Published on: August 25, 2022
ಸುದ್ಧಿ ಸಮಾಚಾರ – 25 ಆಗಸ್ಟ್ 2022
ಸುದ್ಧಿ ಸಮಾಚಾರ – 25 ಆಗಸ್ಟ್ 2022
-
ಈ ಬಾರಿಯ ಬರ್ಮಿಂಗ್ ಹ್ಯಾಮ್ ನ (2022) ಕಾಮನ್ ವೆಲ್ತ್ ಗೇಮ್ಸ್ ನಲ್ಲಿ 4,500ಕ್ಕೂ ಹೆಚ್ಚು ಅಥ್ಲೆಟ್ ಗಳು 72 ದೇಶಗಳಿಂದ ಭಾಗವಹಿಸಿದ್ದವು. 215 ಕ್ರೀಡಾಪಟುಗಳ ಭಾರತ ತಂಡ 22 ಚಿನ್ನ, 16 ಬೆಳ್ಳಿ ಮತ್ತು 23 ಕಂಚು ಸೇರಿದಂತೆ ಒಟ್ಟಾರೆ 61 ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಗಳಿಸಿ ತನ್ನ ಅಭಿಯಾನವನ್ನು ಕೊನೆಗೊಳಿಸಿತು.
- ವಿಟ್ಲಪಿಂಡಿ ಉತ್ಸವ : ಕಡೆಗೋಲು ಕೃಷ್ಣನೂರು ಉಡುಪಿಯಲ್ಲಿ ವೈಭವದ ವಿಟ್ಲಪಿಂಡಿ ಉತ್ಸವ ನಡೆಯಿತು.
- ಕರ್ನಾಟಕ ಜಾನಪದ ಪರಿಷತ್: ಕರ್ನಾಟಕ ಜಾನಪದ ಪರಿಷತ್ನ ನೂತನ ಅಧ್ಯಕ್ಷರಾಗಿ ಜಾನಪದ ವಿದ್ವಾಂಸ ಪ್ರೊ. ಹಿ.ಶಿ. ರಾಮಚಂದ್ರೇಗೌಡ ಆಯ್ಕೆಯಾಗಿದ್ದಾರೆ. ಹಿಂದಿನ ಅಧ್ಯಕ್ಷ ಟಿ. ತಿಮ್ಮೇಗೌಡರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನಡೆದ ಪರಿಷತ್ತಿನ 122ನೇ ಆಡಳಿತ ಮಂಡಳಿ ಸಭೆಯಲ್ಲಿ ರಾಮಚಂದ್ರೇಗೌಡ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
- ಆಗಸ್ಟ್ 22, ರಂದು ವಿಶ್ವ ಜಾನಪದ ದಿನ ಆಚರಿಸಲಾಗುತ್ತದೆ, ಬ್ರೆಜಿಲ್ ಸರ್ಕಾರವು ಆಗಸ್ಟ್ 22 ಅನ್ನು ‘ಫೋಕ್ಲೋರ್ ಡೇ’ ಎಂದು 1965ರ ಆಗಸ್ಟ್ 17ರಂದು ಅಧಿಕೃತವಾಗಿ ಘೋಷಿಸಿತು. ಅಲ್ಲಿ ಪ್ರತಿವರ್ಷ ಈ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಇದುಜಗತ್ತಿನ ಜನಪದ ಸಮುದಾಯಗಳಿಗೂ ವಿದ್ವಾಂಸರಿಗೂ ಒಂದು ಅವಿಸ್ಮರಣೀಯ ದಿನ.
- ರಕ್ಷಣಾ ಕ್ಷೇತ್ರದ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಪೂರಕವಾಗಿ ಭಾರತವು ಕಡಲ ಕಣ್ಗಾವಲು ವಿಮಾನ ಡಾರ್ನಿಯರ್ ಅನ್ನು ಶ್ರೀಲಂಕಾ ನೌಕಾಪಡೆಗೆ ಹಸ್ತಾಂತರಿಸಿದೆ.
- ಯುದ್ಧಪೀಡಿತ ಉಕ್ರೇನ್ನಲ್ಲಿ ಈ ಬಾರಿ ಸ್ವಾತಂತ್ರ್ಯೋತ್ಸವ ಆಚರಣೆಗೆ ಸರ್ಕಾರ ನಿರ್ಬಂಧ ಹೇರಿದೆ. ರಾಜಧಾನಿಯಲ್ಲಿ ಜನರು ಸೇರಿದರೆ, ರಷ್ಯಾ ದಾಳಿ ನಡೆಸುವ ಭೀತಿಯಿದ್ದು, ಹೀಗಾಗಿ ಯಾವುದೇ ರೀತಿಯ ಸಾರ್ವಜನಿಕ ಆಚರಣೆಗೆ ಸರ್ಕಾರ ಅವಕಾಶ ನೀಡಿಲ್ಲ. ಸೋವಿಯತ್ ಒಕ್ಕೂಟದಿಂದ ಉಕ್ರೇನ್ ಪ್ರತ್ಯೇಕಗೊಂಡ ಸಲುವಾಗಿ ಸ್ವಾತಂತ್ರ್ಯೋತ್ಸವ ಆಚರಣೆ ನಡೆಸಲಾಗುತ್ತದೆ. ಆದರೆ, ಈ ಬಾರಿ ಆಗಸ್ಟ್ 24ರಂದು ನಡೆಯಬೇಕಿದ್ದ 31ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ದಾಳಿ ಭೀತಿ ಇರುವುದರಿಂದ ಕೀವ್ನಲ್ಲಿ ಯಾವುದೇ ಬಹಿರಂಗ ಆಚರಣೆ ಇರುವುದಿಲ್ಲ.
-
ವಿಶ್ವ ಜೂನಿಯರ್ ಕುಸ್ತಿ:ಬಲ್ಗೇರಿಯಾದ ಸೋಫಿಯಾದಲ್ಲಿ ನಡೆದ ವಿಶ್ವ ಜೂನಿಯರ್ ಕುಸ್ತಿ ಚಾಂಪಿಯನ್ಷಿಪ್ ಮಹಿಳೆಯರ 53 ಕೆ.ಜಿ. ವಿಭಾಗದಲ್ಲಿ ಭಾರತದ ಅಂತಿಮ್ ಪಂಗಾಲ್, ಐತಿಹಾಸಿಕ ಚಿನ್ನ ಸಾಧನೆ ಮಾಡಿದ್ದಾರೆ. ಈ ಮೂಲಕ ಅಂಡರ್-20 ವಿಶ್ವ ಕುಸ್ತಿ ಚಾಂಪಿಯನ್ಷಿಪ್ನಲ್ಲಿ ಚಿನ್ನ ಗೆದ್ದ ಭಾರತದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.