Published on: March 14, 2022

‘ಕಂದಾಯ ದಾಖಲೆ ರೈತರ ಮನೆ ಬಾಗಿಲಿಗೆ’ ಯೋಜನೆ

‘ಕಂದಾಯ ದಾಖಲೆ ರೈತರ ಮನೆ ಬಾಗಿಲಿಗೆ’ ಯೋಜನೆ

ಸುದ್ಧಿಯಲ್ಲಿ ಏಕಿದೆ ? ಪಹಣಿ, ಅಟ್ಲಾಸ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸೇರಿದಂತೆ ಕಂದಾಯ ಇಲಾಖೆಯ ವಿವಿಧ ದಾಖಲೆಗಳನ್ನು ನೇರವಾಗಿ ರೈತರು ಮತ್ತು ಸಾರ್ವಜನಿಕರ ಮನೆ ಬಾಗಿಲಿಗೆ ತಲುಪಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ವಿನೂತನ ಯೋಜನೆಯಾದ  ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿಕ್ಕಬಳ್ಳಾಪುರ ತಾಲ್ಲೂಕಿನ ಪೋಶೆಟ್ಟಿಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗುಂಗಿರ್ಲಹಳ್ಳಿ ಗ್ರಾಮದಿಂದ ಚಾಲನೆ ನೀಡಿದರು.

ಮುಖ್ಯಾಂಶಗಳು

  • ಈ ವಿಶಿಷ್ಟ ಯೋಜನೆಯ ಮೂಲಕ ರಾಜ್ಯದ ಸುಮಾರು 55 ಲಕ್ಷ ರೈತರಿಗೆ 5 ಕೋಟಿ ವಿವಿಧ ಕಂದಾಯ ದಾಖಲೆಗಳನ್ನು ಒಂದೇ ದಿನದಲ್ಲಿ ರಾಜ್ಯದ್ಯಂತ ಉಚಿತವಾಗಿ ವಿತರಿಸಲಾಗುತ್ತಿದೆ. ಇದು ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಹೆಜ್ಜೆಯಾಗಿದ್ದು, ಮುಂದಿನ ದಿನಗಳಲ್ಲಿ ದೊಡ್ಡ ಕಂದಾಯ ಕ್ರಾಂತಿಗೆ ಸಾಕ್ಷಿಯಾಗಲಿದೆ.

ಅನುಕೂಲಗಳು

  • ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಯಿಂದ ರೈತರು ಮತ್ತು ಸಾರ್ವಜನಿಕರು ಕಚೇರಿಗಳಿಗೆ ಪದೇ ಪದೇ ಸುತ್ತಾಡುವುದು ತಪ್ಪುತ್ತದೆ. ಕಂದಾಯ ದಾಖಲೆಗಳು ನೇರವಾಗಿ ರೈತರ ಮನೆಬಾಗಿಲಿಗೆ ತಲುಪುವುದರಿಂದ ರೈತರಿಗೆ ಸರ್ಕಾರದ ಖಾತ್ರಿಯೊಂದಿಗೆ ದಾಖಲೆಗಳು ಅಧಿಕೃತವಾಗಿ ಮತ್ತು ಸುಲಭವಾಗಿ ಕೈ ಸೇರಿ ಹೆಚ್ಚಿನ ಅನುಕೂಲವಾಗಲಿದೆ
  • ‘ಅಲೆದಾಟ ಬೇಕಿಲ್ಲ ಇಂದು ನಾಳೆ ಸುತ್ತಾಟವಿಲ್ಲ ಬಂತು ನೋಡಿ ಮನೆ ಬಾಗಿಲಿಗೆ ದಾಖಲೆ’ ಎಂಬ ವಾಕ್ಯದೊಂದಿಗೆ ಕಂದಾಯ ದಾಖಲೆ ಮನೆಬಾಗಿಲಿಗೆ ನಿಮ್ಮ ದಾಖಲೆ ಎಂಬ ವಿನೂತನ ಯೋಜನೆಯನ್ನು ಇಂದು ರಾಜ್ಯಾದ್ಯಂತ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ.