Published on: March 10, 2023

ಸ್ತ್ರೀ ಸಾಮರ್ಥ್ಯ-ನಮೋ ಸ್ತ್ರೀ ಯೋಜನೆ

ಸ್ತ್ರೀ ಸಾಮರ್ಥ್ಯ-ನಮೋ ಸ್ತ್ರೀ ಯೋಜನೆ


ಸುದ್ದಿಯಲ್ಲಿ ಏಕಿದೆ? ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಮಹಿಳಾ ಸ್ವ-ಸಹಾಯ ಗುಂಪುಗಳ (ಎಸ್‌ಎಚ್‌ಜಿ) ಬೆಂಬಲಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ‘ಸ್ತ್ರೀ ಸಾಮರ್ಥ್ಯ-ನಮೋ ಸ್ತ್ರೀ ಯೋಜನೆ’ಗೆ ಚಾಲನೆ ನೀಡಿದರು.


ಮುಖ್ಯಾಂಶಗಳು

  • ಮೌಲ್ಯವರ್ಧನೆ, ಬ್ರ್ಯಾಂಡಿಂಗ್, ಪ್ಯಾಕಿಂಗ್ ಮತ್ತು ಮಾರುಕಟ್ಟೆ, ಕೇರಳದ ಕುಟುಂಬಶ್ರೀ ಸೇರಿದಂತೆ ಎಂಟು ಸಂಸ್ಥೆಗಳೊಂದಿಗೆ ತಾಂತ್ರಿಕ ಬೆಂಬಲ ಒಡಂಬಡಿಕೆ ಮಾಡಿಕೊಳ್ಳಲಾಯಿತು.
  • ಜಾರಿಗೊಳಿಸುವವರು : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ

ಯೋಜನೆಯ ವಿವರ

  • ಯೋಜನೆಗೆ 500 ಕೋಟಿ ರೂಪಾಯಿ ಮತ್ತು ಈಗ ಮೊದಲ ಹಂತದ 100 ಕೋಟಿಯಲ್ಲಿ 9,890 ಮಹಿಳಾ ಸ್ವ ಸಹಾಯ ಗುಂಪುಗಳಿಗೆ ತಲಾ 1 ಲಕ್ಷ ರೂಪಾಯಿಯನ್ನು ಕೊಡಲಾಗಿದೆ.
  • ಯೋಜನೆಯಡಿ ಮುಖ್ಯವಾಗಿ ಪ್ರತಿ ಜಿಲ್ಲೆಯಲ್ಲಿ 3 ಉದ್ಯಮ ಘಟಕಗಳು ಮತ್ತು 15 ಉತ್ಪನ್ನಗಳ ತಯಾರಿಕಾ ಘಟಕಗಳನ್ನು ಸ್ಥಾಪಿಸಲು 50,000 ಫಲಾನುಭವಿ ಸಂಘಗಳನ್ನು ಗುರುತಿಸಲಾಗಿದೆ.
  • ಯೋಜನೆಯಡಿ ಒಟ್ಟು 50,000 ಮಹಿಳೆಯರಿಗೆ ವಿವಿಧ ತರಬೇತಿಗಳನ್ನು ನೀಡಿ ಉದ್ಯಮ ಕೈಗೊಳ್ಳಲು ಬೆಂಬಲಿಸಲಾಗುವುದು.
  • ಈ ಯೋಜನೆಯಡಿ 500 ಕೋಟಿ ರೂಪಾಯಿ ಹಣವನ್ನು 50,000 ಸ್ವಸಹಾಯ ಸಂಘಗಳಿಗೆ ತಲಾ 1 ಲಕ್ಷದಂತೆ ನೀಡುವುದು ಸರ್ಕಾರದ ಗುರಿ.
  • ಫಲಾನುಭವಿ ಸಂಘಗಳ ಖಾತೆಗೆ ನೇರವಾಗಿ ಆನ್ ಲೈನ್ ಮೂಲಕ ಜಮೆ ಮಾಡಲಾಗಿದೆ. ಏಪ್ರಿಲ್ ತಿಂಗಳಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಮಹಿಳಾ ಸ್ವಸಹಾಯ ಗುಂಪುಗಳ ಕಾರ್ಯ ಚಟುವಟಿಕೆಗಳಿಗೆ ಚಾಲನೆ ಕೊಡಲಾಗುವುದು
  • ಶುದ್ದ ಗಾಣದ ಎಣ್ಣೆ, ಫ್ಲೋರ್ ಕ್ಲೀನರ್, ಉಪ್ಪಿನಕಾಯಿ, ಹಣ್ಣಿನ ಜಾಮ್, ಬಾಳೆಕಾಯಿ, ಹಲಸಿನ ಚಿಪ್ಸ್, ಜೋಳದ ರೊಟ್ಟಿ, ಹಪ್ಪಳ, ಮಣ್ಣಿನ ವಸ್ತುಗಳು, ಗೃಹೋಪಯೋಗಿ ಹಾಗೂ ಗೃಹ ಅಲಂಕಾರಿಕ ವಸ್ತುಗಳು, ಸೆಣಬಿನ ಕೈ ಚೀಲಗಳು, ರಾಗಿ ಬಿಸ್ಕತ್ತು, ಯೋಗ ಮ್ಯಾಟ್ ಇತ್ಯಾದಿ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಯಿದೆ

ನಿಮಗಿದು ತಿಳಿದಿರಲಿ

2023-24ನೇ ಸಾಲಿನ ಕರ್ನಾಟಕ ಆಯವ್ಯಯದಲ್ಲಿ ಮಹಿಳೆಯರಿಗೆ ನೀಡಿದ ಸವಲತ್ತುಗಳು

  • ರಾಜ್ಯ ಸರ್ಕಾರವು 2023-24ನೇ ಸಾಲಿನ ಆಯವ್ಯಯದಲ್ಲಿ ಮಹಿಳೆಯರ ಸಬಲೀಕರಣ ಹಾಗೂ ಕ್ಷೇಮಾಭಿವೃದ್ಧಿಗೆ ಒಟ್ಟಾರೆ ರೂ. 46,278 ಕೋಟಿಗಳ ಅನುದಾನ ಒದಗಿಸಿದೆ.
  • ಪ್ರಸಕ್ತ ಸಾಲಿನಲ್ಲಿ 45,000 ಮಹಿಳಾ ಸ್ವಸಹಾಯ ಗುಂಪುಗಳಿಗೆ 1,800 ಕೋಟಿ ರೂ. ಗಳಷ್ಟು ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ ವಿತರಿಸುವ ಗುರಿ ಇದೆ.
  • ಮಹಿಳೆಯರಿಗೆ ಬಡ್ಡಿ ರಹಿತ ಸಾಲ ಮತ್ತು ತರಬೇತಿ ನೀಡಲಾಗುವುದು. ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) 2026 ರ ವೇಳೆಗೆ ಐದು ಲಕ್ಷ ಮಹಿಳೆಯರಿಗೆ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಿದೆ. ಮಹಿಳಾ ಉದ್ಯೋಗಿಗಳನ್ನು ಸಬಲೀಕರಣಗೊಳಿಸಲು ಕೆಡಿಇಎಂ ಕೈಗಾರಿಕೆಗಳೊಂದಿಗೆ ಏಳು ಒಪ್ಪಂದಗಳಿಗೆ ಸಹಿ ಹಾಕಿದೆ.
  • ಗೃಹಿಣಿ ಶಕ್ತಿ ಯೋಜನೆಯಡಿ ಭೂರಹಿತ ರೈತ ಮಹಿಳೆಯರಿಗಾಗಿ ಮಾಸಿಕ ರೂ. 500 ಗಳನ್ನು ನೀಡಲಾಗುವುದು. 1 ಲಕ್ಷ ಮಹಿಳೆಯರಿಗೆ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು, ಮಹಿಳೆಯರ ಅಪೌಷ್ಟಿಕತೆ ತಡೆಯಲು ಅಂಗನವಾಡಿಗಳ ಮೂಲಕ ಬಿಸಿಯೂಟ ನೀಡಲಾಗುವುದು.
  • ವಿದ್ಯಾರ್ಥಿನಿಯರಿಗೆ 350 ಕೊಟಿ ರೂ.ಗಳ ವೆಚ್ಚದಲ್ಲಿ ಉಚಿತ ಬಸ್‌ಪಾಸ್‌ ಸೌಲಭ್ಯ ಒದಗಿಸಲಾಗುತ್ತಿದ್ದು, ಒಟ್ಟು 8 ಲಕ್ಷ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲಿದೆ.
  • ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಅನುಕೂಲ ಮಾಡಿಕೊಡಲು ನಗರ ಪ್ರದೇಶದಲ್ಲಿ 4,000 ಶಿಶುಪಾಲನಾ ಕೇಂದ್ರಗಳನ್ನು ಕಾರ್ಯಾರಂಭಗೊಳಿಸಲಾಗುವುದು”.