Published on: July 13, 2022
ಮೈತ್ರಿ ಯೋಜನೆ
ಮೈತ್ರಿ ಯೋಜನೆ
ಸುದ್ದಿಯಲ್ಲಿ ಏಕಿದೆ?
ಹದಿಹರೆಯದ ಹೆಣ್ಣು ಮಕ್ಕಳ ಸ್ವಚ್ಛ ಹಾಗೂ ಸುರಕ್ಷಿತ ಋತುಚಕ್ರ ನಿರ್ವಹಣೆಗಾಗಿ ಸರ್ಕಾರದ ವಿನೂತನ ಯೋಜನೆ.
ಮುಖ್ಯಾಂಶಗಳು
- ೧೬ – ೧೮ ವರ್ಷದೊಳಗಿನ ಹೆಣ್ಣು ಮಕ್ಕಳಿಗಾಗಿ ಚಾಲ್ತಿಯಲ್ಲಿರುವ ಶುಚಿ ಕಾರ್ಯಕ್ರಮದಡಿ ಸ್ಯಾನಿಟರಿ ನ್ಯಾಪಕಿನ ಪ್ಯಾಡಗಳ ಜೊತೆಗೆ ಮತ್ತು ಅದರ ಪರ್ಯಾಯ ಹಾಗೂ ಪ್ರಾಯೋಗಿಕವಾಗಿ ಮೈತ್ರಿ ಮುಟ್ಟಿನ ಕಪ್ ಗಳನ್ನುಪೂರೈಸಲಾಗುತ್ತದೆ.
- ಬುಡಕಟ್ಟು ಜನಾಂಗವಿರುವ ಪ್ರದೇಶವನ್ನೇ ಆಯ್ಕೆ ಮಾಡಿಕೊಂಡು ಚಾಮರಾಜನಗರ ಜಿಲ್ಲೆಯಲ್ಲಿಯೇ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಆರಂಭದಲ್ಲಿ ಚಾಮರಾಜನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಈ ಯೋಜನೆ ಜಾರಿಯಾಗುತ್ತಿದೆ. ಗಡಿಭಾಗದಲ್ಲಿರುವ ಒಂದು ಜಿಲ್ಲೆ ಹಾಗೂ ಹೆಚ್ಚು ಶಿಕ್ಷಿತರಿರುವ ಒಂದು ಜಿಲ್ಲೆಯನ್ನು ಈ ಯೋಜನೆಗೆ ಆರಿಸಲಾಗಿದೆ.
- ರಾಜ್ಯದ ಪ್ರತಿ ಹೆಣ್ಣುಮಕ್ಕಳಿಗೆ ಉಚಿತವಾಗಿ ಮೈತ್ರಿ ಮುಟ್ಟಿನ ಕಪ್ಗಳನ್ನು ನೀಡುವ ಚಿಂತನೆ ಸರ್ಕಾರಕ್ಕಿದೆ. ಪ್ರಾಯೋಗಿಕ ಯೋಜನೆ ಪೂರ್ಣಗೊಂಡ ಬಳಿಕ ಈ ಕ್ರಮ ವಹಿಸಲಾಗುವುದು.
ಏಕೆ ಈ ಯೋಜನೆ ?
- ಮೆನ್ಸಟ್ರುಯಲ್ ಕಪ್ ಗಳನ್ನು ಅಧಿಕ ಸಮಯದವರೆಗೆ (೮ ಘಂಟೆಗಳ ಅವಧಿ) ಬಳಸಬಹುದು ಮತ್ತು ಸೂಕ್ತ ನಿರ್ವಹಣೆಯೊಂದಿಗೆ ಕನಿಷ್ಠ ೮ – ೧೦ ವರ್ಷಗಳವರೆಗೆ ಸಮರ್ಥನೀಯವಾಗಿ ಮರು ಬಳಕೆ ಮಾಡಬಹುದು.
- ಮೈತ್ರಿ ಮುಟ್ಟಿನ್ ಕಪ್ ಪರಿಸರಸ್ನೇಹಿಯಾಗಿದ್ದು, ಮರುಬಳಕೆ ಮಾಡಬಹುದಾಗಿದ್ದರಿಂದ ವಿಲೇವಾರಿಯ ಸಮಸ್ಯೆ ಇರುವುದಿಲ್ಲ.ಒಂದು ಕಪ್ ಅನ್ನು 6 ರಿಂದ 10 ವರ್ಷಗಳ ಕಾಲ ಬಳಸಬಹುದು. ಇದರಿಂದ ಹಣವೂ ಉಳಿತಾಯವಾಗುತ್ತದೆ.
