Published on: August 10, 2021
ಕಿಸಾನ್ ಸಮ್ಮಾನ್ ಯೋಜನೆ
ಕಿಸಾನ್ ಸಮ್ಮಾನ್ ಯೋಜನೆ
ಸುದ್ಧಿಯಲ್ಲಿ ಏಕಿದೆ ? ಪ್ರಸಕ್ತ ಸಾಲಿನ ಕಿಸಾನ್ ಸಮ್ಮಾನ್ ಯೋಜನೆಯಡಿ ಎರಡನೇ ಕಂತಿನಲ್ಲಿ ಕರ್ನಾಟಕ ರಾಜ್ಯದ 51.19 ಲಕ್ಷ ರೈತರಿಗೆ 1023 ಕೋಟಿ ರೂ .ಗಳನ್ನು ಬಿಡುಗಡೆ ಮಾಡಲಾಗಿದ್ದು, ಎರಡನೇ ಕಂತಿನಲ್ಲಿ ಬಿಡುಗಡೆಯಾದ ಹಣವನ್ನು ರೈತರ ಖಾತೆಗಳಿಗೆ ನೀಡಲಾಗಿದೆ.
ಯೋಜನೆ ಬಗ್ಗೆ
- ಕರ್ನಾಟಕ ರಾಜ್ಯದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಫೆ.1,2019 ರಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಸಾಗುವಳಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತ ಕುಟುಂಬಕ್ಕೆ ಕೇಂದ್ರ ಸರ್ಕಾರ ವಾರ್ಷಿಕವಾಗಿ 6 ಸಾವಿರ ರೂ.ಗಳ ಆರ್ಥಿಕ ನೆರವನ್ನು ನೀಡಲಾಗುತ್ತಿದ್ದು, ಈ ಅನುದಾನವನ್ನು 2 ಸಾವಿರ ರೂ.ಗಳಂತೆ ಮೂರು ಕಂತುಗಳಲ್ಲಿ ನಾಲ್ಕು ತಿಂಗಳಿಗೊಮ್ಮೆ ನೀಡಲಾಗುತ್ತಿದೆ.
- ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ಅನುಮೋದಿಸಲ್ಪಟ್ಟ ರೈತರಿಗೆ ಎರಡು ಕಂತುಗಳಲ್ಲಿ ವರ್ಷಕ್ಕೆ 4 ಸಾವಿರ ರೂ.ನಂತೆ ಆರ್ಥಿಕ ನೆರವು ವರ್ಗಾವಣೆಗೆ ಆದೇಶ ಹೊರಡಿಸಲಾಗಿದ್ದು, ಇಲ್ಲಿಯವರೆಗೆ 16 ಕೋಟಿ ರೂ.ಗಳ ಆರ್ಥಿಕ ಸಹಾಯಧನವನ್ನು ನೀಡಲಾಗಿದೆ.
- ಆಧಾರ್ ಆಧಾರಿತ ಡಿಬಿಟಿ ಮುಖಾಂತರ ಪಾವತಿ ಮಾಡಲಾಗುತ್ತಿದ್ದು, ದೇಶದಲ್ಲಿ ಎಲ್ಲಾ ರಾಜ್ಯಗಳ ಪೈಕಿ ಕರ್ನಾಟಕ ರಾಜ್ಯವು ಅತಿಹೆಚ್ಚು ಶೇಕಡಾವಾರು ಆಧಾರ್ ಆಧಾರಿತ ವಹಿವಾಟುಗಳನ್ನು ಅತ್ಯುತ್ತಮವಾಗಿ ನಿರ್ವಹಿಸಿದ್ದರಿಂದ 2020-21 ರಲ್ಲಿ ಭಾರತ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ಪ್ರಶಸ್ತಿಯೂ ದೊರೆತಿದೆ.