾಯಿಲೆಗಳ ಪ್ರಾಥಮಿಕ ಲಕ್ಷಣಗಳನ್ನು ತಿಳಿಸಿಕೊಡಲಾಗುತ್ತದೆ.
  • ಆಶಾ ಕಾರ್ಯಕರ್ತೆಯರು ಪ್ರತಿ ಮನೆಯಲ್ಲೂ 30 ವರ್ಷ ಮೇಲ್ಪಟ್ಟವರ ಆರೋಗ್ಯ ವಿಚಾರಿಸಲಿದ್ದಾರೆ. ಅಷ್ಟೇ ಅಲ್ಲ, ಧೂಮಪಾನ, ಮದ್ಯಪಾನ ಸೇರಿ ವಿವಿಧ ವ್ಯಸನಗಳ ಬಗ್ಗೆಯೂ ಪ್ರಶ್ನಿಸಿ, ಉತ್ತರ ಪಡೆದುಕೊಳ್ಳಲಿದ್ದಾರೆ. ಈ ಮೂಲಕ ಅಸಾಂಕ್ರಾಮಿಕ ರೋಗದ ಬಗ್ಗೆ ಖಚಿತಪಡಿಸಿಕೊಂಡು, ರೋಗ ಇದ್ದಲ್ಲಿ ಚಿಕಿತ್ಸೆ ಕೊಡಿಸಲಿದ್ದಾರೆ.
  • ಪ್ರಾಥಮಿಕ ಚಿಕಿತ್ಸೆಯನ್ನು ಗ್ರಾಮೀಣಮಟ್ಟದಲ್ಲಿ ಹಾಗೂ ಹೆಚ್ಚಿನ ಚಿಕಿತ್ಸೆಗೆ ತಾಲೂಕು ಅಥವಾ ಜಿಲ್ಲಾ ಆಸ್ಪತ್ರೆಗೆ ಶಿಫಾರಸು ಮಾಡಲಾಗುತ್ತದೆ

 ಸೂರ್ಯಕಿರಣ ಜೆಟ್ ವಿಮಾನಗಳು

ಸುದ್ಧಿಯಲ್ಲಿ ಏಕಿದೆ ?ಯಲಹಂಕದಲ್ಲಿ ನಡೆಯಲಿರುವ ಏರ್ ಶೋಗಾಗಿ ಮಂಗಳವಾರದಂದು ತಾಲೀಮು ನಡೆಸುತ್ತಿರುವ ವೇಳೆಯಲ್ಲಿ ಭಾರತೀಯ ವಾಯುಸೇನೆಗೆ ಸೇರಿದ ಎರಡು ಸೂರ್ಯ ಜೆಟ್ ವಿಮಾನಗಳು ಪರಸ್ಪರ ಡಿಕ್ಕಿಯಾಗಿದೆ.

ಸೂರ್ಯಕಿರಣ ಯುದ್ಧ ವಿಮಾನದ ವಿಶೇಷತೆ

# ಸೂರ್ಯಕಿರಣ್ ವಿಮಾನಗಳು 1960ರಲ್ಲಿ ನಿರ್ಮಾಣ

# 1996ರಲ್ಲಿ ವಾಯುಪಡೆಗೆ ಸೇರ್ಪಡೆ

# ಪೈಲಟ್‌ಗಳಿಗೆ ತರಬೇತಿ ನೀಡಲು ಈ ವಿಮಾನಗಳ ಬಳಕೆ

# ಗಂಟೆಗೆ 780 ಕಿ.ಮೀ ವೇಗದಲ್ಲಿ ಹಾರಾಟ ಸಾಮರ್ಥ್ಯ

# ಸಾಹಸ ಪ್ರದರ್ಶನಕ್ಕೆ ಸೂರ್ಯಕಿರಣ ವಿಮಾನಗಳು ಹೆಸರುವಾಸಿ

# ಎಚ್‌ಎಎಲ್‌ನಿಂದ ತಯಾರಾಗಿರುವ ವಿಮಾನಗಳು

# ಸೂರ್ಯಕಿರಣ್ ಏರೋಬ್ಯಾಟಿಕ್ಸ್‌ ತಂಡದಿಂದ ಪ್ರದರ್ಶನ

# 5 ಟನ್​ ತೂಕವಿರುವ ಸೂರ್ಯಕಿರಣ

# ವೈಮಾನಿಕ ಪ್ರದರ್ಶನ ನೀಡುವ ಸೂರ್ಯಕಿರಣ

# ಶ್ರೀಲಂಕಾದಿಂದ ಸಿಂಗಾಪುರದವರೆಗೆ ಒಟ್ಟು 450 ಪ್ರದರ್ಶನ

# 1996ರ ಮೇ27ರಂದು ಬೀದರ್‌ನಲ್ಲಿ 6 ಪ್ರದರ್ಶನ ನೀಡಿತ್ತು

# ಬೀದರ್​ನ ಏರ್​​ ಬೇಸ್​ನಲ್ಲಿದೆ ಸೂರ್ಯಕಿರಣ ವಿಮಾನದ ಮುಖ್ಯ ಕೇಂದ್ರ ಕಚೇರಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ  ಬಜೆಟ್

ಸುದ್ಧಿಯಲ್ಲಿ ಏಕಿದೆ ?ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಾಗಿ ಬದಲಾದ ನಂತರ ಮಹಿಳೆಯೊಬ್ಬರು ಬಜೆಟ್ ಮಂಡಿಸಿದ್ದು ಇದೇ ಮೊದಲು. ಈ ಹಿಂದೆ ಬೆಂಗಳೂರು ಮಹಾನಗರ ಪಾಲಿಕೆ ಇದ್ದಾಗ 2005-06ರಲ್ಲಿ ಲಲಿತಾ ಶ್ರೀನಿವಾಸ್ ಬಜೆಟ್ ಮಂಡಿಸಿದ್ದರು. ಇದೀಗ ಹೇಮಲತಾ ಗೋಪಾಲಯ್ಯ ವಿಶಿಷ್ಟ ದಾಖಲೆಗೆ ಪಾತ್ರರಾಗಿದ್ದಾರೆ.

ಪಿಂಕ್ ಬಜೆಟ್, ಬುಕ್

  • ಮೇಯರ್ ಹಾಗೂ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷರು ಇಬ್ಬರೂ ಮಹಿಳೆಯರಾಗಿರುವ ಕಾರಣ ಈ ಬಾರಿಯ ಬಜೆಟ್ ಪಿಂಕ್ ಬಜೆಟ್ ಆಗಿ ರೂಪು ಗೊಂಡಿತ್ತು. ಬಜೆಟ್​ನಲ್ಲಿ ಮಹಿಳೆಯರಿಗೆ ಹೆಚ್ಚಿನ ಯೋಜನೆ ಘೋಷಿಸಿದ್ದಲ್ಲದೆ, ಬಜೆಟ್ ಪುಸ್ತಕ ಸಂಪೂರ್ಣವಾಗಿ ಗುಲಾಬಿ ಬಣ್ಣದಿಂದ ಕೂಡಿತ್ತು.

