Published on: November 28, 2022
ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್:
ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್:
ಸುದ್ದಿಯಲ್ಲಿ ಏಕಿದೆ?
ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್‌ನಡಿ ಆರೋಗ್ಯ ವೃತ್ತಿಪರರು ಮತ್ತು ಆರೋಗ್ಯ ಸೌಲಭ್ಯ ನೋಂದಣಿಯಲ್ಲಿ ಇಡೀ ದೇಶದಲ್ಲಿ ಕರ್ನಾಟಕ ಮೊದಲ ಮತ್ತು ಎರಡನೇ ಸ್ಥಾನದಲ್ಲಿದೆ.
ಮುಖ್ಯಾಂಶಗಳು
- ಆರೋಗ್ಯ ಆರೈಕೆ ವೃತ್ತಿಪರರ ನೋಂದಣಿ (ಎಚ್.ಪಿ.ಆರ್) ವಲಯದಲ್ಲಿ 28,643 ವೈದ್ಯರು ಮತ್ತು ದಾದಿಯರು ನೋಂದಣಿಯಾಗಿದ್ದು, ರಾಜ್ಯ ಮೊದಲ ಸ್ಥಾನದಲ್ಲಿದೆ.
- ಆರೋಗ್ಯ ಸೌಲಭ್ಯ ನೋಂದಣಿಯಡಿ(ಎಚ್.ಎಫ್.ಆರ್) ಕರ್ನಾಟಕ 2ನೇ ಸ್ಥಾನದಲ್ಲಿದ್ದು, 27,244 ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
- ದೇಶದಲ್ಲಿ 1.35 ಕೋಟಿ ಜನ ಆಯುಷ್ಮಾನ್ ಭಾರತ್ ಆರೋಗ್ಯ ಖಾತೆ ಹೊಂದಿದ್ದು, ಈ ವಲಯದಲ್ಲಿ ರಾಜ್ಯ 7ನೇ ಸ್ಥಾನದಲ್ಲಿದೆ.
- ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್‌ನಡಿ ಸ್ಕ್ಯಾನ್ ಮತ್ತು ಶೇರ್ ವೈಶಿಷ್ಟ್ಯ ಬಳಸಿಕೊಂಡು ಹೊರರೋಗಿ ವಿಭಾಗಗಳಲ್ಲಿ ಬ್ಲಾಕ್‌ನಲ್ಲಿ ಫಾಸ್ಟ್ ಟ್ರ್ಯಾಕ್ ಕೌಂಟರ್‌ಗಳನ್ನು ಹೊಂದಿಸುವ ವಲಯದಲ್ಲೂ ರಾಜ್ಯ ಗಮನಾರ್ಹ ಸಾಧನೆ ಮಾಡಿದೆ.
ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ (ಎಬಿಡಿಎಂ)
- ಪ್ರಾರಂಭ: 15th ಆಗಸ್ಟ್2020
- ಎಲ್ಲೆಲ್ಲಿ ?ಆರು ಕೇಂದ್ರಾಡಳಿತ ಪ್ರದೇಶಗಳಾದ ಅಂಡಮಾನ್ ಮತ್ತು ನಿಕೋಬಾರ್, ಚಂಡೀಗಢ, ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯು, ಲಡಾಖ್, ಲಕ್ಷದ್ವೀಪ ಮತ್ತು ಪುದುಚೇರಿನಲ್ಲಿ ಪ್ರಾಂಭಿಸಲಾಯಿತು.
- ಅನುಷ್ಠಾನ :ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (ಎನ್‌ಎಚ್‌ಎ)
- ಈ ಯೋಜನೆಯಡಿ ನಾಗರಿಕರು ತಮ್ಮದೇ ಅದ ಪ್ರತ್ಯೇಕ ಡಿಜಿಟಲ್ ಆರೋಗ್ಯ ಖಾತೆ ತೆರೆಯಬಹುದಾಗಿದೆ. ಇರುವ ಡಿಜಿಟಲ್ ಆರೋಗ್ಯ ದಾಖಲೆಗಳನ್ನು ಈ ಖಾತೆಗೆ ಲಿಂಕ್ ಮಾಡಬಹುದಾಗಿದ್ದು, ಪ್ರತಿ ವ್ಯಕ್ತಿಯ ಸಂಪೂರ್ಣ ಆರೋಗ್ಯ ಕೈಪಿಡಿ ಸಿದ್ಧಗೊಳ್ಳಲಿದೆ.
- ಚಿಕಿತ್ಸೆ ಮತ್ತು ಔಷಧೋಪಚಾರ ಎಲ್ಲದ್ದಕ್ಕೂ ವೈದ್ಯರನ್ನು ಖುದ್ದು ಕಾಣುವ ಅನಿವಾರ್ಯತೆ ಕಡಿಮೆ ಮಾಡುವ ಉದ್ದೇಶದಿಂದ ಈ ಡಿಜಿಟಲ್ ವ್ಯವಸ್ಥೆ ಸೃಷ್ಟಿಸಲಾಗಿದೆ.
ಉದ್ದೇಶ
- ದೇಶದ ಸಮಗ್ರ ಡಿಜಿಟಲ್ ಆರೋಗ್ಯ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ಗುರಿ ಹೊಂದಿದೆ. ಇದು ಡಿಜಿಟಲ್ ಮಾರ್ಗಗಳ ಮೂಲಕ ಆರೋಗ್ಯ ಪರಿಸರ ವ್ಯವಸ್ಥೆಯ ವಿವಿಧ ಪಾಲುದಾರರ ನಡುವೆ ಇರುವ ಅಂತರ ತಗ್ಗಿಸುತ್ತದೆ.
ಪ್ರಯೋಜನ:
- ಈ ಬೆಳವಣಿಗೆಯಿಂದಾಗಿ ಭೌತಿಕವಾಗಿ ಯಾವುದೇ ದಾಖಲೆಗಳನ್ನು ಸಾಗಿಸುವ ಅಗತ್ಯ ಕಂಡು ಬರುವುದಿಲ್ಲ. ಸಮ್ಮತಿ ಮೇರೆಗೆ ಸುದೀರ್ಘ ವೈಯಕ್ತಿಕ ಆರೋಗ್ಯ ದಾಖಲೆಗಳನ್ನು ಹೊಂದಬಹುದಾಗಿದೆ.
- ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ(ಎನ್‌ಎಚ್‌ಎ) ಸಹಕಾರದೊಂದಿಗೆ ಇ-ಆಸ್ಪತ್ರೆಯಲ್ಲಿ ಸ್ಕ್ಯಾನ್ ಮತ್ತು ಶೇರ್ ಸೌಲಭ್ಯದ ಮೂಲಕ ಹೊರರೋಗಿ ವಿಭಾಗದ ವೇಗದ ನೋಂದಣಿ ಪ್ರಾರಂಭಿಸಲಾಗಿದೆ. ಇದರಿಂದ ಒಪಿಡಿ ನೋಂದಣಿಗಾಗಿ ಸರತಿಯಲ್ಲಿ ಕಾಯುವ ಸಮಯ ಕಡಿಮೆಯಾಗಿದೆ.
- ಆರೋಗ್ಯ ದಾಖಲೆಗಳ ಸಂಪರ್ಕ ಸಹ ಸುಗಮವಾಗಿದೆ. ಆಧಾರ್ ಮೂಲಕ ನಿಖರವಾದ ದತ್ತಾಂಶವನ್ನು ಇ-ಹಾಸ್ಪಿಟಲ್ ಪೋರ್ಟಲ್‌ನಲ್ಲಿ ನಮೂದಿಸುವುದರಿಂದ ನಕಲು ಮಾಡುವುದನ್ನು ತಡೆಯಬಹುದು ಎಂದು ವಿವರಿಸಿದ್ದಾರೆ.
- ಈ ವ್ಯವಸ್ಥೆಯನ್ನು ಸಿ.ವಿ.ರಾಮನ್ ನಗರದ ಜನರಲ್ ಆಸ್ಪತ್ರೆಯಲ್ಲಿ ಇದೇ ವರ್ಷದ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿದ್ದು, ಇದೀಗ ರಾಜ್ಯದ 15 ಆಸ್ಪತ್ರೆಗಳಲ್ಲಿ ಈ ವ್ಯವಸ್ಥೆಯನ್ನು ಜಾರಿ ಮಾಡಲಾಗಿದೆ.