Published on: December 2, 2022

‘ಸುಶಾಸನ ಮಾಸಾಚರಣೆ’

‘ಸುಶಾಸನ ಮಾಸಾಚರಣೆ’

ಸುದ್ದಿಯಲ್ಲಿ ಏಕಿದೆ?

ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತರನ್ನು ಬೆಸೆಯುವ ಸ್ಕಿಲ್ ಕನೆಕ್ಟ್ ಪೋರ್ಟಲ್ ಉದ್ಘಾಟನೆ, ಐದು ಸಂಸ್ಥೆಗಳೊಂದಿಗೆ ಉದ್ಯೋಗಸೃಷ್ಟಿಯ ಒಡಂಬಡಿಕೆ ಮತ್ತು ತಮ್ಮ ಇಲಾಖೆಗಳಲ್ಲಿ ಏನೆಲ್ಲ ಸುಧಾರಣೆಗಳನ್ನ ಮಾಡಲಾಗುತ್ತದೆ ಎಂಬುದರ ಸಂಕಲ್ಪ ಪತ್ರಗಳ ಬಿಡುಗಡೆಯೊಂದಿಗೆ ತಮ್ಮ ನೇತೃತ್ವದ ಎಲ್ಲ ಇಲಾಖೆಗಳಡಿಯಲ್ಲಿ ಡಿಸೆಂಬರ್ ಪೂರ್ತಿ ನಡೆಯುವ ‘ಸುಶಾಸನ ಮಾಸಾಚರಣೆ’ಗೆ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಚಾಲನೆ ನೀಡಿದರು.

ಮುಖ್ಯಾಂಶಗಳು

  • ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಗಳ ವ್ಯಾಪ್ತಿಯಲ್ಲಿ ದಿವಂಗತ ಮಾಜಿ ಪ್ರಧಾನಿ ವಾಜಪೇಯಿಯವರ ಜನ್ಮದಿನದ ಅಂಗವಾಗಿ ಈ ಸುಶಾಸನ ಉಪಕ್ರಮವನ್ನು ವ್ಯಾಪಕ ಸ್ವರೂಪದಲ್ಲಿ ಹಮ್ಮಿಕೊಳ್ಳಲಾಗಿದೆ.
  • ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ಬಾಗಲಕೋಟೆ, ಕೊಪ್ಪಳ, ದಾವಣಗೆರೆಗಳಲ್ಲಿ ನಿರ್ಮಿಸುತ್ತಿರುವ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಗದಗಿನ ಮಿನಿ ತಾರಾಲಯವನ್ನು ಸದ್ಯದಲ್ಲೇ ಸಾರ್ವಜನಿಕರಿಗೆ ಮುಕ್ತಗೊಳಿಸಲಾಗುವುದು.
  • ಕಿಯೋನಿಕ್ಸ್‌ ಸಂಸ್ಥೆಯಲ್ಲಿ 1976ರಿಂದಲೂ ಇರುವ ದಾಖಲೆಗಳನ್ನು ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸಲಾಗುವುದು.

 “ಸುಶಾಸನ”

  • ಸುಶಾಸನ ಎನ್ನುವುದು ಹೊಸ ರಾಜಕೀಯ ಸಂಸ್ಕೃ ತಿಯಾಗಿದೆ. ಇದು ಕೇವಲ ಒಂದು ದಿನಕ್ಕೆ ಸೀಮಿತವಾಗದೆ ನಿರಂತರವಾಗಿ ನಡೆಯಬೇಕು. ಇದು ಸಾರ್ವಜನಿಕ ಸೇವೆಗಳನ್ನು ಜನರ ಮನೆ ಬಾಗಿಲಿಗೇ ಕೊಂಡೊಯ್ಯುವ ಪ್ರಾಮಾಣಿಕ ಪ್ರಯತ್ನವಾಗಿದೆ.
  • ಇದರಲ್ಲಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡು, ಪಾರದರ್ಶಕತೆ ಮತ್ತು ಉತ್ತರದಾಯಿತ್ವಕ್ಕೆ ಒತ್ತು ಕೊಡಲಾಗಿದೆ.
  • ಸುಶಾಸನ ಬರಬೇಕೆಂದರೆ ಗುಣಮಟ್ಟದ ಶಿಕ್ಷಣ ಅತ್ಯಗತ್ಯವಾಗಿದೆ. ಹೀಗಾಗಿ ಎನ್ಇಪಿ ಅನುಷ್ಠಾ ನದ ಮೂಲಕ ಉನ್ನತ ಶಿಕ್ಷಣದಲ್ಲಿ ಸುಧಾರಣೆ ತರಲಾಗುತ್ತಿದೆ.