ಬಜೆಟ್ ಮುಖ್ಯಅಂಶಗಳು

  • ಈ ಸಲದ ಬಜೆಟ್‌ನಲ್ಲಿ ನಗರ ವ್ಯಾಪ್ತಿಯಲ್ಲಿ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಆರೋಗ್ಯ ಡಯಾಲಿಸಿಸ್ ಕೇಂದ್ರ ಸ್ಥಾಪನೆಗೆ 25 ಕೋಟಿ ರೂ. ಮೀಸಲಿಡಲಾಗಿದೆ. ಬಡ ಹೃದಯ ರೋಗಿಗಳಿಗೆ ಉಚಿತ ಸ್ಟಂಟ್ ಅಳವಡಿಸಲು 4 ಕೋಟಿ ರೂಪಾಯಿ ಬೈಕ್ ಆಂಬುಲೆನ್ಸ್ ಖರೀದಿಗೆ 2 ಕೋಟಿ ರೂಪಾಯಿ ನಿಗದಿಪಡಿಸಲಾಗಿದೆ.
  • ತಾಯಿ ಮಡಿಲು ಯೋಜನೆಗೆ 50 ಕೋಟಿ, ಗರ್ಭಿಣಿಯರಿಗೆ ಕ್ಯಾಲ್ಸಿಯಂ, ಕಬ್ಬಿಣ ಅಂಶದ ಮಾತ್ರೆ ನೀಡಲು 25 ಲಕ್ಷ ರೂಪಾಯಿ, ಮಾರುಕಟ್ಟೆ ವಿಭಾಗ, ಮಾರುಕಟ್ಟೆ ಕಟ್ಟಡಗಳ ನವೀಕರಣಕ್ಕೆ 5 ಕೋಟಿ ರೂಪಾಯಿ ಮೀಸಲಿಡಲಾಗಿದೆ.
  • ಮಹಿಳೆಯರಿಗಾಗಿಯೇ ಸಾಮಾಜಿಕ ಕಾರ್ಯಕ್ರಮ ಹಮ್ಮಿಕೊಳ್ಳಲು ಹತ್ತು ಲಕ್ಷದಂತೆ 19 ಕೋಟಿ ರೂಪಾಯಿ ಮೀಸಲಿಡಲಾಗಿದ್ದು, ಬಡವರಬಂಧು ಕಾರ್ಯಕ್ರಮದಡಿ ಪ್ರತಿ ವಾರ್ಡ್‌ಗೆ ಹದಿನೈದು ಗಾಡಿ ನೀಡಲು 4 ಕೋಟಿ ರೂಪಾಯಿ, ದಿವ್ಯಾಂಗ ಚೇತನರಿಗೆ 75 ಕೋಟಿ ರೂಪಾಯಿಗಳನ್ನು ಈ ಬಾರಿಯ ಬಜೆಟ್ ನಲ್ಲಿ ಮೀಸಲಿಡಲಾಗಿದೆ.
  • ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಹೊಸದಾಗಿ ಮಹಾಲಕ್ಷ್ಮಿ ಯೋಜನೆ ಆರಂಭಿಸಲಾಗಿದೆ.

ಪಿಂಕ್‌ ಬೇಬಿ ಯೋಜನೆ

  • ಪಾಲಿಕೆಯ ಆಸ್ಪತ್ರೆಗಳಲ್ಲಿ ಹೊಸ ವರ್ಷದಂದು ಸಹಜ ಹೆರಿಗೆಯಿಂದ ಜನಿಸಿದ ಮೊದಲ ಹೆಣ್ಣು ಮಗುವಿನ ಶಿಕ್ಷಣಕ್ಕೆ ತಲಾ 5 ಲಕ್ಷ ರೂ. ನೀಡಲಾಗುತ್ತಿದೆ. ಈ ಯೋಜನೆಗೆ ಪಿಂಕ್‌ ಬೇಬಿ ಎಂಬ ಹೆಸರಿಡಲಾಗಿದೆ.

ಕೊಪ್ಪಳದಲ್ಲಿ ಟಾಯ್ಸ್‌, ಬಳ್ಳಾರಿಯಲ್ಲಿ ಜವಳಿ ಕ್ಲಸ್ಟರ್‌ಗಳಿಗೆ ಚಾಲನೆ

ಸುದ್ಧಿಯಲ್ಲಿ ಏಕಿದೆ ?ಚೀನಾ ಮಾದರಿಯಲ್ಲಿ 9 ಜಿಲ್ಲೆಗಳಲ್ಲಿ ಸ್ಥಳೀಯ ವೈವಿಧ್ಯತೆಗೆ ಅನುಗುಣವಾಗಿ ಕೈಗಾರಿಕಾ ಘಟಕ ಅಭಿವೃದ್ಧಿಪಡಿಸಲು ಮುಂದಾಗಿರುವ ಸರಕಾರ, ಮೊದಲ ಹಂತದಲ್ಲಿ ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್‌ ಹಾಗೂ ಬಳ್ಳಾರಿಯಲ್ಲಿ ಜವಳಿ ಕ್ಲಸ್ಟರ್‌ಗಳಿಗೆ ಚಾಲನೆ ನೀಡಿತು

9 ಜಿಲ್ಲೆಗಳಲ್ಲಿ ತಲಾ 1 ಲಕ್ಷ ಉದ್ಯೋಗ ಸೃಷ್ಟಿ

  • ಬಳ್ಳಾರಿ, ಕೊಪ್ಪಳ, ಮೈಸೂರು, ಬೀದರ್‌, ಹಾಸನ, ಚಿತ್ರದುರ್ಗ, ತುಮಕೂರು, ಕಲಬುರಗಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸ್ಥಾಪಿಸಲಿರುವ ಕೈಗಾರಿಕಾ ಕ್ಲಸ್ಟರ್‌ಗಳಲ್ಲಿ ಪ್ರತಿ ಜಿಲ್ಲೆಯಲ್ಲೂ ತಲಾ ಒಂದು ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ ಹಾಕಿಕೊಳ್ಳಲಾಗಿದೆ

ನವೋದ್ಯಮಗಳ ಸ್ಥಾಪನೆ

  • ನವೋದ್ಯಮಗಳ ಸ್ಥಾಪನೆಯಲ್ಲಿ ಕರ್ನಾಟಕ ದೇಶದಲ್ಲಿಯೇ ಮುಂಚೂಣಿಯಲ್ಲಿದೆ. ದೇಶದಲ್ಲಿ 14 ಸಾವಿರ ನವೋದ್ಯಮಗಳನ್ನು ಸ್ಥಾಪಿಸಿದ್ದರೆ, ಕರ್ನಾಟಕದಲ್ಲಿ 8 ಸಾವಿರ ಇವೆ. ಅದರಲ್ಲೂ ಬೆಂಗಳೂರಿನಲ್ಲೇ 4 ಸಾವಿರ ನವೋದ್ಯಮಗಳು ಸ್ಥಾಪನೆಯಾಗಿವೆ.
  • ಹಾಗೆಯೇ, ಅಮೆರಿಕದಲ್ಲಿ ಸರಾಸರಿ 5 ವಯಸ್ಸಿನವರು ನವೋದ್ಯಮಗಳಲ್ಲಿ ತೊಡಗಿಸಿಕೊಂಡರೆ, ಬೆಂಗಳೂರಿನಲ್ಲಿ 28.5 ವಯೋಮಾನದ ಯುವಕರು ಸ್ಟಾರ್ಟಪ್‌ಗಳಲ್ಲಿ ದುಡಿಯುತ್ತಿದ್ದಾರೆ. ಬರ್ಲಿನ್‌ ಹೊರತುಪಡಿಸಿದರೆ ನವೋದ್ಯಮಗಳ ಸ್ಥಾಪನೆಯಲ್ಲಿ ಬೆಂಗಳೂರು ಎರಡನೇ ಸ್ಥಾನದಲ್ಲಿದೆ” ಎಂದರು.

ಕರ್ನಾಟಕ ಸ್ಥಾನ:

  • 5ನೇ ಸ್ಥಾನ : ಕೈಗಾರಿಕಾ ಕ್ಷೇತ್ರದ ಪ್ರಗತಿ
  • 4ನೇ ಸ್ಥಾನ : ಟೆಕ್ನಾಲಜಿಕಲ್‌ ಕ್ಲಸ್ಟರ್‌ ವಿಭಾಗದಲ್ಲಿ (ವಿಶ್ವದಲ್ಲಿ)
  • 17 ಶೇ. ದೇಶದ ಜಿಡಿಪಿಗೆ ರಾಜ್ಯದ ಕೊಡುಗೆ
  • ವಿದೇಶಿ ಬಂಡವಾಳ ಆಕರ್ಷಣೆ : 2010-11ರಲ್ಲಿ 2 ಬಿಲಿಯನ್‌ ಡಾಲರ್‌ , 2017-18ರಲ್ಲಿ 32.7 ಬಿಲಿಯನ್‌ ಡಾಲರ್‌

ಸ್ವರ್ಗದಂಥ ಕಾಶ್ಮೀರವನ್ನು ನರಕವಾಗಿದ್ದು ಹೇಗೆ?

ಸುದ್ಧಿಯಲ್ಲಿ ಏಕಿದೆ ?‘ಭರತ ವರ್ಷ’ದ ಅವಿಭಾಜ್ಯ ಅಂಗವಾದ ಕಾಶ್ಮೀರವು ಇದೀಗ ಪಾಕಿಸ್ತಾನ-ಭಾರತ ನಡುವಿನ ‘ಕದನದ ಕೊಂಡಿ’ಯಾಗಿದೆ.

ಕಾಶ್ಮೀರದ ಇಂದಿನ ಪರಿಸ್ಥಿತಿಗೆ ಯಾರು, ಹೇಗೆ, ಯಾಕೆ ಕಾರಣರಾದರು?

ಮುಸ್ಲಿಂ ಅರಸರ ಆಳ್ವಿಕೆ –

  • ಭಾರತಕ್ಕೆ ಸ್ವಾತಂತ್ರ್ಯ ಸಿಗುವ ಹೊತ್ತಲ್ಲಿ ಕಾಶ್ಮೀರವನ್ನು ಹಿಂದೂ ರಾಜ ಆಳುತ್ತಿದ್ದ. ಅದಕ್ಕೂ ಮೊದಲು ಈ ರಾಜ್ಯವನ್ನು ಅಂದರೆ, 1346ರಿಂದ 1819ರವರೆಗೆ ಮುಸ್ಲಿಂ ರಾಜರು ಆಡಳಿತ ನಡೆಸಿದ್ದಾರೆ. ಈ ಅವಧಿಯಲ್ಲಿ ಹಿಂದೂ ದೇಗುಲಗಳನ್ನು ನಾಶ ಮಾಡಲಾಯಿತು.
  • ಜನರ ಒತ್ತಾಯದಿಂದ ಇಸ್ಲಾಮ್‌ ಧರ್ಮವನ್ನು ಹೇರಲಾಯಿತು. ಆದರೆ, 1587ರಿಂದ 1752ರವರೆಗಿನ ಮೊಘಲ ಆಡಳಿತದಲ್ಲಿ ಕಾಶ್ಮೀರ ಯಾವುದೇ ಅಪಸವ್ಯಗಳಿಗೆ ಒಳಗಾಗಲಿಲ್ಲ. ನಂತರದ ಆಫ್ಘನ್‌ಆಡಳಿತವನ್ನು ಕತ್ತಲೆ ಅವಧಿ ಎದು ಕರೆಯಲಾಗುತ್ತದೆ. 1819ರಲ್ಲಿ ಮುಸ್ಲಿಂ ಆಡಳಿತ ಕೊನೆಗೊಂಡಿತು.

ಹಿಂದೂ ಅರಸರ ಆಡಳಿತ

  • ಮೊದಲನೆಯ ಸಿಖ್‌ ವಾರ್‌(1846)ರ ಮುಕ್ತಾಯ ಬಳಿಕ ಈಗಿರುವ ಕಾಶ್ಮೀರವನ್ನು ಜಮ್ಮುವಿನಲ್ಲಿ ಆಡಳಿತ ಮಾಡುತ್ತಿದ್ದ ಮಹಾರಾಜ ಗುಲಾಬ್‌ ಸಿಂಗ್‌ ಅವರ ಸುಪರ್ದಿಗೆ ವಹಿಸಲಾಯಿತು. ಬಳಿಕ, ಮಹಾರಾಜ ರಣಬೀರ್‌ ಸಿಂಗ್‌, ಮಹಾರಾಜ ಪ್ರತಾಪ್‌ ಸಿಂಗ್‌, ಮಹಾರಾಜ ಹರಿಸಿಂಗ್‌ ಅವರು ಆಧುನಿಕ ಜಮ್ಮು-ಕಾಶ್ಮೀರ ರಾಜ್ಯಕ್ಕೆ ಅಡಿಪಾಯ ಹಾಕಿದರು.
  • ಭಾರತಕ್ಕೆ ಸ್ವಾತಂತ್ರ್ಯ ಸಿಗುವ ಹೊತ್ತಲ್ಲಿ ಕಾಶ್ಮೀರವನ್ನು ಆಳುತ್ತಿದ್ದವರು ರಾಜಾ ಹರಿಸಿಂಗ್‌ ಅವರು. 1880ರಲ್ಲಿ ಬ್ರಿಟಿಷ್‌ ಆಡಳಿತವು ಆಫ್ಘಾನಿಸ್ತಾನ ಮತ್ತು ರಷ್ಯಾಗೆ ಸಂಬಂಧಿಸಿದಂತೆ ಸ್ಪಷ್ಟವಾದ ಗಡಿಗಳನ್ನು ಗುರುತಿಸಿತು.

