Published on: August 20, 2022
ಹೊಸ ಯೋಜನೆಗಳು
ಹೊಸ ಯೋಜನೆಗಳು
ಸುದ್ದಿಯಲ್ಲಿ ಏಕಿದೆ?
ಭಾರತದ 75ನೇ ಸ್ವಾತಂತ್ರ್ಯೋತ್ಸವದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಲವು ಹೊಸ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.
- ಸ್ವಾತಂತ್ರ್ಯ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ಸ್ವಚ್ಛತೆ, ಪೌಷ್ಟಿಕತೆ ಕಾಪಾಡಲು, ರೈತರು, ಶ್ರಮಿಕರ ಅಭ್ಯುದಯಕ್ಕಾಗಿ ಹಾಗೂ ಕೆಚ್ಚೆದೆಯ ಸೈನಿಕರ ಕ್ಷೇಮಾಭಿವೃದ್ಧಿಗಾಗಿ ಕೆಲವು ಕೊಡುಗೆಗಳನ್ನು ನೀಡಲು ಸರ್ಕಾರ ತೀರ್ಮಾನಿಸಿದೆ.
ಮುಖ್ಯಾಂಶಗಳು
- ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಶೇ. 100 ರಷ್ಟು ಶೌಚಾಲಯಗಳ ನಿರ್ಮಾಣವನ್ನು ರೂ. 250 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಆ ಮೂಲಕ ಶಾಲೆ, ಕಾಲೇಜುಗಳಲ್ಲಿ ಸ್ವಚ-ಆರೋಗ್ಯಕರ ವಾತಾವರಣ ನಿರ್ಮಿಸಲಾಗುವುದು.
- ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿಗಳು, ಭಜಂತ್ರಿ, ಬುಟ್ಟಿ ಹೆಣೆಯುವವರು, ವಿಶ್ವಕರ್ಮರು, ಮಾದರು ಮತ್ತಿತರ ಕುಶಲ ಕರ್ಮಿಗಳಿಗೆ ತಲಾ ರೂ. 50 ಸಾವಿರ ವರೆಗೆ ಸಾಲ-ಸಹಾಯಧನ (Loan cum subsidy) ಯೋಜನೆಯನ್ನು ಜಾರಿಗೊಳಿಸಲಾಗುವುದು.
- ರೈತರ ಮಕ್ಕಳಿಗೆ ಜಾರಿಗೊಳಿಸಿರುವ ರೈತ ವಿದ್ಯಾನಿಧಿ ಯೋಜನೆಯ ಸೌಲಭ್ಯವನ್ನು ಭೂ ರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಿಸಲಾಗುವುದು. ಭೂ ರಹಿತ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳನ್ನು ಆದ್ಯತೆಯಾಗಿರಿಸಿಕೊಂಡು, ಅಗತ್ಯವನ್ನಾಧರಿಸಿ ರಾಜ್ಯದಲ್ಲಿ ಹೊಸದಾಗಿ 4,050 ಅಂಗನವಾಡಿ ತೆರೆಯಲಾಗುವುದು. ಆ ಮೂಲಕ 16 ಲಕ್ಷ ಕುಟುಂಬಗಳ ಮಕ್ಕಳಿಗೆ ಪೌಷ್ಠಿಕ ಆಹಾರ ಕಲ್ಪಿಸಲಾಗುವುದು. 8100 ಮಹಿಳೆಯರಿಗೂ ಇದರಿಂದ ಉದ್ಯೋಗಾವಕಾಶ ದೊರೆಯಲಿದೆ.
- ರಾಜ್ಯದ ಸೈನಿಕರು ಕರ್ತವ್ಯ ನಿರತರಾಗಿದ್ದಾಗ ಮೃತಪಟ್ಟರೆ, ಅವರ ಕುಟುಂಬದ ಜೀವನಕ್ಕೆ ಭದ್ರತೆ ಒದಗಿಸುವ ಉದ್ದೇಶದಿಂದ ಮೃತ ಸೈನಿಕರ ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ನೀಡಲಾಗುವುದು.
ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ
- ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಹೊಸ ಶಿಷ್ಯವೇತನ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯನ್ನು ರಾಜ್ಯ ಸರ್ಕಾರವು ಜಾರಿಗೆ ತಂದಿರುತ್ತದೆ.
- ಕರ್ನಾಟಕ ರಾಜ್ಯದಲ್ಲಿ ಅಧಿಕೃತವಾಗಿ ನೊಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್‌ಗಳವರೆಗೆ ಪ್ರವೇಶವನ್ನು ಪಡೆದಿರುವ ಕರ್ನಾಟಕ ರಾಜ್ಯದ ರೈತರ ಎಲ್ಲಾ ಮಕ್ಕಳ ಬ್ಯಾಂಕ್‌ಗಳ ಖಾತೆಗಳಿಗೆ ನೇರ ನಗದು ವರ್ಗಾವಣೆ (Direct Benefit Transfer-08T) ಪದ್ಧತಿಯ ಮೂಲಕ ರೂ.2000/- ದಿಂದ ರೂ.11000/- ವರೆಗೆ 2021-22ನೇ ಆರ್ಥಿಕ ವರ್ಷದ ಸಾಲಿನಿಂದ ಜಾರಿಗೆ ಬರುವಂತೆ ಶಿಷ್ಯವೇತನದ ಹಣದ ಮೊತ್ತವನ್ನು ವಾರ್ಷಿಕ ಶಿಷ್ಯವೇತನದ ರೂಪದಲ್ಲಿ ಒದಗಿಸಲು ಮತ್ತು ಪಾವತಿಸಲು ಸರ್ಕಾರದಿಂದ ಅನುಮೋದನೆ ನೀಡಲಾಗಿರುತ್ತದೆ.
- ರೈತ ಕುಟುಂಬದ ಎಲ್ಲಾ ಮಕ್ಕಳು ಇತರೆ ಯಾವುದೇ ವಿದ್ಯಾರ್ಥಿವೇತನ ಪಡೆಯುತ್ತಿದ್ದರೂ ಮುಖ್ಯಮಂತ್ರಿ ರೈತ ವಿದ್ಯಾನಿಧಿ’ ಪಡೆಯಲು ಅರ್ಹರಾಗಿತ್ತಾರೆ.
- ಪ್ರೌಢಶಿಕ್ಷಣ (8 ರಿಂದ 10 ನೇ ತರಗತಿ ವರೆಗೆ) ವ್ಯಾಸಂಗ ಮಾಡುತ್ತಿರುವ ರೈತ ಕುಟುಂಬದ ಹೆಣ್ಣು ಮಕ್ಕಳಿಗೆ 2021-22 ನೇ ಆರ್ಥಿಕ ವರ್ಷದಿಂದ ವಾರ್ಷಿಕವಾಗಿ ರೂ. 2000/- ಗಳ ವಿದ್ಯಾರ್ಥಿ ವೇತನ ಸೌಲಭ್ಯ ನೀಡಲಾಗಿದೆ.
-
2021-22 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪೂರ್ವ ಶಿಕ್ಷಣ ಕೋರ್ಸಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ Sats ID ಮತ್ತು FID ಅನ್ವಯ ಅರ್ಹರನ್ನು ಗುರುತಿಸಿ ಪಾವತಿಸಲಾಗುವುದು.