Published on: July 4, 2023
ರಾಷ್ಟ್ರೀಯ ವೈದ್ಯರ ದಿನ
ರಾಷ್ಟ್ರೀಯ ವೈದ್ಯರ ದಿನ
ಸುದ್ದಿಯಲ್ಲಿ ಏಕಿದೆ? ಪ್ರತಿ ವರ್ಷ ಜುಲೈ 1 ರಂದು ರಾಷ್ಟ್ರೀಯ ವೈದ್ಯರ ದಿನವನ್ನ ವೈದ್ಯರಿಗೆ ವಿಶೇಷ ಗೌರವ ನೀಡುವ ಸಲುವಾಗಿ ಆಚರಿಸಲಾಗುತ್ತದೆ. ಭಾರತದಲ್ಲಿ 1991 ರಲ್ಲಿ ಮೊದಲ ಬಾರಿ ವೈದ್ಯರ ದಿನವನ್ನು ಆಚರಿಸಲಾಯಿತು.
ಮುಖ್ಯಾಂಶಗಳು
- ಪಶ್ಚಿಮ ಬಂಗಾಳದ ಎರಡನೇ ಮುಖ್ಯಮಂತ್ರಿ ಹಾಗೂ ಶ್ರೇಷ್ಠ ವೈದ್ಯ ಬಿಧನ್ ಚಂದ್ರ ರಾಯ್ ನೀಡಿರುವ ಕೊಡುಗೆ ಪರಿಗಣಿಸಿ, ಅವರ ಜ್ಞಾಪಕಾರ್ಥವಾಗಿ ಪ್ರತಿ ವರ್ಷ ಜುಲೈ 1 ರಂದು ರಾಷ್ಟ್ರೀಯ ವೈದ್ಯ ದಿನವಾಗಿ ಆಚರಿಸಲು ತೀರ್ಮಾನಿಸಲಾಯಿತು.
- ಬಿಧನ್ ಚಂದ್ರ ರಾಯ್ ಅವರು ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ ಹಾಗೂ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ಧರು. ಈ ಹಿನ್ನಲೆಯಲ್ಲಿ ಅವರ ಜನ್ಮ ದಿನ ಮತ್ತು ಪುಣ್ಯಸ್ಮರಣೆ ದಿನವನ್ನೇ ರಾಷ್ಟ್ರೀಯ ವೈದ್ಯಕೀಯ ದಿನ ಎಂದು ಘೋಷಿಸಲಾಯಿತು.
ಉದ್ದೇಶ
- ರಾಷ್ಟ್ರೀಯ ವೈದ್ಯರ ದಿನದಂದು, ವೈದ್ಯರ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುತ್ತದೆ. ಅಲ್ಲದೇ ನಮ್ಮ ಜೀವನಕ್ಕೆ ವೈದ್ಯರು ನೀಡಿದ ಕೊಡುಗೆಯನ್ನು ಸ್ಮರಿಸಿ ಪ್ರಶಂಸಿಸಲಾಗುತ್ತದೆ. ಈ ವಿಶೇಷ ದಿನವನ್ನು ಜನರ ಸೇವೆಗಾಗಿ ಪ್ರಾಣವನ್ನೇ ಪಣಕ್ಕಿಟ್ಟಿರುವ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಸಮರ್ಪಿಸಲಾಗುತ್ತದೆ.
2023 ರ ಥೀಮ್ : “Celebrating Resilience and Healing Hands.” “ಸ್ಥಿತಿಸ್ಥಾಪಕತ್ವವನ್ನು ಮತ್ತು ಗುಣಪಡಿಸುವ ಕೈಗಳನ್ನು ಗೌರವಿಸುವುದು”.
ಡಾ. ಬಿಧನ್ ಚಂದ್ರ ರಾಯ್
- ಡಾ. ಬಿಧನ್ ಚಂದ್ರ ರಾಯ್ ಪಶ್ಚಿಮ ಬಂಗಾಳದ ಮಾಜಿ ಮುಖ್ಯ ಮಂತ್ರಿ, ಹಾಗೂ ಶೇಷ್ಠ ವೈದ್ಯರು. ಡಾ. ಬಿಧನ್ ಚಂದ್ರ ರಾಯ್ ಅವರು ಜುಲೈ 1, 1882 ರಂದು ಪಶ್ಚಿಮ ಬಂಗಾಳದಲ್ಲಿ ಜನಿಸಿದರು. ಇವರು ಜುಲೈ 1,1962 ರಲ್ಲಿ ಮರಣ ಹೊಂದಿದರು. ಬಿ ಸಿ ರಾಯ್ ಅವರು ವೈದ್ಯಕೀಯ ರಂಗಕ್ಕೆ ಅಮೋಘ ಕೋಡುಗೆಯನ್ನು ನೀಡಿದ್ದಾರೆ. ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ನೀಡಿದ ಕೊಡುಗೆಗಾಗಿ ಇವರಿಗೆ ಫೆಬ್ರವರಿ 4, 1961 ರಲ್ಲಿ ಭಾರತ ರತ್ನ ಪ್ರಶಸ್ತಿಯನ್ನು ನೀಡಲಾಯಿತು.