ನೆಲ್ಸನ್ ಮಂಡೇಲಾ ಪ್ರಶಸ್ತಿ 2024
ನೆಲ್ಸನ್ ಮಂಡೇಲಾ ಪ್ರಶಸ್ತಿ 2024
ಸುದ್ದಿಯಲ್ಲಿ ಏಕಿದೆ? ಆರೋಗ್ಯ ಜಾಗೃತಿ ಮೂಡಿಸುವ ವಿಷಯದಲ್ಲಿ ಗಮನಾರ್ಹ ಸಾಧನೆ ಮಾಡಿದ ಕಾರಣಕ್ಕೆ ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ(ನಿಮ್ಹಾನ್ಸ್) ಅನ್ನು ವಿಶ್ವ ಆರೋಗ್ಯ ಸಂಸ್ಥೆಯು (ಡಬ್ಲ್ಯುಎಚ್ಒ) 2024ನೇ ಸಾಲಿನ ನೆಲ್ಸನ್ ಮಂಡೇಲಾ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಮುಖ್ಯಾಂಶಗಳು
ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಬಹಳಮುಖ್ಯವಾದ ಕೆಲಸಗಳನ್ನು ಮಾಡುತ್ತಿರುವ ನಿಮ್ಹಾನ್ಸ್ಗೆ ಪ್ರಶಸ್ತಿ ಸಂದಿದೆ.
ನಿಮ್ಹಾನ್ಸ್ ತನ್ನ ರಚನೆಯ 50 ವರ್ಷಗಳನ್ನು ಮತ್ತು ಅದರ ಪೂರ್ವಭಾವಿ ಸಂಸ್ಥೆಯಾದ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ (AIIMH) ನ 70 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವಾಗ ಈ ಪ್ರಶಸ್ತಿ ಸಂದಿರುವುದು ವಿಶೇಷವಾಗಿದೆ
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ
ಸ್ಥಳ: ಬೆಂಗಳೂರು
ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಸ್ವಾಯತ್ತ ಸಂಸ್ಥೆಯಾಗಿದೆ
“ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಚೌಕಟ್ಟು (NIRF)” ನಿಂದ ನೀಡುವ ಶ್ರೇಯಾಂಕದ ಪ್ರಕಾರ ಭಾರತದಲ್ಲಿ 4 ನೇ ಅತ್ಯುತ್ತಮ ವೈದ್ಯಕೀಯ ಸಂಸ್ಥೆಯಾಗಿದೆ
ಇತಿಹಾಸ
- ಸ್ಥಾಪನೆ: 1847 ರಲ್ಲಿ ಹುಚ್ಚಾಸ್ಪತ್ರೆಯಾಗಿ ಸ್ಥಾಪಿಸಲಾಯಿತು.
- 1925 ರಲ್ಲಿ ಮಾನಸಿಕ ರೋಗಿಗಳ ಆಸ್ಪತ್ರೆ ಎಂದು ಮರುನಾಮಕರಣ ಮಾಡಲಾಯಿತು.
- 1974 ರಲ್ಲಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಅನ್ನು 1954 ರಲ್ಲಿ ಭಾರತ ಸರ್ಕಾರದಿಂದ ಸ್ಥಾಪಿಸಲಾದ ಹಿಂದಿನ ರಾಜ್ಯ ಮಾನಸಿಕ ರೋಗಿಗಳ ಆಸ್ಪತ್ರೆ ಮತ್ತು ಅಖಿಲ ಭಾರತ ಮಾನಸಿಕ ಆರೋಗ್ಯ ಸಂಸ್ಥೆ (AIIMH) ಗಳನ್ನು ಸಂಯೋಜಿಸಿ ರೂಪಿಸಲಾಯಿತು.
- 1994 ರಲ್ಲಿ ವಿಶ್ವವಿದ್ಯಾನಿಲಯ ಅನುದಾನ ಆಯೋಗದಿಂದ ಡೀಮ್ಡ್ ವಿಶ್ವವಿದ್ಯಾಲಯದ ಸ್ಥಾನಮಾನವನ್ನು ನೀಡಲಾಗಿದೆ.
- 2012 ರಲ್ಲಿ ಸಂಸತ್ತಿನ ಕಾಯಿದೆಯ ಮೂಲಕ ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆ ಎಂದು ಘೋಷಿಸಲಾಯಿತು.
- ಧನಸಹಾಯ: ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಧನಸಹಾಯ ಮಾಡುವ ಸಂಸ್ಥೆಗಳಿಂದ ಶೈಕ್ಷಣಿಕ ಮತ್ತು ಸಂಶೋಧನಾ ಚಟುವಟಿಕೆಗಳಿಗೆ ಸಂಪನ್ಮೂಲಗಳನ್ನು ಪಡೆಯುತ್ತದೆ.
- ಪ್ರಶಸ್ತಿಯ ಬಗ್ಗೆ
- ಡಬ್ಲ್ಯು ಎಚ್ಒ 2019ರಿಂದ ನೆಲ್ಸನ್ ಮಂಡೇಲಾ ಪ್ರಶಸ್ತಿ ಪ್ರದಾನ ಮಾಡುತ್ತಾ ಬಂದಿದೆ.
- ಆರೋಗ್ಯ ಜಾಗೃತಿ ಮೂಡಿಸುವುದರಲ್ಲಿ ಮಹತ್ವದ ಪಾತ್ರ ವಹಿಸುವ ವ್ಯಕ್ತಿಗಳು, ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳನ್ನು ಈ ಪ್ರಶಸ್ತಿಯ ಮೂಲಕ ಗೌರವಿಸುತ್ತದೆ.
ನಿಮಗಿದು ತಿಳಿದಿರಲಿ
ಟೆಲಿ ಮನಸ್ ಯೋಜನೆ
- ವಿಶ್ವ ಮಾನಸಿಕ ಆರೋಗ್ಯ ದಿನ(ಅಕ್ಟೋ ಬರ್10) ದ ಅಂಗವಾಗಿ, ಕೇಂದ್ರ ಸರ್ಕಾರವು ಟೆಲಿ ಮೆಂಟಲ್ ಹೆಲ್ತ್ ಅಸಿಸ್ಟೆನ್ಸ್ ಮತ್ತು ನೆಟ್‌ವರ್ಕಿಂಗ್ ಅಕ್ರಾಸ್ ಸ್ಟೇಟ್ಸ್(ಟೆಲಿ-ಮನಸ್) ಎಂಬ ಯೋಜನೆ ಜಾರಿ ಮಾಡಿದೆ. ಕರ್ನಾಟಕದ ಇ-ಮನಸ್ ಯೋಜನೆಯೇ ಇದಕ್ಕೆ ಪ್ರೇರಣೆಯಾಗಿದೆ
- ಇದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಉಪಕ್ರಮವಾಗಿದೆ
- ನಿಮ್ಹಾನ್ಸ್ ನೋಡಲ್ ಕೇಂದ್ರವಾಗಿದ್ದು, ರಾಷ್ಟ್ರೀಯ ಆರೋಗ್ಯ ವ್ಯವಸ್ಥೆಗಳ ಸಂಪನ್ಮೂಲ ಕೇಂದ್ರ (NHRSC), IIT ಬೆಂಗಳೂರು ಮತ್ತು IIITB ತಂತ್ರಜ್ಞಾನ ಬೆಂಬಲವನ್ನು ಒದಗಿಸುತ್ತದೆ.