ಸ್ವಾತಂತ್ರ್ಯದ ಬಳಿಕ ಕಾಶ್ಮೀರ

  • ಭಾರತದಿಂದ ಪಾಕಿಸ್ತಾನ ಪ್ರತ್ಯೇಕತೆಯಲ್ಲೇ ಕಾಶ್ಮೀರ ಬಿಕ್ಕಟ್ಟು ಕೂಡ ಅಡಕವಾಗಿದೆ. ವಿಭಜನೆಯ ಸಮಯದಲ್ಲಿ ಕಾಶ್ಮೀರ ಯಾವ ಕಡೆ ಹೋಗಬೇಕು ಎಂಬ ನಿರ್ಧಾರವನ್ನು ಅಂದಿನ ರಾಜ ಹರಿಸಿಂಗ್‌ ಅವರಿಗೆ ಬಿಡಲಾಯಿತು. ಅವರ ಮುಂದೆ ಕೆಲವು ಷರತ್ತುಗಳೊಂದಿಗೆ ಸ್ವತಂತ್ರ ರಾಷ್ಟ್ರವಾಗುವ ಆಯ್ಕೆಯನ್ನು ನೀಡಲಾಗಿತ್ತು.
  • ಕೆಲವು ತಿಂಗಳು ತೊಳಲಾಡಿದ ಬಳಿಕ ಅವರು, ಭಾರತೀಯ ಒಕ್ಕೂಟ ಜತೆ ಸೇರುವ ನಿರ್ಧಾರಕ್ಕೆ ಬಂದರು. ಮುಸ್ಲಿಂ ಬಾಹುಳ್ಯದ ಕಾಶ್ಮೀರ ಪಾಕಿಸ್ತಾನಕ್ಕೆ ಸೇರಬೇಕೆಂದು ಹಟ ಹಿಡಿದ ಪಾಕಿಸ್ತಾನ, ಕಣಿವೆ ರಾಜ್ಯದ ಮೇಲೆ ಯುದ್ಧ ಸಾರಿತು. ರಾಜಾ ಹರಿಸಿಂಗ್‌ ಭಾರತದ ಆಶ್ರಯಕ್ಕೆ ಬಂದರು.
  • ಭಾರತ ತನ್ನ ಸೇನೆಯನ್ನು ಕಾಶ್ಮೀರಕ್ಕೆ ಕಳುಹಿಸಿ ಕೊಟ್ಟಿತು. ಅದು 1948ರ ಸಮಯ. ಉಭಯ ರಾಷ್ಟ್ರಗಳ ನಡುವಿನ ಮೊದಲ ಯುದ್ಧವದು. ಇದರಲ್ಲಿ ಸೋಲುಂಡಿದ್ದು ಪಾಕಿಸ್ತಾನವೇ. ಕಾಶ್ಮೀರದ ಕೆಲವು ಪ್ರದೇಶದ ಮೇಲೆ ಪಾಕಿಸ್ತಾನ ನಿಯಂತ್ರಣ ಸಾಧಿಸಿದರೆ, ಬಹುತೇಕ ಭಾಗವು ಭಾರತದ ಆಡಳಿತಕ್ಕೆ ಒಳಪಟ್ಟಿತು.

ವಿಶೇಷ ಸ್ಥಾನಮಾನ

  • ಭಾರತ ಒಕ್ಕೂಟ ಸೇರಬೇಕಿದ್ದರೆ ಒಂದಿಷ್ಟು ಭರವಸೆಗಳನ್ನು ಈಡೇರಿಸಬೇಕೆಂಬುದು ಅಂದಿನ ರಾಜಮನೆತನದ ಆಗ್ರಹವಾಗಿತ್ತು. ಇದಕ್ಕೆ ಅಂದಿನ ಪ್ರಧಾನಿ ನೆಹರು ಕೂಡ ಒಪ್ಪಿಗೆ ಸೂಚಿಸಿದ್ದರು. ಇದರ ಪರಿಣಾಮವೇ ಸಂವಿಧಾನದಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಲಾಯಿತು.
  • ರಕ್ಷ ಣೆ, ಹಣಕಾಸು, ಸಂವಹನ ಮತ್ತು ವಿದೇಶಾಂಗ ವ್ಯವಹಾರಗಳನ್ನು ಹೊರತುಪಡಿಸಿ ಉಳಿದ ಎಲ್ಲ ಆಡಳಿತದಲ್ಲಿ ಕಾಶ್ಮೀರವು ಪ್ರತ್ಯೇಕತೆಯನ್ನು ಹೊಂದಿದೆ. ಇದಕ್ಕಾಗಿ ಸಂವಿಧಾನದ ವಿಧಿ 370ರಲ್ಲಿ ಅವಕಾಶ ಕಲ್ಪಿಸಲಾಗಿದೆ. ಇದರನ್ವಯ, ಕಾಶ್ಮೀರವು ತನ್ನದೇ ಸ್ವಂತ ಸಂವಿಧಾನ ಹೊಂದಿದ್ದ, ಕೆಲವೊಂದು ವಿಶೇಷ ಹಕ್ಕುಗಳನ್ನು ಪಡೆದುಕೊಂಡಿದೆ.

