Published on: June 29, 2022
ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ
ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ
ಸುದ್ದಿಯಲ್ಲಿ ಏಕಿದೆ?
ಸೇನೆಗೆ ಸೇರುವ ರಾಜ್ಯದ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಉಚಿತವಾಗಿ ತರಬೇತಿ ನೀಡಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ತರಬೇತಿ ಶಾಲೆ ಆರಂಭಿಸಲು ನಿರ್ಧರಿಸಿದೆ.
ಮುಖ್ಯಾಂಶಗಳು
- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ್ತಿ ವೀರರಾಣಿ ಅಬ್ಬಕ್ಕ, ಉಡುಪಿ ಜಿಲ್ಲೆಯಲ್ಲಿ ತುಳುನಾಡಿನ ವೀರಪುರುಷರಾದ ಕೋಟಿ ಚೆನ್ನಯ, ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಹೆಂಜಾ ನಾಯಕ ಹೆಸರಿನಲ್ಲಿ ತರಬೇತಿ ಶಾಲೆ ಆರಂಭಿಸಲು ಆದೇಶ ಹೊರಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳ ತರಬೇತಿಗೆ ತಗಲುವ ವೆಚ್ಚವನ್ನು ಇಲಾಖೆಯಿಂದ, ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ತಗಲುವ ವಾರ್ಷಿಕ ವೆಚ್ಚ ₹50 ಲಕ್ಷವನ್ನು ಸಮಾಜ ಕಲ್ಯಾಣ ಇಲಾಖೆಯಿಂದಲೇ ಭರಿಸುವ ಬಗ್ಗೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
- 4ತಿಂಗಳ ವಸತಿಯುತ ತರಬೇತಿ’: ಇದು 4 ತಿಂಗಳ ವಸತಿಯುತ ತರಬೇತಿ. ತಲಾ 100 ಅಭ್ಯರ್ಥಿಗಳಿಗೆ ಅವಕಾಶ ನೀಡುವ ಚಿಂತನೆ ಇದೆ.
ಉದ್ದೇಶ
-
ಕರಾವಳಿ ಭಾಗದಿಂದ ಹಲವು ಮಂದಿ ಮಿಲಿಟರಿ ಸೇವೆಗೆ ಸೇರಲು ಪ್ರಯತ್ನಿಸಿದರೂ ನಾನಾ ಕಾರಣದಿಂದ ವಿಫಲರಾಗುತ್ತಾರೆ. ಅವರನ್ನು ದೈಹಿಕ ಮತ್ತು ಲಿಖಿತ ಪರೀಕ್ಷೆಗೆ ತರಬೇತುಗೊಳಿಸುವ ಉದ್ದೇಶದಿಂದ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುತ್ತದೆ.