Published on: September 19, 2022
ಎಸ್ಸಿ, ಎಸ್ಟಿ ಫಲಾನುಭವಿಗಳಿಗೆ ಆಯುಷ್ಮಾನ್ ಭಾರತ್
ಎಸ್ಸಿ, ಎಸ್ಟಿ ಫಲಾನುಭವಿಗಳಿಗೆ ಆಯುಷ್ಮಾನ್ ಭಾರತ್
ಸುದ್ದಿಯಲ್ಲಿ ಏಕಿದೆ?
ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ವಿರಳ ಕಾಯಿಲೆಗಳಿಗೂ ಚಿಕಿತ್ಸಾ ವೆಚ್ಚ ಭರಿಸಲು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಕ್ರಮ ವಹಿಸಿದ್ದಾರೆ.
ಮುಖ್ಯಾಂಶಗಳು
- ಹೆಚ್ಚು ಚಿಕಿತ್ಸಾ ವೆಚ್ಚ ತಗುಲುವ ಕಾಯಿಲೆಗಳಿಗೂ ಉಚಿತ ಚಿಕಿತ್ಸೆ ನೀಡಲು ಕ್ರಮ ವಹಿಸಲಾಗಿದೆ. ಈ ಮೂಲಕ ಬಡ ಜನರ ಆರೋಗ್ಯ ರಕ್ಷಣೆಗೆ ಹೊಸ ಕೊಡುಗೆಯನ್ನು ರಾಜ್ಯ ಸರ್ಕಾರ ನೀಡಿದೆ.
ಹಿನ್ನೆಲೆ
- ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ, ವಿವಿಧ ಕಾಯಿಲೆಗಳಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನಿಂದ ಚಿಕಿತ್ಸಾ ವೆಚ್ಚ ಭರಿಸಲಾಗುತ್ತಿದೆ. ಆದರೆ ಕೆಲ ವಿರಳ ಕಾಯಿಲೆಗಳನ್ನು ಈ ಯೋಜನೆಯಡಿ ಸೇರಿಸಲಾಗಿಲ್ಲ. ಇಂತಹ ರೋಗಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯ ಇರುವುದಿಲ್ಲ. ಅಂತಹ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಿ ಆ ವೆಚ್ಚವನ್ನು ಭರಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ, ಚಿಕಿತ್ಸೆಗಳು ಹಾಗೂ ವೆಚ್ಚದ ಪಟ್ಟಿಯನ್ನು ಸಿದ್ಧಪಡಿಸಿದ್ದ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.
- ಈ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿ ಆದೇಶ ಹೊರಡಿಸಿದೆ. ಇದರ ಜೊತೆಗೆ, ಹೆಚ್ಚು ವೆಚ್ಚ ತಗುಲುವ ಕಾಯಿಲೆಗಳ ಚಿಕಿತ್ಸಾ ವಿಧಾನ ಗುರುತಿಸಿ, ಅವುಗಳಿಗೂ ವೆಚ್ಚ ನಿಗದಿ ಮಾಡಲು ಕ್ರಮ ವಹಿಸಲಾಗಿದೆ.
ಯಾವ ಯೋಜನೆಯಡಿ ವೆಚ್ಚ ನಿಗದಿ?
- ಗಿರಿಜನ ಉಪಯೋಜನೆಯಡಿ 7.39 ಕೋಟಿ ರೂ., ಪರಿಶಿಷ್ಟ ಜಾತಿ ಉಪಯೋಜನೆಯಡಿ79 ಕೋಟಿ ಸೇರಿ, ಒಟ್ಟು 23.18 ಕೋಟಿ ರೂ. ಮೊತ್ತವನ್ನು ಪುನರ್ ವಿನಿಯೋಗದ ಮೂಲಕ ಬಿಡುಗಡೆ ಮಾಡಿ ಆದೇಶಿಸಲಾಗಿದೆ.