ನೆತ್ತರ ಹರಿಸಿದ ಯುದ್ಧಗಳು-

  • ಇಡೀ ಕಾಶ್ಮೀರವನ್ನು ಹೇಗಾದರೂ ಮಾಡಿ ತನ್ನ ತೆಕ್ಕೆಗೆ ತೆಗೆದುಕೊಳ್ಳಲೇಬೇಕೆಂಬ ಪಾಕಿಸ್ತಾನದ ದುರಾಸೆಯಿಂದಾಗಿ ಈವರೆಗೆ ನಾಲ್ಕು ಯುದ್ಧಗಳು ಉಭಯ ರಾಷ್ಟ್ರಗಳ ನಡುವೆ ನಡೆದಿವೆ. ಈ ಪೈಕಿ ಮೂರು ಯುದ್ಧಗಳು ನೇರವಾಗಿ ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದ್ದರೆ, ಒಂದು ಯುದ್ಧವು ಪೂರ್ವ ಪಾಕಿಸ್ತಾನ ವಿಮೋಚನೆಗೆ ಸಂಬಂಧಿಸಿದ್ದಾಗಿದೆ.
  • ವಿಶೇಷ ಎಂದರೆ, ಈ ನಾಲ್ಕೂ ಯುದ್ಧಗಳಲ್ಲಿ ಭಾರತ ಮೇಲುಗೈಯ ಸಾಧಿಸಿದೆ.
  • 1947 ಯುದ್ಧ: ಇದನ್ನು ಮೊದಲನೆಯ ಕಾಶ್ಮೀರ ಯುದ್ಧ ಎಂದು ಕರೆಯಲಾಗುತ್ತದೆ. 1947 ಅಕ್ಟೋಬರ್‌ನಲ್ಲಿ ಆರಂಭವಾದ ಯುದ್ಧ ಏಪ್ರಿಲ್‌ 1948ರವರೆಗೆ ನಡೆಯಿತು. ಅಂತಿಮವಾಗಿ ಕಾಶ್ಮೀರ ಕಣಿವೆ, ಜಮ್ಮು ಮತ್ತು ಲಡಾಕ್‌ ಭಾರತದ ವಶವಾದರೆ, ಪಾಕಿಸ್ತಾನಕ್ಕೆ ಅಜಾದ್‌ ಕಾಶ್ಮೀರ ಮತ್ತು ಗಿಲ್ಗಿಟ್‌-ಬಾಲ್ಟಿಸ್ತಾನ ದಕ್ಕಿದವು. ಜತೆಗೆ ಲೈನ್‌ ಆಫ್‌ ಕಂಟ್ರೋಲ್‌ ಗುರುತಿಲಾಯಿತು.
  • 1965ರ ಯುದ್ಧ: ಪಾಕಿಸ್ತಾನದ ಆಪರೇಷನ್‌ ಗ್ರಿಬ್ರಾಲ್ಟರ್‌ನೊಂದಿಗೆ ಯುದ್ಧ ಕೂಡ ಆರಂಭವಾಯಿತು. ಮೊದಲಿಗೆ ಪಾಕಿಸ್ತಾನದ ಸೇನೆಯ ಕಾಶ್ಮೀರದೊಳಗೆ ನುಸುಳಿತು. ಇದಕ್ಕೆ ಪ್ರತಿಯಾಗಿ ಭಾರತವು ಪೂರ್ಣ ಪ್ರಮಾಣದ ಯುದ್ಧವನ್ನು ಘೋಷಿಸಿತು. 17 ದಿನಗಳ ಕಾಲ ನಡೆದ ಯುದ್ಧದಲ್ಲಿ ಎರಡೂ ಕಡೆ ಅಪಾರ ಸಾವು ನೋವು ಸಂಭವಿಸಿತು. ಅಂತಿಮವಾಗಿ ಪಾಕ್‌ ಅಧ್ಯಕ್ಷ ಅಯೋಬ್‌ ಖಾನ್‌ ಮತ್ತು ಅಂದಿನ ಪ್ರಧಾನಿ ಲಾಲ ಬಹದ್ದೂರ್‌ ಶಾಸ್ತ್ರಿ ತಾಷ್ಕೆಂಟ್‌ನಲ್ಲಿ ತಾಷ್ಕೆಂಟ್‌ ಒಪ್ಪಂದಕ್ಕೆ ಸಹಿ ಹಾಕಿದರು.
  • ಪೂರ್ವ ಪಾಕಿಸ್ತಾನ ವಿಮೋಚನೆ: ಕಾಶ್ಮೀರ ಕಾರಣಕ್ಕಾಗಿ 1971ರ ಯುದ್ಧ ನಡೆಯಲಿಲ್ಲ. ಬದಲಿಗೆ ಪೂರ್ವ ಪಾಕಿಸ್ತಾನ (ಈಗಿನ ಬಾಂಗ್ಲಾದೇಶ) ವಿಮೋಚನೆಗಾಗಿ ನಡೆದ ಈ ಯುದ್ಧವಿದು. ಪಶ್ಚಿಮ ಪಾಕಿಸ್ತಾನದ ದುರಾಡಳಿತಕ್ಕೆ ಬೇಸತ್ತ ಪೂರ್ವ ಪಾಕಿಸ್ತಾನದ ನಾಯಕರು ಬಂಡಾಯವೆದ್ದರು.
  • ಪೂರ್ವ ಪಾಕಿಸ್ತಾನದ ನೆರವಿಗೆ ಧಾವಿಸಿದ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು, ಪೂರ್ವ ಪಾಕಿಸ್ತಾನವನ್ನು ಪಶ್ಚಿಮ ಪಾಕಿಸ್ತಾನದಿಂದ ಬೇರ್ಪಡಿಸುವ ಮೂಲಕ ಭಾರಿ ಹೊಡೆತವನ್ನು ನೀಡಿದರು. ಅಪಾರ ಪ್ರಮಾಣದ ಸಾವು ನೋವು ಸಂಭವಿಸಿತು. ಪಾಕಿಸ್ತಾನದ ನೌಕಾ ಪಡೆ ಮತ್ತು ವಾಯು ಪಡೆ ಇನ್ನಿಲ್ಲದಂತೆ ಘಾಸಿಗೊಂಡವು. ಪಾಕಿಸ್ತಾನದ 90 ಸಾವಿರ ಸೈನಿಕರು ಸೆರೆಯಾಳಾದರು. ಅಂತಿಮವಾಗಿ ಬಾಂಗ್ಲಾದೇಶ ಎಂಬ ಹೊಸ ರಾಷ್ಟ್ರ ಉದಯವಾಯಿತು. ಪಾಕಿಸ್ತಾನ ಇನ್ನಿಲ್ಲದಂತೆ ನಷ್ಟ ಅನುಭವಿಸಿತು.
  • ಕಾರ್ಗಿಲ್‌ ಯುದ್ಧ-1999: ಎಲ್‌ಒಸಿ ದಾಟಿ ಒಳ ನುಗ್ಗಿದ ಪಾಕಿಸ್ತಾನದ ಪಡೆಗಳು ಕಾಶ್ಮೀರ ಕಾರ್ಗಿಲ್‌ ಜಿಲ್ಲೆಯ ಕೆಲವು ಪ್ರದೇಶಗಳನ್ನು ತಮ್ಮ ಹಿಡಿತಕ್ಕೆ ತೆಗೆದುಕೊಂಡರು. ಇದಕ್ಕೆ ಪ್ರತ್ಯುತ್ತರ ನೀಡಿದ ಭಾರತವು ಪೂರ್ಣ ಪ್ರಮಾಣದ ಸೇನಾ ಕಾರ್ಯಾಚರಣೆ ಕೈಗೊಂಡಿತು. ಎರಡು ತಿಂಗಳ ಕಾಲ ಈ ಯುದ್ಧ ನಡೆಯಿತು. ಭಾರತೀಯ ಸೇನೆ ತನ್ನೆಲ್ಲ ಪ್ರದೇಶಗಳನ್ನು ಒಂದೊಂದಾಗಿ ಮರಳಿ ವಶಪಡಿಸಿಕೊಂಡಿತು. ಘನಘೋರ ಯುದ್ಧದ ಸುಳಿವು ಅರಿತ ಅಂತಾರಾಷ್ಟ್ರೀಯ ಸಮುದಾಯವು ಯುದ್ಧ ವಿರಾಮಕ್ಕೆ ಒತ್ತಡ ಹೇರಿದವು. ಯುದ್ಧ ಕೊನೆಯಾಯಿತು. ಎರಡು ಕಡೆ ಅಪಾರ ಸಾವು ನೋವು ಸಂಭವಿಸಿತು.

