Published on: September 8, 2023
ಕ್ಷೀರಭಾಗ್ಯ ದಶಮಾನೋತ್ಸವ
ಕ್ಷೀರಭಾಗ್ಯ ದಶಮಾನೋತ್ಸವ
ಸುದ್ದಿಯಲ್ಲಿ ಏಕಿದೆ? ಕ್ಷೀರ ಭಾಗ್ಯ ಜಾರಿಯಾಗಿ 10 ವರ್ಷ ಪೂರೈಸಿದ್ದು, ಈ ಹಿನ್ನೆಲೆಯಲ್ಲಿ ದಶಮಾನೋತ್ಸವ ಕಾರ್ಯಕ್ರಮವನ್ನು ತುಮಕೂರು ಜಿಲ್ಲೆಯ ಮಧುಗಿರಿಯ ಗಾಂಧಿ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಕ್ಷೀರಭಾಗ್ಯ ದಶಮಾನೋತ್ಸವ ಸಮಾರಂಭ ಮತ್ತು ರಾಜ್ಯ ಮಟ್ಟದ ಹಾಲು ಉತ್ಪಾದಕರ ಸಮಾವೇಶವನ್ನು ಆಯೋಜಿಸಲಾಗಿತ್ತು.
ಮುಖ್ಯಾಂಶಗಳು
- 2013ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಮೊದಲ ಅವಧಿಯಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗಿತ್ತು.
- ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1 ರಿಂದ 10 ನೇ ತರಗತಿಯವರೆಗೆ ಓದುತ್ತಿರುವ 65 ಲಕ್ಷಕ್ಕೂ ಹೆಚ್ಚು ಮಕ್ಕಳು ಕ್ಷೀರಭಾಗ್ಯದ ಪ್ರಯೋಜನವನ್ನು ಪಡೆಯುತ್ತಿದ್ದಾರೆ
ಕ್ಷೀರ ಭಾಗ್ಯ ಯೋಜನೆ
- ಸಹಯೋಗ: ರಾಜ್ಯ ಸರ್ಕಾರ ಮತ್ತು ಕರ್ನಾಟಕ ಹಾಲು ಮಹಾಮಂಡಳಿ
- ಜಾರಿ:ದಿನಾಂಕ 1 ಆಗಸ್ಟ್ 2013 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಮಕ್ಕಳಿಗೆ ಹಾಲು ವಿತರಿಸುವ ಮೂಲಕ ಕ್ಷೀರಭಾಗ್ಯ ಯೋಜನೆಗೆ ರಾಜ್ಯಾದ್ಯಂತ ಚಾಲನೆ ನೀಡಲಾಗಿತ್ತು.
- ರಾಜ್ಯದ ಸರಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಮತ್ತು ಅಂಗನವಾಡಿ ಮಕ್ಕಳಿಗೆ 18 ಗ್ರಾಂ ಕೆನೆಭರಿತ ಹಾಲಿನ ಪುಡಿಯಿಂದ ತಯಾರಿಸಿದ 150 ಮಿ.ಲೀ. ಹಾಲನ್ನು ವಾರದಲ್ಲಿ 03 ದಿನ (ಒಂದು ದಿನ ಬಿಟ್ಟು ಒಂದು ದಿನ ) ಉಚಿತವಾಗಿ ನೀಡುವ ಯೋಜನೆಯಾಗಿದೆ ಹಾಗೂ ಹಾಲು ಉತ್ಪಾದಕರು ತಯಾರಿಸುವ ಹೆಚ್ಚುವರಿ ಹಾಲಿನ ವಿಲೇವಾರಿಗೆ ಅನುವು ಮಾಡಿಕೊಡಲು ಕ್ಷೀರಭಾಗ್ಯ ಯೋಜನೆ ಸಹಕಾರಿಯಾಗಿದೆ.
- ಯೋಜನೆಗೆ ಕರ್ನಾಟಕ ಹಾಲು ಮಹಾಮಂಡಳಿಯು ಕಾರ್ಯಕ್ರಮಕ್ಕೆ ಅಗತ್ಯ ಕೆನೆಭರಿತ ಹಾಲಿನ ಪುಡಿಯನ್ನು ಶಾಲಾ ಬಾಗಿಲಿಗೆ ಸರಬರಾಜು ಮಾಡುತ್ತದೆ.
ಉದ್ದೇಶ :
- ಮಕ್ಕಳ ಆರೋಗ್ಯಪೂರ್ಣ ಬೆಳವಣಿಗೆ ಹಾಗೂ ಸರ್ವಾಂಗೀಣ ಅಭಿವೃದ್ಧಿಗಾಗಿ ಅವಶ್ಯವಿರುವ ಪೌಷ್ಟಿಕ ಆಹಾರವನ್ನು ಒದಗಿಸುವ ದಿಸೆಯಲ್ಲಿ ಮತ್ತು ಸಮಾಜದಲ್ಲಿ ಅಪೌಷ್ಟಿಕತೆಯಿಂದ ಕೂಡಿದ ಮಕ್ಕಳನ್ನು ಸಶಕ್ತರನ್ನಾಗಿ ಮಾಡಿ ಆ ಮೂಲಕ ಸದೃಢ ಸಮಾಜ ಸ್ಥಾಪಿಸಲು ಸರಕಾರ ರಾಜ್ಯದಲ್ಲಿ ಕ್ಷೀರಭಾಗ್ಯ ಯೋಜನೆ ಜಾರಿಗೆ ತಂದಿದೆ