- ಪಿಇಟಿ ಸ್ಕ್ಯಾನ್ಗೆ 10,000 ರೂ., ಅಸ್ತಿ ಮಜ್ಜೆ ಕಸಿಗೆ ಎರಡು ವಿಧಾನಗಳಲ್ಲಿ 7 ಲಕ್ಷ ರೂ. ಹಾಗೂ 21 ಲಕ್ಷ ರೂ., ರೋಬೋಟಿಕ್ ಸರ್ಜರಿಗೆ 1.50 ಲಕ್ಷ ರೂ. ಸೇರಿದಂತೆ ವಿವಿಧ ಚಿಕಿತ್ಸೆಗಳಿಗೆ ವೆಚ್ಚ ನಿಗದಿ ಮಾಡಲಾಗಿದೆ.
ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆ
- ರಾಜ್ಯದ ಎಲ್ಲ ನಿವಾಸಿಗಳಿಗೆ ಆರೋಗ್ಯ ಕರ್ನಾಟಕ ಎಂಬ ಸಾರ್ವತ್ರಿಕ ಆರೋಗ್ಯ ರಕ್ಷಣಾ ಯೋಜನೆಯನ್ನು ಕರ್ನಾಟಕಸರ್ಕಾರವು ದಿನಾಂಕ:02.03.2018 ರಿಂದ ಅನುಷ್ಠಾನಗೊಳಿಸುತ್ತಿತ್ತು. ನಂತರ ಭಾರತ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸಿರುತ್ತದೆ.
- ಈ ಎರಡೂ ಯೋಜನೆಗಳ ಉದ್ದೇಶ, ವ್ಯಾಪ್ತಿಗಳಲ್ಲಿ ಹೋಲಿಕೆ ಇರುವುದರಿಂದ ಎರಡೂ ಯೋಜನೆಗಳನ್ನು ಸಂಯೋಜಿಸಿ ‘ಆಯುಷ್ಮಾನ್ ಭಾರತ್ಆರೋಗ್ಯ ಕರ್ನಾಟಕ ಎಂಬ ಯೋಜನೆಯನ್ನು ಅನುಷ್ಠಾನಗೊಳಿಸಲಾಲಾಯಿತು.
ಅರ್ಹತೆ ಹಾಗೂ ಚಿಕಿತ್ಸಾ ಮೊತ್ತ
- ಬಿಪಿಎಲ್ ಪಡಿತರ ಕಾರ್ಡು ಹೊಂದಿರುವವರು ಹಾಗೂ ರಾಷ್ರ್ಟೀಯ ಸ್ವಾಸ್ಥ್ಯ ಭೀಮಾ ಯೋಜನೆಯಲ್ಲಿ ನೋಂದಾಯಿತವಾಗಿರುವ ಫಲಾನುಭವಿಗಳಿಗೆ ಒಂದು ವರ್ಷಕ್ಕೆ ರೂ.5.00 ಲಕ್ಷಗಳವರೆಗೆ ಉಚಿತ ಚಿಕಿತ್ಸೆ ಲಭ್ಯ.
- ಎಪಿಎಲ್ ಕಾರ್ಡುದಾರರು ಆಥವಾ ಬಿಪಿಎಲ್ ಕಾರ್ಡು ಹೊಂದಿಲ್ಲದವರಿಗೆ ಸಹ ಪಾವತಿ ಆಧಾರದ ಮೇಲೆ ಸರ್ಕಾರಿ ಪ್ಯಾಕೇಜ್ ದರದ 30% ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು, ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ರೂ.1.50 ಲಕ್ಷ ಇರುತ್ತದೆ. ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಹಾಜರುಪಡಿಸಿ ಚಿಕಿತ್ಸೆ ಪಡೆದುಕೊಳ್ಳಬಹುದು.