ಮಾತುಕತೆ, ಒಪ್ಪಂದಗಳು

  • ಕಾಶ್ಮೀರ ಮೇಲಿನ ಹಕ್ಕು ಸಾಧನೆಗೆ ಪಾಕಿಸ್ತಾನ ಆಗಾಗ ಯುದ್ಧಕ್ಕೆ ಮುಂದಾದರೂ ಭಾರತವು ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಅನೇಕ ಒಪ್ಪಂದ ಮತ್ತು ಮಾತುಕತೆಗಳನ್ನು ಆ ರಾಷ್ಟ್ರದ ಜತೆ ಕೈಗೊಂಡಿದೆ. ಈ ಪೈಕಿ ಕೆಲವು ಯಶಸ್ವಿಯಾದರೆ, ಬಹುತೇಕ ವಿಫಲವಾಗಿವೆ.
  • ಶಿಮ್ಲಾ ಒಪ್ಪಂದ: 1971ರ ಯುದ್ಧದಲ್ಲಿ ಪಾಕಿಸ್ತಾನ ಸೋತ ನಂತರ ಏರ್ಪಟ್ಟ ಒಪ್ಪಂದವಿದು. ಪಾಕ್‌ ಅಧ್ಯಕ್ಷ ಝುಲ್ಫಿಕರ್‌ ಅಲಿ ಭುಟ್ಟೊ ಮತ್ತು ಪ್ರಧಾನಿ ಇಂದಿರಾ ಗಾಂಧಿ ಅವರು ಶಿಮ್ಲಾದಲ್ಲಿ ಒಪ್ಪಂದಕ್ಕೆ ಸಹಿ ಹಾಕಿದರು. ಅದರ ಅನ್ವಯ ಭಾರತವು ಸೆರೆಯಾಳಾಗಿಸಿಕೊಂಡಿದ್ದ ಎಲ್ಲ ಪಾಕ್‌ ಸೈನಿಕರನ್ನು ಬಿಟ್ಟಕೊಡುವುದು. ಉಭಯ ರಾಷ್ಟ್ರಗಳ ನಡುವಿನ ಸಮಸ್ಯೆಯನ್ನು ಮಾತುಕತೆಯ ಮೂಲಕ ನಡೆಸಬೇಕೆಂದು ಕರಾರು ಮಾಡಲಾಯಿತು.
  • 1990ರ ದಶಕ: ಈ ಅವಧಿಯಲ್ಲಿ ಉಭಯ ರಾಷ್ಟ್ರಗಳ ಪ್ರಧಾನಿಗಳು ಎರಡು ಬಾರಿ ಭೇಟಿಯಾಗಿ ಮಾತುಕತೆ ನಡೆಸಿದರು. ಹಾಗೆಯೇ ವಿದೇಶಾಂಗ ಕಾರ್ಯದರ್ಶಿಗಳು ಮೂರು ಸುತ್ತಿನ ಮಾತುಕತೆ ನಡೆಸಿದರು. ಕಾಶ್ಮೀರ ಸಮಸ್ಯೆ ಸೇರಿದಂತೆ ಒಟ್ಟು 8 ವಿಷಯಗಳ ಬಗ್ಗೆ ಚರ್ಚಿಸಲಾಯಿತು. 1997ರಲ್ಲಿ ನಡೆದ ಮಾತುಕತೆ ವಿಫಲವಾದರೆ(ಕಾಶ್ಮೀರ ವಿಷಯಕ್ಕಾಗಿ), 1999ರಲ್ಲಿ ಕೈಗೊಳ್ಳಲಾದ ಪ್ರಯತ್ನದಲ್ಲಿ ಉಭಯ ಪ್ರಧಾನಿಗಳು ಲಾಹೋರ್‌ನಲ್ಲಿ ಮಾತುಕತೆ ನಡೆಸಿ ಮೂರು ಒಪ್ಪಂದಕ್ಕೆ ಸಹಿ ಹಾಕಿದದರು. ಆದರೆ, ಪಾಕಿಸ್ತಾನದಲ್ಲಿ ಸೇನಾಡಳಿತ ಅಸ್ತಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ಎಲ್ಲ ಮಾತುಕತೆಗಳು ವಿಫಲಗೊಂಡವು.
  • ಲಾಹೋರ್‌ಗೆ ಬಸ್‌: ಶಾಂತಿಯ ಸಂದೇಶ ಹೊತ್ತು ಅಂದಿನ ಪ್ರಧಾನಿ ವಾಜಪೇಯಿ ಅವರು 1999ರಲ್ಲಿ ಲಾಹೋರ್‌ ಬಸ್‌ ಯಾತ್ರೆಯನ್ನು ಕೈಗೊಂಡರು. ಫೆಬ್ರವರಿ 21ರಂದು ಉಭಯ ರಾಷ್ಟ್ರಗಳು ಒಪ್ಪಂದಕ್ಕೆ ಸಹಿ ಹಾಕಿದವು. ಆದರೆ, ಬಸ್‌ ಯಾತ್ರೆ ಮುಗಿಸಿ ವಾಪಸ್‌ ಬರುವಷ್ಟರಲ್ಲಿ ಪಾಕಿಸ್ತಾನದ ಸೇನಾ ಪಡೆಗಳು ಕಾರ್ಗಿಲ್‌ನೊಳಗೆ ನುಸುಳಿಕೊಂಡಿದ್ದವು. ಇದೇ ಮುಂದೆ ಕಾರ್ಗಿಲ್‌ ಯುದ್ಧಕ್ಕೆ ಕಾರಣವಾಯಿತು.

ಭಯೋತ್ಪಾದನೆ-

  • ಯುದ್ಧದ ಮೂಲಕ ಭಾರತದ ಮೇಲೆ ಸವಾರಿ ಮಾಡಲು ಸಾಧ್ಯವಿಲ್ಲ ಎಂಬುದು ಗೊತ್ತಾಗತ್ತಿದ್ದಂತೆ ಪಾಕಿಸ್ತಾನದ ಸೇನೆ ಭಯೋತ್ಪಾದನೆಗೆ ನೀರೇರಿಯಿತು. ಇದಕ್ಕೆ ಕಾಶ್ಮೀರ ಪ್ರತ್ಯೇಕವಾದಿಗಳೂ ಇಂಬು ನೀಡಿದರು. ಸ್ಥಳೀಯರ ಭಾರತ ವಿರೋಧಿ ಭಾವನೆಯನ್ನೆ ಬಂಡವಾಳವಾಗಿಸಿಕೊಂಡ ಅಲ್ಲಿನ ಸೇನೆ ಉಗ್ರ ಸಂಘಟನೆಗಳು ಎಲ್ಲ ಸಹಕಾರ, ನೆರವು ಒದಗಿಸಿತು.
  • ಈ ವಿಷಯ ಪ್ರತಿ ಭಯೋತ್ಪಾದನೆ ಸಂದರ್ಭದಲ್ಲಿ ಸಾಬೀತಾಗಿದೆ. ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಬಲಿಯಾದ ಸೈನಿಕರು, ನಾಗರಿಕರ ಪಟ್ಟಿ ದೊಡ್ಡದಿದೆ. ಜೈಷೆ ಇ ಮೊಹಮ್ಮದ್‌ ಉಗ್ರ ಸಂಘಟನೆ ದಾಳಿಗೆ 2017ರಿಂದ 2019ವರೆಗಿನ ಫೆಬ್ರವರಿ 14ರ ವರೆಗೆ 110ಕ್ಕೂ ಹೆಚ್ಚು ಯೋಧರು ಬಲಿಯಾದರೆ, ಉಗ್ರರನ್ನೂ ಸೇನೆ ಸದೆ ಬಡೆದಿದೆ. ಇದು ಕೇವಲ ಉದಾಹರಣೆಯಷ್ಟೆ. ಒಂದು ಅಂದಾಜಿನ ಪ್ರಕಾರ, 1947ರಿಂದ ಇಲ್ಲಿಯವರೆಗೆ ಯೋಧರು, ನಾಗರಿಕರು ಸೇರಿ 40 ಸಾವಿರದಿಂದ 80 ಸಾವಿರವರೆಗೂ ಜನ ಸತ್ತಿದ್ದಾರೆ.
Related Posts
15th  ಮಾರ್ಚ್ 2018 ಕನ್ನಡ ಪ್ರಚಲಿತ ವಿದ್ಯಮಾನ
ಚೀನಾ ಗಡಿ ಬಳಿ ಐತಿಹಾಸಿಕ ಲ್ಯಾಂಡಿಂಗ್ ಆಯಕಟ್ಟಿನ ಗಡಿ ಭಾಗದಲ್ಲಿ ಕಾರ್ಯತಂತ್ರ ಬಲಿಷ್ಠಗೊಳಿಸುತ್ತಿರುವ ಭಾರತೀಯ ವಾಯುಪಡೆ ಚೀನಾ ಗಡಿಯಿಂದ ಕೇವಲ 30 ಕಿ.ಮೀ. ದೂರದಲ್ಲಿರುವ ಅರುಣಾಚಲ ಪ್ರದೇಶದ ಟ್ಯುಟಿಂಗ್​ನಲ್ಲಿ ಅತಿ ದೊಡ್ಡ ಸರಕು ಸಾಗಣೆ ವಿಮಾನ ಸಿ-17 ಗ್ಲೋಬಲ್​ವಾಸ್ಟರ್ ಅನ್ನು ಇಳಿಸುವ ಮೂಲಕ ...
READ MORE
“24th  ಅಕ್ಟೋಬರ್  2018ರ ಕನ್ನಡ ಪ್ರಚಲಿತ ವಿದ್ಯಮಾನ”
‘ಶಾಲಾ -ಸಂಪರ್ಕ ಸೇತು’ ಯೋಜನೆ ಸುದ್ಧಿಯಲ್ಲಿ ಏಕಿದೆ ? ಮಲೆನಾಡು, ಕರಾವಳಿ ಭಾಗದ ಬೆಟ್ಟ ಗುಡ್ಡಗಳ ಪ್ರದೇಶಗಳಲ್ಲಿ ವಾಸಿಸುವ ಜನರು ವಿಶೇಷವಾಗಿ ಶಾಲಾ ಮಕ್ಕಳು ಮಳೆಗಾಲದಲ್ಲಿ ಅಪಾಯಕಾರಿ ತೋಡು, ಹಳ್ಳ -ಕೊಳ್ಳ ದಾಟುವ ಪ್ರಯಾಸವನ್ನು ಶಾಶ್ವತವಾಗಿ ಪರಿಹರಿಸಲು 'ಶಾಲಾ -ಸಂಪರ್ಕ ಸೇತು' ಎಂಬ ...
READ MORE
“20 ಅಕ್ಟೋಬರ್  2018ರ  ಕನ್ನಡ ಪ್ರಚಲಿತ ವಿದ್ಯಮಾನ”
ಗಿಡ ಬೆಳೆಸಿ ಅಂಕ ಗಳಿಸಿ! ಯೋಜನೆ ಸುದ್ಧಿಯಲ್ಲಿ ಏಕಿದೆ ?ಇನ್ನು ಮುಂದೆ 8ರಿಂದ 10ನೇ ತರಗತಿಯವರೆಗೆ ಸರ್ಕಾರಿ ಶಾಲೆಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಗಿಡಗಳನ್ನು ನೆಟ್ಟು ಚೆನ್ನಾಗಿ ಪೋಷಿಸಿದರೆ ಅಂಕಗಳನ್ನು ಪಡೆಯಬಹುದು. ಅರಣ್ಯ, ಪರಿಸರ ಮತ್ತು ಜೈವಿಕ ಇಲಾಖೆ ಈ ಸಂಬಂಧ ಸದ್ಯದಲ್ಲಿಯೇ ...
READ MORE
” 07 ಡಿಸೆಂಬರ್ 2018 ರ ಕನ್ನಡ ಪ್ರಚಲಿತ ವಿದ್ಯಮಾನಗಳು”
ಮಾತೃಪೂರ್ಣ ಯೋಜನೆ  ಸುದ್ಧಿಯಲ್ಲಿ ಏಕಿದೆ ? ಪೌಷ್ಟಿಕ ಆಹಾರ ಒದಗಿಸಿ ತಾಯಿ, ಮಗುವಿನ ಅಪೌಷ್ಟಿಕತೆ ನಿವಾರಿಸುವ ಉದ್ದೇಶದಿಂದ ರಾಜ್ಯದಲ್ಲಿ ಆರಂಭಗೊಂಡ ‘ಮಾತೃಪೂರ್ಣ’ ಯೋಜನೆ ಪೂರ್ಣ ಫಲ ನೀಡುವಲ್ಲಿ ವಿಫಲವಾಗಿದೆ. ವಿಫಲವಾಗಲು ಕಾರಣ ರಾಜ್ಯದಲ್ಲಿ 61 ಸಾವಿರ ಅಂಗನವಾಡಿ ಕೇಂದ್ರಗಳಿದ್ದು, ಅಂದಾಜು 25 ಲಕ್ಷ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ...
READ MORE
3rd ಮಾರ್ಚ್ 2018 ಕನ್ನಡ ಪ್ರಚಲಿತ ವಿದ್ಯಮಾನ
ನೌಕಾ ಪಡೆ ಸಮರಾಭ್ಯಾಸ ಮುಕ್ತಾಯ ಅರಬ್ಬಿ ಸಮುದ್ರದಲ್ಲಿ ಭಾರತೀಯ ನೌಕಾಪಡೆ ಮೂರು ವಾರಗಳ ಕಾಲ ಕೈಗೊಂಡ ಸಮರಾಭ್ಯಾಸ ಕೊನೆಗೊಂಡಿದೆ. ದೇಶದ ಪಶ್ಚಿಮ ಸಮುದ್ರದಲ್ಲಿರುವ ಪ್ರತಿಕೂಲ ಸನ್ನಿವೇಶಗಳನ್ನು ಎದುರಿಸುವ ಕುರಿತು ವ್ಯೂಹ ರಚನೆ ಮತ್ತು ಯುದ್ಧದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕಾರ್ಯಾಚರಣೆ ಯೋಜನೆಗಳ ಬಗ್ಗೆ ನೌಕಾ ಪಡೆ ...