- ಹೆಣ್ಣುಮಕ್ಕಳು ಸಾಮಾನ್ಯವಾಗಿ ಸ್ಯಾನಿಟರಿ ಪ್ಯಾಡ್ ಬಳಸುತ್ತಾರೆ. ಆದರೆ ಸ್ಯಾನಿಟರಿ ಪ್ಯಾಡ್ನಿಂದ ಕಸದ ಸಮಸ್ಯೆ ಹೆಚ್ಚಾಗಿದೆ ಹಾಗೂ ಇಂದಿನ ಆಧುನಿಕ ಸ್ಯಾನಿಟರಿ ಪ್ಯಾಡ್ಗಳಲ್ಲಿ ಪ್ಲಾಸ್ಟಿಕ್ ಇರುವುದರಿಂದ, ಅದು ಮಣ್ಣಿನಲ್ಲಿ ಕರಗಲು 600-800 ವರ್ಷಗಳು ಬೇಕಾಗುತ್ತವೆ.ಅಲ್ಲದೆ, ಹೆಣ್ಣುಮಕ್ಕಳು ಅನೇಕ ಬಾರಿ ಪ್ಯಾಡ್ ಬದಲಿಸಬೇಕಾಗುತ್ತದೆ. ಸರ್ಕಾರ ನೀಡುತ್ತಿರುವ ಮುಟ್ಟಿನ ಕಪ್ಗಳು ಈ ಸಮಸ್ಯೆಗಳನ್ನು ನಿವಾರಿಸಲಿದೆ.
· ಮುಟ್ಟಿನ ಕಪ್ ತಯಾರಿಸಲು ಬಳಸುವ ವಸ್ತುಗಳು: ರಬ್ಬರ್ ಅಥವಾ ಸಿಲಿಕಾನ್
ಶುಚಿ ಯೋಜನೆ
- 2013-14 ರಲ್ಲಿ ಪ್ರಾರಂಭವಾಯಿತು
- ಮುಟ್ಟಿನ ನೈರ್ಮಲ್ಯ ಯೋಜನೆ, ಸ್ಯಾನಿಟರಿ ನ್ಯಾಪ್ಕಿನ್ಗಳ ವಿತರಣೆಯ ಗುರಿಯನ್ನು ಹೊಂದಿದೆ.
- ಹದಿಹರೆಯದ ಹುಡುಗಿಯರಲ್ಲಿ ಮುಟ್ಟಿನ ನೈರ್ಮಲ್ಯದ ಬಗ್ಗೆ ಅರಿವು ಮೂಡಿಸುವ ಗುರಿಯನ್ನು ಹೊಂದಿದೆ.
- ಕೇಂದ್ರ ಸರ್ಕಾರವು ರಾಷ್ಟ್ರೀಯ ಆರೋಗ್ಯದ ಮೂಲಕ ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳನ್ನು ಬೆಂಬಲಿಸಿದೆ.
ಮಿಷನ್ (NHM) ತನ್ನ ಕಾರ್ಯಕ್ರಮ ಅನುಷ್ಠಾನ ಯೋಜನೆಗಳಲ್ಲಿ ಸ್ಯಾನಿಟರಿ ನ್ಯಾಪ್ಕಿನ್ ಪ್ಯಾಕ್ಗಳ ವಿಕೇಂದ್ರೀಕೃತ ಖರೀದಿಗೆ ಯೋಜಿಸುತ್ತಿದೆ.
- ರಾಷ್ಟ್ರೀಯ ಮಟ್ಟದ ಯೋಜನೆ- ಕೇಂದ್ರ ಸಚಿವಾಲಯದ ಕಿಶೋರಿ ಶಕ್ತಿ ಯೋಜನೆ (KSY).
ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿಯು ಹದಿಹರೆಯದ ಹುಡುಗಿಯರನ್ನು ಸಬಲೀಕರಣಗೊಳಿಸಲು ಪ್ರಯತ್ನಿಸುತ್ತದೆ, ಇದರಿಂದಾಗಿ ಅವರು ತಮ್ಮ ಜೀವನದ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತದೆ.