Published on: June 6, 2022
ವಿದ್ಯುತ್ ಅದಾಲತ್
ವಿದ್ಯುತ್ ಅದಾಲತ್
ಸುದ್ಧಿಯಲ್ಲಿ ಏಕಿದೆ?
ರಾಜ್ಯದಲ್ಲಿ ಪ್ರತಿ 3ನೇ ಶನಿವಾರ ವಿದ್ಯುತ್ ಅದಾಲತ್ ನಡೆಸಬೇಕು ಎಂದು ಇಂಧನ ಸಚಿವ ಸುನೀಲ್ ಕುಮಾರ್ಅವರು ಸೂಚನೆ ನೀಡಿದ್ದಾರೆ.
ಮುಖ್ಯಾಂಶಗಳು
- ಯಾವಾಗ? ಪ್ರತಿ ತಿಂಗಳ 3ನೇ ಶನಿವಾರ
- ಯಾರೆಲ್ಲ ಭಾಗವಹಿಸಬೇಕು? ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸೇರಿದಂತೆ ಎಲ್ಲ ಅಧಿಕಾರಿಗಳು ತಾಲೂಕಿನ ಕೊನೇ ಹಳ್ಳಿವರೆಗೆ ಭೇಟಿ ನೀಡಬೇಕು.
ಉದ್ದೇಶ
- ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್ ಸಮಸ್ಯೆಗಳ ಬಗ್ಗೆ ಅರಿತು, ತಕ್ಷಣ ಪರಿಹಾರ ಮಾಡಲು ಆಂದೋಲನ ರೀತಿಯ ಕಾರ್ಯಕ್ರಮ ರೂಪಿಸಬೇಕು.
ಎಲ್ಲ ಹಳ್ಳಿಗಳಿಗೆ ಭೇಟಿ :
- ಕಾರ್ಯಕ್ರಮದಲ್ಲಿ ವ್ಯವಸ್ಥಾಪಕ ನಿರ್ದೇಶಕರಮಟ್ಟದ ಅಧಿಕಾರಿಗಳಿಂದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ವರೆಗಿನ ಅಧಿಕಾರಿಗಳು ತಾಲೂಕಿನ ಕೊನೇ ಹಳ್ಳಿವರೆಗೆ ಹೋಗಿ, ಸಮಸ್ಯೆ ಆಲಿಸಿ, ಪರಿಹಾರ ನೀಡಬೇಕು. ಎಲ್ಲರೂ ಒಂದೇ ಹಳ್ಳಿಗೆ ಭೇಟಿ ನೀಡದೆ, ಬೇರೆ ಹಳ್ಳಿಗಳಿಗೆ ಭೇಟಿ ನೀಡಬೇಕು
ಇ-ಮೇಲ್ ಮೂಲಕ ಸರ್ಕಾರಕ್ಕೆ ವಿವರ :
-
ವಿವಿಧ ಹಂತದ ಅಧಿಕಾರಿಗಳು ಒಂದೇ ಹಳ್ಳಿಗೆ ಭೇಟಿ ನೀಡದೆ, ಬೇರೆ ಹಳ್ಳಿಗಳಿಗೆ ಭೇಟಿ ನೀಡಿ, ಅಭಿಯಾನವನ್ನು ಕಾಲಮಿತಿಯಲ್ಲಿ ಮುಕ್ತಾಯಗೊಳಿಸಬೇಕು. ಅಭಿಯಾನದ ವಿವರಗಳನ್ನು ಪ್ರತಿ ತಿಂಗಳು ನಿಗದಿತ ನಮೂನೆಯಲ್ಲಿ ನಮೂದಿಸಿ, ಮಾಹಿತಿಯನ್ನು ಸಂಬಂಧಪಟ್ಟ ವ್ಯವಸ್ಥಾಪಕ ನಿರ್ದೇಶಕರಿಗೆ ಕಳುಹಿಸಬೇಕು.