ಕಾರ್ಯಕ್ರಮಗಳು

  • ಇದರ ಭಾಗವಾಗಿ ಡಿಗ್ರಿ ಕಾಲೇಜು, ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರಣಿ ನೇರ ಸಂವಾದಗಳನ್ನು ನಡೆಸಲಾಗುವುದು. ಇದಲ್ಲದೆ ವಿ.ವಿ.ಗಳಲ್ಲಿ ಆನ್ಲೈನ್ ಡಿಜಿಟಲ್ ಕಲಿಕೆ ಮತ್ತು ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು.
  • ಇದರಂತೆ, 2023ರ ಮಾರ್ಚ್‌ ವೇಳೆಗೆ ಪ್ರತಿ ವಿ.ವಿ.ಯಲ್ಲೂ ಕನಿಷ್ಠಪಕ್ಷ ಒಂದು ಡಿಗ್ರಿ ಕೋರ್ಸಾದರೂ ಆನ್ಲೈನ್ ರೂಪದಲ್ಲಿ ಆರಂಭವಾಗಲಿದೆ.
  • ಹಾಗೆಯೇ, ಈ ತಿಂಗಳ ಕೊನೆಯ ವೇಳೆಗೆ ಪ್ರತಿ ವಿ.ವಿ.ಯೂ ಅಕಾಡೆಮಿಕ್ ಬ್ಯಾಂಕ್ ಆಫ್‌ ಕ್ರೆಡಿಟ್‌ ನಲ್ಲಿ ತಮ್ಮನ್ನು ನೋಂದಾಯಿಸಿಕೊಳ್ಳಬೇಕು. ಜತೆಗೆ 3 ತಿಂಗಳಲ್ಲಿ ಕನಿಷ್ಠ ಪಕ್ಷ 5 ಉದ್ಯಮ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವುದು ಕಡ್ಡಾಯವಾಗಿದೆ.

ಕೌಶಲ್ಯ ಕಲಿಕೆಗೆ ಮತ್ತಷ್ಟು ಒತ್ತು ನೀಡಲಾಗುವುದು

  • ಆಧುನಿಕ ಜಗತ್ತಿನಲ್ಲಿ ಯುವಜನರಲ್ಲಿ ಕೌಶಲ್ಯ ಕಲಿಕೆ ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯ ಸ್ಕಿಲ್‌ ಕನೆಕ್ಟ್‌ ಪೋರ್ಟಲ್‌ ಗೆ ಹೊಸ ರೂಪ ಕೊಡಲಾಗಿದೆ. ಇದರಿಂದ ಉದ್ಯೋಗಾಕಾಂಕ್ಷಿ ಮತ್ತು ಉದ್ಯೋಗದಾತರ ನಡುವೆ ಸಕ್ರಿಯ ಸಂಬಂಧ ಉಂಟಾಗಲಿದೆ.
  • ಐಟಿಐ ಅಂಕಪಟ್ಟಿಗಳ ಡಿಜಿಟಲೀಕರಣ ಮತ್ತು ಅವುಗಳನ್ನು ರಾಷ್ಟ್ರೀಯ ಶೈಕ್ಷಣಿಕ ಕೋಠಿಗೆ ಅಪ್‌ ಲೋಡ್‌ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ. ಒಟ್ಟು 60 ಸಾವಿರ ಐಟಿಐ ವಿದ್ಯಾರ್ಥಿಗಳಿಗೆ ಮೈಕ್ರೋಸಾಫ್ಟ್‌ ಕಂಪನಿಯ ವತಿಯಿಂದ ಉತ್ಕೃಷ್ಟ ತರಬೇತಿ ಕೊಡಿಸಲಾಗುವುದು.
  • ಇದರಡಿಯಲ್ಲಿ ಇಂಗ್ಲಿಷ್‌ ಕಲಿಕೆ ಲ್ಯಾಬ್‌ ಗಳ ಸ್ಥಾಪನೆ, ಜಪಾನಿನಲ್ಲಿ ಉದ್ಯೋಗಾವಕಾಶ ದೊರಕಿಸಿ ಕೊಡಲು ಜಪಾನಿ ಭಾಷೆಯ ಕಲಿಕೆಗೆ ವ್ಯವಸ್ಥೆ, ಲೋಕೋಸ್‌ ತಂತ್ರಾಂಶದ ಮೂಲಕ ಸ್ವಸಹಾಯ ಸಂಘಗಳ ಮಾಹಿತಿ ಮತ್ತು ಹಣಕಾಸು ವ್ಯವಹಾರಗಳಲ್ಲಿ ಪಾರದರ್ಶಕತೆ ತರಲಾಗುವುದು.
  • 13,500 ಮಹಿಳಾ ಉದ್ಯಮಿಗಳಿಗೆ ಸಿ-ಡಾಕ್‌ ಮೂಲಕ ಪ್ರೇರಣಾ ಶಿಬಿರಗಳನ್ನು ಆಯೋಜಿಸಲಾಗುವುದು.

5 ಸಂಸ್ಥೆಗಳೊಂದಿಗೆ ಒಡಂಬಡಿಕೆಗೆ ಅಂಕಿತ

  • ಸುಶಾಸನ ಮಾಸಾಚರಣೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಟ್ಯಾಲೆನ್ಷೀಯಾ ಗ್ಲೋ ಬಲ್, ಇನ್ನೋ ವ್ಸೋರ್ಸ್, ಫ್ಯೂಯೆಲ್, ಎಐಎಸ್ಇಸಿಟಿ ಮತ್ತು ಇನ್ಫಿಕ್ವಿಟಿ ಆಟೋ ಟೆಕ್ನಾಲಜೀಸ್ ಕಂಪನಿಗಳ ಮುಖ್ಯಸ್ಥರೊಂದಿಗೆ ಹಲವು ಒಪ್ಪಂದಗಳಿಗೆ ಸಹಿಹಾಕಲಾಗಿದೆ.