Published on: September 14, 2022
ಸುದ್ಧಿ ಸಮಾಚಾರ – 14 ಸೆಪ್ಟೆಂಬರ್ 2022
ಸುದ್ಧಿ ಸಮಾಚಾರ – 14 ಸೆಪ್ಟೆಂಬರ್ 2022
-
ಉತ್ಪಾದನೆ ಮತ್ತು ಸುಸ್ಥಿರತೆ-ಸಂಬಂಧಿತ ವಲಯಗಳಲ್ಲಿ ಸ್ಟಾರ್ಟ್ಅಪ್ಗಳನ್ನು ಗುರುತಿಸಿ, ಬೆಂಬಲಿಸುವ ‘ವೆಂಚುರೈಸ್’ ಸ್ಪರ್ಧೆಗೆ ಕರ್ನಾಟಕ ಸರ್ಕಾರ ಚಾಲನೆ ನೀಡಿದೆ.
- ಕರಾವಳಿ ಜಿಲ್ಲೆಯ ನಗರಿ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ, 3,800 ಕೋಟಿ ವೆಚ್ಚದ ಯೋಜನೆಗಳಿಗೆ ಮೋದಿ ಚಾಲನೆ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿರುವ ಯೋಜನೆಗಳು ಕರಾವಳಿ ಕರ್ನಾಟಕದ ಬೆಳವಣಿಗೆಗೆ ಉತ್ತೇಜನ ನೀಡಲಿವೆ.
- ಅಂತರರಾಷ್ಟ್ರೀ ಯ ಹಣಕಾಸು ನಿಧಿಯ (ಐಎಂಎಫ್) ಅಂದಾಜಿನ ಪ್ರಕಾರ ವಿಶ್ವದ ಅತಿದೊಡ್ಡ ಆರ್ಥಿಕತೆಯ ದೇಶಗಳ ಪಟ್ಟಿಯಲ್ಲಿ ಬ್ರಿಟನ್ ಹಿಂದಿಕ್ಕಿರುವ ಭಾರತ 5ನೇ ಸ್ಥಾನಕ್ಕೇರಿದ್ದು, ಬ್ರಿಟನ್ ಆರನೇ ಸ್ಥಾನಕ್ಕೆ ಕುಸಿದಿದೆ.
- ನಾಲ್ಕು ದಿನಗಳ ಭಾರತ ಪ್ರವಾಸ ಕೈಗೊಂಡಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಮ್ಮುಖದಲ್ಲಿ ಭಾರತದೊಂದಿಗೆ 7 ಒಪ್ಪಂದಗಳನ್ನು ಮಾಡಿಕೊಂಡಿದ್ದಾರೆ.
-
ಸೆಪ್ಟೆಂಬರ 2 ರಂದುಪ್ರಧಾನಿ ನರೇಂದ್ರ ಮೋದಿ ಅವರು ದೇಶೀಯ ನಿರ್ಮಿತ ಮೊದಲ ವಿಮಾನ ವಾಹಕ ಯುದ್ಧನೌಕೆ ‘ಐಎನ್ಎಸ್ ವಿಕ್ರಾಂತ್’ ಲೋಕಾರ್ಪಣೆ ಮಾಡುವ ಮೂಲಕ ಆತ್ಮನಿರ್ಭರ ಭಾರತ ದ ಸಂಕಲ್ಪಕ್ಕೆ ಪುಷ್ಟಿ ನೀಡಿದರು. ಈ ಯುದ್ಧನೌಕೆಯನ್ನು ದೇಶೀಯವಾಗಿ ನಿರ್ಮಿಸಲಾಗಿದೆ. ಉಕ್ಕು ಸೇರಿದಂತೆ ಕಚ್ಚಾವಸ್ತು ಹಾಗೂ ಬಿಡಿಭಾಗಗಳನ್ನು ಬಳಸುವಾಗಲೂ ದೇಶೀಯ ಕಂಪನಿಗಳಿಗೇ ಆದ್ಯತೆ ನೀಡಲಾಗಿದೆ’.