Published on: January 20, 2023

ಒಂದು ದೇಶ-ಒಂದು ಪೊಲೀಸ್ ಸಮವಸ್ತ್ರ

ಒಂದು ದೇಶ-ಒಂದು ಪೊಲೀಸ್ ಸಮವಸ್ತ್ರ


ಸುದ್ದಿಯಲ್ಲಿ ಏಕಿದೆ? ದೇಶದ ಎಲ್ಲಾ ರಾಜ್ಯಗಳ ಪೊಲೀಸರಿಗೆ ಒಂದೇ ರೀತಿಯ ಸಮವಸ್ತ್ರ ಜಾರಿಗೆ ತರುವ ಸಂಬಂಧ ಕೇಂದ್ರ ಸರ್ಕಾರ ಕಳುಹಿಸಿದ್ದ ಒಂದು ದೇಶ, ಒಂದು ಸಮವಸ್ತ್ರ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ.


ಮುಖ್ಯಾಂಶಗಳು

  • ದೇಶದ ಎಲ್ಲಾ ರಾಜ್ಯಗಳ ಪೊಲೀಸರಿಗೆ ಅನ್ವಯವಾಗುವಂತಹ ಏಕರೂಪದ ಸಮವಸ್ತ್ರ ಪದ್ಧತಿ ಜಾರಿಗೆ ತರಬೇಕೆಂದು ಕೇಂದ್ರ ಸರ್ಕಾರ ಪ್ರಸ್ತಾವನೆ ಸಲ್ಲಿಸಿ ರಾಜ್ಯ ಸರ್ಕಾರಗಳ ಅಭಿಪ್ರಾಯ ಕೇಳಿತ್ತು.

ಉದ್ದೇಶ

  • ದೇಶದ ಎಲ್ಲ ರಾಜ್ಯಗಳಲ್ಲೂ ಪೊಲೀಸರಿಗೆ ಒಂದೇ ರೀತಿಯ ಸಮವಸ್ತ್ರ ನಿಗದಿಪಡಿಸುವುದು ಅಗತ್ಯವಾಗಿದೆ. ಇದು ದೇಶದ ಕಾನೂನು ಅನುಷ್ಠಾನ ಸಂಸ್ಥೆಗಳ ಸಿಬ್ಬಂದಿಯ ಗುರುತಿನಲ್ಲಿ ಏಕತೆ ತರಲಿದೆ. ಒಂದು ಸಮವಸ್ತ್ರ ನೀತಿ ಜಾರಿಗೊಂಡ ದಿನದಿಂದಲೇ ಕರ್ನಾಟಕದಲ್ಲಿ ಅದನ್ನು ಅನುಷ್ಠಾನಕ್ಕೆ ತರಲಾಗುವುದು.

ಏನಿದು ಒಂದು ದೇಶ, ಒಂದೇ ಸಮವಸ್ತ್ರ?

  • ಪ್ರಸ್ತುತ ಎಲ್ಲಾ ರಾಜ್ಯಗಳ ಪೊಲೀಸ್ ಇಲಾಖೆಗಳು ಪ್ರತ್ಯೇಕ ಪೊಲೀಸ್ ಸಮವಸ್ತ್ರವನ್ನು ಹೊಂದಿವೆ.  ‘ಒಂದು ರಾಷ್ಟ್ರ, ಒಂದು ಸಮವಸ್ತ್ರ’ ಅಡಿಯಲ್ಲಿ ದೇಶದಾದ್ಯಂತ ಇರುವ ಎಲ್ಲಾ ರಾಜ್ಯ ಪೊಲೀಸರು ಒಂದೇ ಸಮವಸ್ತ್ರವನ್ನು ಹೊಂದಿರಬೇಕು ಎನ್ನುವುದು ಈ ಪ್ರಸ್ತಾವನೆಯ ಉದ್ದೇಶ.  ಒಂದು ವೇಳೆ ಇದು ಜಾರಿಯಾದರೆ ‘ಒಂದು ರಾಷ್ಟ್ರ, ಒಂದು ಸಮವಸ್ತ್ರ’ ಅಡಿಯಲ್ಲಿ ದೇಶದಾದ್ಯಂತ ಇರುವ ಎಲ್ಲಾ ರಾಜ್ಯ ಪೊಲೀಸರು ಒಂದೇ ಸಮವಸ್ತ್ರವನ್ನು ಹೊಂದಿರುತ್ತಾರೆ.