ಚಿಕಿತ್ಸೆಗಳು
- ಸಾಮಾನ್ಯ ದ್ವಿತೀಯ ಹಂತದ 291 ಚಿಕಿತ್ಸಾ ವಿಧಾನಗಳು, ಕ್ಲಿಷ್ಟಕರ ದ್ವಿತೀಯ ಹಂತದ 254 ಚಿಕಿತ್ಸಾ ವಿಧಾನಗಳು, ಮಾರಣಾಂತಿಕ ಕಾಯಿಲೆಗಳಾದ ಹೃದಯರೋಗ, ಕ್ಯಾನ್ಸರ್, ನರರೋಗ, ಮೂತ್ರಪಿಂಡದ ಕಾಯಿಲೆ, ನವಜಾತ ಶಿಶುಗಳ ಕಾಯಿಲೆ ಮುಂತಾದ ತೃತೀಯ ಹಂತದ 900 ಚಿಕಿತ್ಸಾ ವಿಧಾನಗಳು ಹಾಗೂ 169 ತುರ್ತು ಚಿಕಿತ್ಸೆಗಳು ಮತ್ತು 36 ಉಪಚಿಕಿತ್ಸಾ ವಿಧಾನಗಳು ಸೇರಿ ಒಟ್ಟು 1650 ಚಿಕಿತ್ಸೆಗಳು ಲಭ್ಯ. 169 ತುರ್ತು ಚಿಕಿತ್ಸೆಗಳಿಗೆ ಯಾವುದೇ ರೆಫರಲ್ ಇಲ್ಲದೆ ನೇರವಾಗಿ ನೋಂದಾಯಿತ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದು.
ಯೋಜನೆಯ ಸೌಲಭ್ಯ ಪಡೆಯುವುದು ಹೇಗೆ?
- ಪ್ರಾಥಮಿಕ ಮತ್ತು ಸಾಮಾನ್ಯ ದ್ವಿತೀಯ ಚಿಕಿತ್ಸೆಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ನೀಡಲಾಗುತ್ತದೆ. ದ್ವಿತೀಯ ಕ್ಲಿಷ್ಟಕರ ಚಿಕಿತ್ಸೆಗಳು ಮತ್ತು ತೃತೀಯ ಹಂತದ ಕಾಯಿಲೆಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಿದ್ದಲ್ಲಿ ಅಲ್ಲಿಯೇ ನೀಡಲಾಗುತ್ತದೆ. ಇಲ್ಲದಿದ್ದರೆ ರೆಫರಲ್ ನೀಡಲಾಗುತ್ತದೆ. ರೆಫರಲ್ ಪಡೆದುಕೊಂಡ ರೋಗಿಯು ತಾನು ಇಚ್ಚಿಸುವ ಯಾವುದೇ ನೋಂದಾಯಿತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು. ರಸ್ತೆ ಅಪಘಾತ ಸೇರಿದಂತೆ 169 ತುರ್ತು ಚಿಕಿತ್ಸೆಗಳಿಗೆ ಯಾವುದೇ ರೆಫರಲ್ ಇಲ್ಲದೆ ನೇರವಾಗಿ ನೋಂದಾಯಿತ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದು.
ಅನುದಾನಹೇಗೆ?
- ಆರೋಗ್ಯ ಕರ್ನಾಟಕ”ಯೋಜನೆಯಡಿಯಲ್ಲಿ ರಾಜ್ಯದ 115 ಲಕ್ಷ (ಬಿಪಿಎಲ್) ಕುಟುಂಬಗಳ ಪೈಕಿ 62 ಲಕ್ಷ ಕುಟುಂಬಗಳಿಗೆ (ಅರ್.ಎಸ್.ಬಿ.ವೈ ನೋಂದಾಯಿತ) ಮಾತ್ರ ಕೇಂದ್ರ ಸರ್ಕಾರವು ಶೇ.60 ರಷ್ಟು ಅನುದಾನ ಭರಿಸುತ್ತದೆ. ರಾಜ್ಯ ಸರ್ಕಾರವು ಶೇ.40 ರಷ್ಟು ಅನುದಾನ ಭರಿಸುತ್ತದೆ. ಇನ್ನುಳಿದ 53 ಲಕ್ಷ ಕುಟುಂಬಗಳಿಗೆ ರಾಜ್ಯ ಸರ್ಕಾರವೇ ಶೇ.100 ರಷ್ಟು ವೆಚ್ಚ ಭರಿಸುತ್ತದೆ. ಸಾಮಾನ್ಯ ವರ್ಗದ 19 ಲಕ್ಷ ಕುಟುಂಬಗಳಿಗೂ ಸಹ ರಾಜ್ಯ ಸರ್ಕಾರವೇ ಶೇ.100 ರಷ್ಟು ಅನುದಾನ ಭರಿಸುತ್ತದೆ.