READ MORE
“08 ಮಾರ್ಚ್  2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”
ಬಿಳಿಗಿರಿ ಬೆಟ್ಟದಲ್ಲಿ ಅಪರೂಪದ ಸಸ್ತನಿ ಪತ್ತೆ ಸುದ್ಧಿಯಲ್ಲಿ ಏಕಿದೆ ?ನಾಗರಹೊಳೆ, ಬಂಡೀಪುರ ಸೇರಿ ವಿವಿಧ ದಟ್ಟ ಕಾನನಗಳ ನಾಡು ಇದೀಗ ಅಪರೂಪದ ಸಸ್ತನಿಯ ಇರುವಿಕೆ ದೃಢಪಟ್ಟಿದೆ. ಸಾಮಾನ್ಯವಾಗಿ ಪಶ್ಚಿಮ ಘಟ್ಟದ ವಿರಾಜಪೇಟೆ ಭಾಗದಲ್ಲಿರುವ ಸೆಂಡಿಲಿ ಕೀರ(ಬ್ರೌನ್‌ ಮಂಗೂಸ್‌ ಅಥವಾ Herpestes fuscus) ಪ್ರಾಣಿ ಇದೀಗ ...
READ MORE
“20 ಡಿಸೆಂಬರ್ 2018 ರ ಕನ್ನಡ ಪ್ರಚಲಿತ ವಿದ್ಯಮಾನಗಳು”
ಸ್ತ್ರೀಯರಿಗೆ ಕಾಯಕ ಶಕ್ತಿ! ಸುದ್ಧಿಯಲ್ಲಿ ಏಕಿದೆ ?ಬಡವರ ಬಂಧು, ಋಣ ಪರಿಹಾರ ಕಾಯ್ದೆಗಳ ಮೂಲಕ ಬಡವರ ನೆರವಿಗೆ ಬಂದ ಸರ್ಕಾರ, ಮಹಿಳಾ ಮತದಾರರಿಗಾಗಿ ರೂಪಿಸಿರುವ ಕಾಯಕ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದೆ. ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಮಹಿಳೆಯರಿಗೆ ಮುಂದಿನ ಐದು ವರ್ಷಗಳಲ್ಲಿ ಪ್ರತಿ ...
READ MORE
“24 ನವೆಂಬರ್ 2018 ರ ಕನ್ನಡ ಪ್ರಚಲಿತ ವಿದ್ಯಮಾನಗಳು”
ವಿಶ್ವ ತುಳು ಸಮ್ಮೇಳನ ಸುದ್ಧಿಯಲ್ಲಿ ಏಕಿದೆ ?ಕಡಲಾಯೆರೆದ ತುಳುವೆರ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಅಖಿಲ ಭಾರತ ತುಳು ಒಕ್ಕೂಟ ಸಹಕಾರದಲ್ಲಿ ದುಬೈಯ ಅಲ್ ನಾಸರ್ ಎರಡು ದಿನಗಳ ವಿಶ್ವ ತುಳು ಸಮ್ಮೇಳನ ಲೀಸರ್ ಲ್ಯಾಂಡ್ ಐಸ್‌ರಿಂಕ್ ಒಳಾಂಗಣ ಸಭಾಂಗಣದಲ್ಲಿ ಆಯೋಜಿಸಲಾಗಿರುವ ಉದ್ಘಾಟನಾ ಸಮಾರಂಭ ...
READ MORE
” 28 ಡಿಸೆಂಬರ್ 2018 ರ ಕನ್ನಡ ಪ್ರಚಲಿತ ವಿದ್ಯಮಾನಗಳು”
ಡಿಎಲ್, ಆರ್​ಸಿ ಡಿಜಿಟಲ್ ದಾಖಲೆ ಪರೀಕ್ಷಿಸಲು ಮಾರ್ಗಸೂಚಿ ಸುದ್ಧಿಯಲ್ಲಿ ಏಕಿದೆ ?ವಾಹನ ಚಾಲಕರು ಸಲ್ಲಿಸುವ ಡಿಜಿಟಲ್ ಮಾದರಿ ದಾಖಲೆಗಳು ಅಸಲಿಯೋ ನಕಲಿಯೋ ಎಂದು ಪರೀಕ್ಷಿಸಲು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹಲವು ಮಾರ್ಗಸೂಚಿ (ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್- ಎಸ್​ಒಪಿ) ರೂಪಿಸಿದೆ. ಎಸ್​ಒಪಿ ...
READ MORE
“30 ಜನವರಿ  2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”
ಎಚ್‌1ಎನ್‌1 ಮುಂಜಾಗ್ರತೆಗೆ ಸೂಚನೆ ಸುದ್ಧಿಯಲ್ಲಿ ಏಕಿದೆ ?ರಾಜ್ಯದಲ್ಲಿ ವರ್ಷದ ಆರಂಭದಲ್ಲೇ ಎಚ್‌1ಎನ್‌1 ಜ್ವರ ಭೀತಿ ಸೃಷ್ಟಿಸಿರುವುದರಿಂದ ಅಗತ್ಯ ಔಷಧಗಳ ದಾಸ್ತಾನು ಮೂಲಕ ಶಂಕಿತ ರೋಗಿಗಳಿಗೆ 48 ಗಂಟೆಯೊಳಗೆ ಟ್ಯಾಮಿಫ್ಲೂ ಚಿಕಿತ್ಸೆ ಪ್ರಾರಂಭಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ. ಏಕೆ ಈ ಸೂಚನೆ ...
READ MORE
15th ಮಾರ್ಚ್ 2018 ಕನ್ನಡ ಪ್ರಚಲಿತ ವಿದ್ಯಮಾನ
“24th ಅಕ್ಟೋಬರ್ 2018ರ ಕನ್ನಡ ಪ್ರಚಲಿತ ವಿದ್ಯಮಾನ”
“20 ಅಕ್ಟೋಬರ್ 2018ರ ಕನ್ನಡ ಪ್ರಚಲಿತ ವಿದ್ಯಮಾನ”
” 07 ಡಿಸೆಂಬರ್ 2018 ರ ಕನ್ನಡ ಪ್ರಚಲಿತ ವಿದ್ಯಮಾನಗಳು”
3rd ಮಾರ್ಚ್ 2018 ಕನ್ನಡ ಪ್ರಚಲಿತ ವಿದ್ಯಮಾನ
“08 ಮಾರ್ಚ್ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”
“20 ಡಿಸೆಂಬರ್ 2018 ರ ಕನ್ನಡ ಪ್ರಚಲಿತ ವಿದ್ಯಮಾನಗಳು”
“24 ನವೆಂಬರ್ 2018 ರ ಕನ್ನಡ ಪ್ರಚಲಿತ ವಿದ್ಯಮಾನಗಳು”
” 28 ಡಿಸೆಂಬರ್ 2018 ರ ಕನ್ನಡ ಪ್ರಚಲಿತ ವಿದ್ಯಮಾನಗಳು”
“30 ಜನವರಿ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

Leave a Reply

Your email address will not be published. Required fields are marked *