Published on: December 13, 2022
ಝೀಕಾ ವೈರಸ್ ಸೋಂಕು
ಝೀಕಾ ವೈರಸ್ ಸೋಂಕು
ಸುದ್ದಿಯಲ್ಲಿ ಏಕಿದೆ? ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ಸೋಂಕು ವರದಿಯಾಗಿದೆ. ರಾಯಚೂರು ಜಿಲ್ಲೆಯ ಐದು ವರ್ಷದ ಬಾಲಕಿಗೆ ಸೋಂಕು ದೃಢಪಟ್ಟಿದೆ
ಮುಖ್ಯಾಂಶಗಳು
- ಪುಣೆ ವೈರಾಲಜಿ ಲ್ಯಾಬ್‌ನಿಂದ ಪಾಸಿಟಿವ್ ರಿಪೋರ್ಟ್ ಬಂದಿದೆ.
- ಕೆಲವು ತಿಂಗಳ ಹಿಂದೆ ಕೇರಳ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ ಝಿಕಾ ವೈರಸ್ ಪ್ರಕರಣಗಳು ಕಂಡುಬಂದಿವೆ. ಇನ್ನು ಕರ್ನಾಟಕದಲ್ಲಿ ಇಂದು ಮೊದಲ ಪ್ರಕರಣವಾಗಿದೆ.
ಝೀಕಾ ವೈರಸ್
- ಝೀಕಾ ವೈರಸ್ ಹಗಲಿನಲ್ಲಿ ಕಚ್ಚುವ ಈಡಿಸ್ ಸೊಳ್ಳೆಗಳ ಮೂಲಕ ಹರಡುತ್ತದೆ. ಈ ವೈರಸ್ ಸಾಗಿಸುವ ಸೊಳ್ಳೆಗಳು ಮನುಷ್ಯರನ್ನು ಕಚ್ಚಿದಾಗ, ವೈರಸ್ ಮನುಷ್ಯರಿಗೆ ಹರಡುತ್ತದೆ. ಈ ಈಡಿಸ್ ಸೊಳ್ಳೆಗಳು ಹಗಲಿನ ವೇಳೆಯಲ್ಲಿ ಕಚ್ಚುತ್ತವೆ ಹಾಗೂ ಹೆಚ್ಚಾಗಿ ಉಷ್ಣವಲಯದ ಮತ್ತು ಉಪೋಷ್ಣವಲಯದ ಪ್ರದೇಶಗಳಲ್ಲಿ ಕಂಡುಬರುತ್ತದೆ. ಝೀಕಾ ವೈರಸ್ ಕೇವಲ ಸೊಳ್ಳೆ ಕಡಿತದಿಂದ ಮಾತ್ರವಲ್ಲ, ರಕ್ತದ ವರ್ಗಾವಣೆ ಮೂಲಕವೂ ಹರಡಬಹುದು ಎಂದು ತಜ್ಞರು ಹೇಳುತ್ತಾರೆ.
ಎಲ್ಲಿ ಮೊದಲು?
- 1947ರಲ್ಲಿಉಗಾಂಡಾದ ಕೋತಿಯಲ್ಲಿ ಮೊದಲ ಬಾರಿಗೆ ಪತ್ತೆ. ನಂತರ 2007ರಲ್ಲಿ ಮೈಕ್ರೋನೇಷಿಯಾದಲ್ಲಿ ಮೊದಲ ಬಾರಿಗೆ ಸಾಂಕ್ರಾಮಿಕವಾಗಿ ಹರಡಿ ಆತಂಕ ಉಂಟು ಮಾಡಿತ್ತು.
- 2015ರಲ್ಲಿ ಲ್ಯಾಟಿನ್ ಅಮೆರಿಕದಲ್ಲಿ, ವಿಶೇಷವಾಗಿ ಬ್ರೆಜಿಲ್‌ನಲ್ಲಿ ಕಾಣಿಸಿಕೊಂಡಿತು.
- ಇದು ಡೆಂಗ್ಯೂ ಮತ್ತು ಚಿಕೂನ್‌ಗುನ್ಯಾದಂತಹ ಸೋಂಕುಗಳನ್ನು ಹರಡುತ್ತದೆ.
ಲಕ್ಷಣಗಳು
- ಸೌಮ್ಯ ಜ್ವರ,
- ದದ್ದುಗಳು,
- ಕಾಂಜಂಕ್ಟಿವಿಟಿಸ್,
- ಸ್ನಾಯು- ಕೀಲು ನೋವು,
- ಅಸ್ವಸ್ಥತೆ ಅಥವಾ ತಲೆನೋವು. ಝೀಕಾ ವೈರಸ್ ಹೊಂದಿರುವ ಹೆಚ್ಚಿನ ಜನರು ರೋಗಲಕ್ಷಣಗಳನ್ನು ಅಭಿವೃದ್ಧಿಪಡಿಸುವುದಿಲ್ಲ. ರೋಗಲಕ್ಷಣಗಳು ಸಾಮಾನ್ಯವಾಗಿ 2-7 ದಿನಗಳ ವರೆಗೆ ಇರುತ್ತದೆ.
ಚಿಕಿತ್ಸೆ
- ಝಿಕಾ ವೈರಸ್ ಸಾಂಕ್ರಾಮಿಕ ರೋಗವಾಗಿದ್ದೂ, ಇದಕ್ಕೆ ನಿಗದಿತ ಚಿಕಿತ್ಸೆಯಾಗಲಿ,ಲಸಿಕೆಯಾಗಲಿ ಇಲ್ಲ ಈ ವೈರಸ್ ಗರ್ಭಿಣಿಯರಿಗೆ ಹೆಚ್ಚು ಅಪಾಯವನ್ನುಂಟು ಮಾಡುತ್ತದೆ ಎಂದು ಅಧ್ಯಯನದಿಂದ ತಿಳಿದು ಬಂದಿದೆ.
ಮುನ್ನೆಚ್ಚರಿಕಾ ಕ್ರಮಗಳು
ಮನೆ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು . ಸದ್ಯ ಮಳೆ ಇರುವುದರಿಂದ ರಸ್ತೆಯ ಹೊಂಡಗಳಲ್ಲಿನೀರು ನಿಲ್ಲುವುದು ಸಾಮಾನ್ಯ. ಇಂತಹ ಕಡೆ ಸೊಳ್ಳೆಗಳು ಸಂತನೋತ್ಪತ್ತಿ ಹೆಚ್ಚಿಸಿಕೊಂಡು ಮನುಷ್ಯರ ಮೇಲೆ ಹಗಲಿನ ವೇಳೆ ದಾಳಿ ಮಾಡುತ್ತವೆ. ಸೊಳ್ಳೆ ನಿವಾರಕ ಕ್ರೀಮ್ ಬಳಕೆ ಮತ್ತು ಸೊಳ್ಳೆ ಪರದೆ ಬಳಕೆ ಮಾಡುವ ಮೂಲಕ ಈ ಸೋಂಕಿನಿಂದ ತಪ್ಪಿಸಿಕೊಳ್ಳಬಹುದು