ಆರೋಗ್ಯ ಕಾರ್ಡ್
- ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯ ಅಡಿಯಲ್ಲಿ ಎಬಿ-ಎಆರ್ಕೆ ಕಾರ್ಡ್ ನ್ನು ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ರೂ.10/- ಶುಲ್ಕದೊಂದಿಗೆ ನೀಡಲಾಗುತ್ತದೆ. ಬೆಂಗಳೂರು ಒನ್ ಕರ್ನಾಟಕ ಒನ್ ಮತ್ತು ಸೇವ ಸೀಂಧು ಕೇಂದ್ರಗಳಲ್ಲಿ ರೂ. 35/- ಶುಲ್ಕದೊಂದಿಗೆ ಎಬಿ-ಎಆರ್ಕೆ ಕಾರ್ಡ್ ನೀಡಲಾಗುತ್ತದೆ. ಆಧಾರ್ ಕಾರ್ಡ್ ಮತ್ತು ಪಡಿತರ ಕಾರ್ಡ್ ಗಳನ್ನು ಹಾಜರು ಪಡಿಸಿ ಆರೋಗ್ಯ ಕಾರ್ಡ್ ಪಡೆಯಬಹುದು.
ಗಿರಿಜನ ಉಪಯೋಜನೆ ಮತ್ತು ಪರಿಶಿಷ್ಟ ಜಾತಿ ಉಪಯೋಜನೆ
- 1974-75 ರಲ್ಲಿ ಐದನೇ ಪಂಚವಾರ್ಷಿಕ ಯೋಜನೆ ಅವಧಿಯಲ್ಲಿ ಭಾರತ ಸರ್ಕಾರವು ಬುಡಕಟ್ಟು ಉಪ ಯೋಜನೆ (ಟಿಎಸ್ಪಿ) ನೀತಿಯನ್ನು ಪರಿಚಯಿಸಿತು ಮತ್ತು ನಂತರ 1979-80 ರಲ್ಲಿ ಆರನೇ ಪಂಚವಾರ್ಷಿಕ ಯೋಜನೆ ಅವಧಿಯಲ್ಲಿ ವಿಶೇಷ ಘಟಕ ಯೋಜನೆ (ಎಸ್ಸಿಪಿ) ಇದನ್ನು ಏಪ್ರಿಲ್, 2006 ರಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆ ಎಂದು ಮರುನಾಮಕರಣ ಮಾಡಲಾಯಿತು
- ಬುಡಕಟ್ಟು ಉಪ ಯೋಜನೆ (ಟಿಎಸ್ಪಿ) ಬುಡಕಟ್ಟು ಜನರ ತ್ವರಿತ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಒಂದು ತಂತ್ರವಾಗಿದೆ. ಇದು ರಾಜ್ಯ/UT ವಾರ್ಷಿಕ ಯೋಜನೆಯ ಒಂದು ಭಾಗವಾಗಿದೆ.
