Published on: June 8, 2022
ಸುದ್ಧಿ ಸಮಾಚಾರ – 08 ಜೂನ್ 2022
ಸುದ್ಧಿ ಸಮಾಚಾರ – 08 ಜೂನ್ 2022
- ಹಸಿರು ಉಪಕ್ರಮನ್ನು ಉತ್ತೇಜಿಸಲು ಬಿಎಂಆರ್’ಸಿಎಲ್ ಶುಲ್ಕ ವಿನಾಯಿತಿಯೊಂದಿಗೆ ಮಡಚಬಹುದಾದ ಸೈಕಲ್ ಜೊತೆಗೆ ಪ್ರಯಾಣಿಸಲು ಪ್ರಯಾಣಿಕರಿಗೆ ಅನುಮತಿ ನೀಡಿದೆ.
- ರಾಜ್ಯ ರಾಜಧಾನಿ ಬೆಂಗಳೂರಿನಿಂದ ಸುಮಾರು 27 ಕಿ.ಮೀ ದೂರದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಪಟ್ಟಣವನ್ನು ಎಲ್ಲಾ ಮೂಲಸೌಕರ್ಯಗಳೊಂದಿಗೆ ಸ್ಯಾಟಲೈಟ್ ಟೌನ್ ಆಗಿ ಶೀಘ್ರದಲ್ಲೇ ಅಭಿವೃದ್ಧಿಪಡಿಸಲಾಗುತ್ತದೆ
- ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು (IIMB) ಜಾಗತಿಕ ಅತ್ಯುತ್ತಮ ಪ್ರವರ್ತಕ ವ್ಯಾಪಾರ ಶಾಲೆಗಳಲ್ಲಿ ಒಂದಾಗಿದೆ.
- ಕರ್ನಾಟಕದ ಗ್ರಾಮೀಣ ಭಾಗಗಳಲ್ಲಿ ಸಾಂಕ್ರಾಮಿಕ ರೋಗಗಳ ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ರೋಟರಿ ಬೆಂಗಳೂರು ಹೈಗ್ರೌಂಡ್ಸ್, ಇನ್ಫೋಸಿಸ್ ಫೌಂಡೇಶನ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಸಿಎಸ್ಆರ್ ಯೋಜನೆ ಒದಗಿಸಿರುವ ಲ್ಯಾಬ್ ಬಿಲ್ಟ್ ಆನ್ ವೀಲ್ಸ್ – ಮೊಬೈಲ್ ಕ್ಲಿನಿಕ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಉದ್ಘಾಟಿಸಿದರು.
- ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (ಎಫ್ಎಸ್ಎಸ್ಎಐ)ನಾಲ್ಕನೇ ರಾಜ್ಯ ಆಹಾರ ಸುರಕ್ಷತಾ ಸೂಚ್ಯಂಕ 2021-22ರ ವರದಿ ಬಿಡುಗಡೆಯಾಗಿದ್ದು, ಗುಜರಾತ್ ರಾಜ್ಯವನ್ನು ಹಿಂದಿಕ್ಕಿ ತಮಿಳುನಾಡು ಅಗ್ರ ಸ್ಥಾನಕ್ಕೇರಿದೆ.
- ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥರ (ಡಿಸಿಎಸ್) ನೇಮಕಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ನಿಯಮಗಳನ್ನು ಸಡಿಲಗೊಳಿಸಿದ್ದು, 62 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮೂರು ಸೇನೆಗಳಲ್ಲಿ ಯಾವುದೇ ಸೇವೆ ಸಲ್ಲಿಸುತ್ತಿರುವ ಅಥವಾ ನಿವೃತ್ತ ಲೆಫ್ಟಿನೆಂಟ್ ಜನರಲ್, ಏರ್ ಮಾರ್ಷಲ್ ಮತ್ತು ವೈಸ್ ಅಡ್ಮಿರಲ್ ಸಹ ಸಿಡಿಎಸ್ ಹುದ್ದೆಗೆ ಅರ್ಹರಾಗಿರುತ್ತಾರೆ ಎಂದು ಹೇಳಿದೆ.
- UPI (ಯುನೈಟೆಡ್ ಪೇಮೆಂಟ್ಸ್ ಇಂಟರ್ಫೇಸ್) ಪ್ಲಾಟ್ಫಾರ್ಮ್ ಮತ್ತು ಡಿಜಿಟಲ್ ಪಾವತಿಗಳನ್ನು ಉತ್ತೇಜಿಸುವ ಉದ್ದೇಶದಿಂದ, ಭಾರತೀಯ ರಿಸರ್ವ್ ಬ್ಯಾಂಕ್ (RBI) ಬುಧವಾರ UPI ಅಡಿಯನಲ್ಲಿ ಕ್ರೆಡಿಟ್ ಕಾರ್ಡ್ ಗಳ ಜೋಡಣೆಗೆ ಅನುವು ಮಾಡಿಕೊಡಲು ಪ್ರಸ್ತಾವನೆ ಸಲ್ಲಿಸಿದೆ.
- ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಸಾಲ ನೀಡುವ ದರವನ್ನು ಅಂದರೆ ರೆಪೊ ದರವನ್ನು ಶೇಕಡಾ 4.90ಕ್ಕೆ ಏರಿಸಿದೆ. ಆರ್ಬಿಐ ‘withdrawal of accommodation’ ನೀತಿಯ ನಿಲುವನ್ನು ಉಳಿಸಿಕೊಳ್ಳಲು ಸರ್ವಾನುಮತದಿಂದ ನಿರ್ಧರಿಸಿದೆ.
- ಶಾಂತಿ, ಸ್ಥಿರತೆಯ ಹಿತಾಸಕ್ತಿಗಳಿಗೆ ಧಕ್ಕೆ ಉಂಟು ಮಾಡುವ ಯಾವುದೇ ಪ್ರಚೋದನಕಾರಿ ನಡೆಯನ್ನು ತಡೆಗಟ್ಟಬೇಕು ಹಾಗೂ ಇಸ್ಲಾಮೋಫೋಬಿಯಾವನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಭಾರತ ಕೈ ಜೋಡಿಸಬೇಕು ಎಂದು ಮಲೇಷ್ಯಾ ಕರೆ ನೀಡಿದೆ
- ಟೋಕಿಯೊ ಪ್ಯಾರಾಲಿಂಪಿಕ್ಸ್ ನ ಚಾಂಪಿಯನ್ ಅವನಿ ಲೇಖರಾ ಅವರು ಇದೀಗ ಫ್ರಾನ್ಸ್ ನ ಚಟಿರಾಕ್ಸ್ ನಲ್ಲಿ ನಡೆಯುತ್ತಿರುವ ಪ್ಯಾರಾ ಶೂಟಿಂಗ್ ವಿಶ್ವಕಪ್ ನ ವನಿತೆಯ 10 ಮೀ. ಏರ್ ರೈಫಲ್ ಸ್ಟಾಂಡಿಂಗ್ ಎಸ್ಎಚ್ 1ರಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.
- ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಗೆ ವಿದಾಯ ಹೇಳಿದ್ದಾರೆ.