Published on: January 17, 2023
ಸ್ತ್ರೀ ಶಕ್ತಿ ಯೋಜನೆ
ಸ್ತ್ರೀ ಶಕ್ತಿ ಯೋಜನೆ
ಸುದ್ದಿಯಲ್ಲಿ ಏಕಿದೆ? ಪ್ರತಿ ಕುಟುಂಬಕ್ಕೆ ಮನೆ ನಿರ್ವಹಣೆ ಮಾಡುವ ಹೆಣ್ಣು ಮಕ್ಕಳಿಗಾಗಿ ಮುಂದಿನ ಬಜೆಟ್ ನಲ್ಲಿ ವಿಶೇಷ ಕಾರ್ಯಕ್ರಮವನ್ನು ನೀಡಲಾಗುವುದು. ಸ್ತ್ರೀ ಸಾಮರ್ಥ್ಯದ ಜೊತೆಗೆ ಸ್ತ್ರೀ ಶಕ್ತಿ ಯೋಜನೆಯಡಿ ಮನೆ ನಡೆಸಲು, ಕೋವಿಡ್ ಉಪಚಾರ, ಆರೋಗ್ಯ, ಮುಂತಾದವುಕ್ಕೆ ಸಹಾಯವಾಗುವ ವಿಶೇಷ ಯೋಜನೆ ಇದಾಗಿದೆ
ಮುಖ್ಯಾಂಶಗಳು
- ಕೋವಿಡ್ ಹಾಗೂ ಪ್ರವಾಹದ ಕಾರಣದಿಂದ ದುಡಿಯುವ ವರ್ಗಕ್ಕೆ ಸಹಾಯ ಹಾಗೂ ಹೆಣ್ಣು ಮಕ್ಕಳಿಗೆ ಸಹಾಯ ಮಾಡುವ ಯೋಜನೆಗಳನ್ನು ಸರ್ಕಾರ ರೂಪಿಸುತ್ತಿದ್ದು, ಒಂದು ಕುಟುಂಬದ ಮಹಿಳೆ ಸ್ವತಂತ್ರವಾಗಿ ಕನಿಷ್ಠ ಮನೆ ನಿರ್ವಹಣೆಗೆ ಅಗತ್ಯವಿರುವ ಆರ್ಥಿಕ ನೆರವು ನೀಡಲಾಗುವ ಯೋಜನೆಯಾಗಿದೆ.
- ಪ್ರತಿ ಕುಟುಂಬದ ಅಗತ್ಯವನ್ನು ನೋಡಿಕೊಂಡು ಎಷ್ಟು ವೆಚ್ಚವಾಗುತ್ತದೆ ಎನ್ನುವುದನ್ನು ಪರಿಗಣಿಸಿ ಮನೆಯ ಜವಾಬ್ದಾರಿ ನೋಡಿಕೊಳ್ಳುವ ಮಹಿಳೆಗೆ 1000, 1500, 2000, ನೀಡಲಾಗುವುದು.
ಯುವಕರಿಗೆ, ಮಹಿಳೆಯರಿಗೆ ಶಕ್ತಿ ತುಂಬುವ ಕಾರ್ಯಕ್ರಮ
ಯುವಕರಿಗೆ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ, 5 ಲಕ್ಷ ಯುವಕರಿಗೆ ಸ್ವಯಂ ಉದ್ಯೋಗಕ್ಕೆ ಒಂದು ಲಕ್ಷ ನೀಡಿ, ಬ್ಯಾಂಕ್ ನೊಂದಿಗೆ ಕೈ ಜೋಡಿಸಿ ಅವರನ್ನು ಸ್ವಾವಲಂಬಿ ಮಾಡಲು ಪ್ರಾರಂಭದಿಂದ ಅಂತ್ಯದವರೆಗೆ ಸಾಮೀಪ್ಯವುಳ್ಳ ಕಾರ್ಯಕ್ರಮ ಇದಾಗಿದೆ.
ಸ್ತ್ರೀ ಸಾಮರ್ಥ್ಯ ಯೋಜನೆ: ಪ್ರತಿ ಗ್ರಾಮದಲ್ಲಿ 2 ಸ್ತ್ರೀ ಶಕ್ತಿ ಸಂಘಕ್ಕೆ 5 ಲಕ್ಷ ರೂ.ವರೆಗೆ ಸಹಾಯಧನ ನೀಡಲಾಗುವುದು. ಜನವರಿ ಅಂತ್ಯ ಹಾಗೂ ಫೆಬ್ರವರಿ ಪ್ರಾರಂಭದಲ್ಲಿ ಚಾಲನೆ ನೀಡಲಾಗುವುದು.