- ಪ್ರಸ್ತುತ ಬುಡಕಟ್ಟು ಉಪ ಯೋಜನೆ (ಟಿಎಸ್ಪಿ) ಕಾರ್ಯತಂತ್ರವನ್ನು ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಚಿವಾಲಯವು 1972 ರಲ್ಲಿ ಪ್ರೊ. ಎಸ್ಸಿ ದುಬೆ ಅವರ ಅಧ್ಯಕ್ಷತೆಯಲ್ಲಿ ಬುಡಕಟ್ಟು ಜನರ ತ್ವರಿತ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗಾಗಿ ಸ್ಥಾಪಿಸಿದ ತಜ್ಞರ ಸಮಿತಿಯಿಂದ ಅಭಿವೃದ್ಧಿಪಡಿಸಲಾಯಿತು ಮತ್ತು ಅದನ್ನು ಅಳವಡಿಸಿಕೊಳ್ಳಲಾಯಿತು.
- ಪರಿಶಿಷ್ಟ ಜಾತಿ ಅಭಿವ್ರದ್ದಿ ಬ್ಯೂರೊ ಅಡಿಯಲ್ಲಿ, ಸಚಿವಾಲಯವು ಪರಿಶಿಷ್ಟ ಜಾತಿ ಉಪಯೋಜನೆ ( SCSP) ಅನುಷ್ಠಾನಗೊಳಿಸಿದೆ. ಅದು ಒಂದು ಆಶ್ರಯ ತಂತ್ರವಾಗಿದೆ. ಪರಿಶಿಷ್ಟ ಜಾತಿಯವರ ಸೌಲಭ್ಯಗಳ ಅಭಿವ್ರುದ್ದಿಗಾಗಿ, ಉದ್ದೇಶಿತ ಹಣಕಾಸಿನ ಮತ್ತು ಭೌತಿಕ ಸೌಲಭ್ಯಗಳು ಎಲ್ಲಾ ವಲಯಗಳಿಂದ ಸುಗಮವಾಗಿ ಹರಿದುಬರುವುದನ್ನು ಖಾತರಿಗೊಳಿಸುವ ತಂತ್ರವಾಗಿದೆ. ಈ ತಂತ್ರದಡಿಯಲ್ಲಿ, ರಾಜ್ಯ/ಕೇಂದ್ರಾಡಳಿತ ಪ್ರದೇಶಗಳು ಪರಿಶಿಷ್ಟ ಜಾತಿಯವರಿಗೆ ವಿಶೇಷ ಕಾಂಪೋನೆಂಟ್ ಯೋಜನೆಯನ್ನು ರೂಪಿಸಿ ಅನುಷ್ಠಾನಗೊಳಿಸಬೇಕಿದೆ.
ಯೋಜನೆಯ ಉದ್ದೇಶಗಳು
- ಸಾಕಷ್ಟು ಶೈಕ್ಷಣಿಕ ಮತ್ತು ಆರೋಗ್ಯ ಸೇವೆಗಳನ್ನು ಒದಗಿಸುವ ಮೂಲಕ ಪರಿಶಿಷ್ಟ ಪಂಗಡಗಳ ಮಾನವ ಸಂಪನ್ಮೂಲ ಅಭಿವೃದ್ಧಿ.
- ವಸತಿ ಸೇರಿದಂತೆ ಬುಡಕಟ್ಟು ಪ್ರದೇಶಗಳು / ಸ್ಥಳಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಜೀವನದ ಗುಣಮಟ್ಟವನ್ನು ಹೆಚ್ಚಿಸಲಾಗಿದೆ
- ಬಡತನ ಮತ್ತು ನಿರುದ್ಯೋಗದಲ್ಲಿ ಗಣನೀಯ ಕಡಿತ, ಉತ್ಪಾದಕ ಆಸ್ತಿಗಳ ಸೃಷ್ಟಿ ಮತ್ತು ಆದಾಯವನ್ನು ಉತ್ಪಾದಿಸುವ ಅವಕಾಶಗಳು.
-
ಎಲ್ಲಾ ರೀತಿಯ ಶೋಷಣೆ ಮತ್ತು ದಬ್ಬಾಳಿಕೆ ವಿರುದ್ಧ ದೈಹಿಕ ಮತ್ತು ಆರ್ಥಿಕ ಭದ್ರತೆಯನ್ನು ಒದಗಿಸುವುದು.