Published on: December 21, 2022
ಚುಟುಕು ಸಮಾಚಾರ – 21 ಡಿಸೆಂಬರ್ 2022
ಚುಟುಕು ಸಮಾಚಾರ – 21 ಡಿಸೆಂಬರ್ 2022
- ಗ್ರೀನ್ ಟೀ ನಲ್ಲಿರುವ ಪ್ರಯೋಜನಗಳನ್ನು ಮತ್ತಷ್ಟು ಬಳಕೆ ಮಾಡಿಕೊಂಡಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (IISc)ಯ ಸಂಶೋದಕರು, ಇದರಿಂದ ‘ಸೂಕ್ಷ್ಮಾಣು ನಾಶಕ’ ಏರ್ ಫಿಲ್ಟರ್’ನ್ನು ಅಭಿವೃದ್ಧಿಪಡಿಸಿದ್ದಾರೆ.ಈ ಫಿಲ್ಟರ್ಗಳನ್ನು ಏರ್ ಕಂಡಿಷನರ್ಗಳು, ಸೆಂಟ್ರಲ್ ಡಕ್ಟ್ಗಳು ಮತ್ತು ಏರ್ ಪ್ಯೂರಿಫೈಯರ್ಗಳಲ್ಲಿ ಬಳಸಬಹುದಾಗಿದೆ.
- ಮಕ್ಕಳಿಗೆ ಮಾನಸಿಕ ಆರೋಗ್ಯದ ಮಹತ್ವವನ್ನು ತಿಳಿಸಲು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರ ನೇತೃತ್ವದಲ್ಲಿ ‘ಮನೋಸ್ತೈರ್ಯ’ ಎಂಬ ವಿನೂತನ ಕಾರ್ಯಕ್ರಮವನ್ನು ಆರಂಭಿಸಲಾಗಿದೆ.
- ಇ-ಬೈಕ್ ಟ್ಯಾಕ್ಸಿ ಸೇವೆಗಳಿಗೆ ಸರ್ಕಾರ ಅನುಮತಿಸಿದ್ದು, ಶೀಘ್ರದಲ್ಲೇ ಬೆಂಗಳೂರಿನ ರಸ್ತೆಗಳಲ್ಲಿ ಸಂಚರಿಸಲಿವೆ. ಸಾರಿಗೆ ಇಲಾಖೆಯು ವಿಕೆಡ್ ರೈಡ್, ಬೌನ್ಸ್ ಎಂಬ ಖಾಸಗಿ ಸಂಸ್ಥೆಗೆ ಪರವಾನಗಿ ನೀಡಲಾಗಿದೆ. 15 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಗ್ರಾಹಕರು ಇ-ಬೈಕ್ಗಳನ್ನು ಬಾಡಿಗೆಗೆ ಪಡೆಯಬಹುದು.
- ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ (ಎಂಜಿಎನ್ಆರ್ಇಜಿಎ) ಅಡಿಯಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯದ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆ ಮಹತ್ವದ ಆದೇಶವನ್ನು ಹೊರಡಿಸಿದೆ. ಯೋಜನೆಯಡಿ ವಿಶೇಷ ಚೇತನರು ಮತ್ತು ಹಿರಿಯ ನಾಗರಿಕರಿಗೆ ದಿನಕ್ಕೆ ನಿಗದಿತ ಕೂಲಿ ಪಡೆಯಲು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.50 ರಷ್ಟು ರಿಯಾಯಿತಿಯನ್ನು ರಾಜ್ಯ ಸರ್ಕಾರ ನೀಡಿದೆ. ಸದ್ಯ ಮಹಿಳೆಯರ ಭಾಗವಹಿಸುವಿಕೆ ಶೇ.51ರಷ್ಟಿದ್ದು, ಇದನ್ನು ಶೇ.60 ಕ್ಕೆ ಹೆಚ್ಚಿಸುವ ಗುರಿ ಇದೆ.
- ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯಿಂದ ವಿಶ್ವದಲ್ಲಿಯೇ ಪ್ರಥಮ ಬಾರಿಗೆ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಸ್ಕೌಟ್ಸ್ ಅಂಡ್ ಗೈಡ್ಸ್ ಜಾಂಬೂರಿಯನ್ನು ಆಯೋಜಿಸಲಾಗಿದೆ.ನಡೆಯುತ್ತಿರುವ ಸ್ಥಳ : ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿರುವ ವಿದ್ಯಾಗಿರಿಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ. ಧ್ಯೇಯ : ಏಕ ಭಾರತ ಶ್ರೇಷ್ಟ ಭಾರತ (ಸಂಸ್ಕೃತಿಯಿಂದ ಯುವ ಜನರ ಏಕತೆ)