Published on: June 13, 2024
ಲ್ಯಾಂಡ್ ಬೀಟ್ ಪ್ರೋಗ್ರಾಂ
ಲ್ಯಾಂಡ್ ಬೀಟ್ ಪ್ರೋಗ್ರಾಂ
ಸುದ್ದಿಯಲ್ಲಿ ಏಕಿದೆ? ಕರ್ನಾಟಕ ಸರ್ಕಾರ, ಸರ್ಕಾರಿ ಜಮೀನುಗಳನ್ನು ರಕ್ಷಿಸಲು ‘ಲ್ಯಾಂಡ್ ಬೀಟ್ ಪ್ರೋಗ್ರಾಂ’ಗೆ ಚಾಲನೆ ನೀಡಿದೆ.
ಮುಖ್ಯಾಂಶಗಳು
- 14 ಲಕ್ಷ ಸರ್ಕಾರಿ ಆಸ್ತಿಗಳ ಡಿಜಿಟಲ್ ದಾಖಲೆಗಳನ್ನು ಒಳಗೊಂಡ (ಸರ್ವೆ ಸಂಖ್ಯೆ, ಭೌಗೋಳಿಕ ಗಡಿ ಸೇರಿದಂತೆ) ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ.
- ಜಿಪಿಎಸ್ ಬಳಸಿ ಪ್ರತಿ ಆಸ್ತಿಯನ್ನು ತಂತ್ರಾಂಶದಲ್ಲಿ ಮ್ಯಾಪ್ ಮಾಡಲಾಗುತ್ತದೆ. ಒತ್ತುವರಿ ಪರಿಶೀಲಿಸಲು ಅಧಿಕಾರಿಗಳು ಎಲ್ಲ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ.
- ಯಾವುದೇ ಸಮಸ್ಯೆಗಳನ್ನು ನೇರವಾಗಿ ತಂತ್ರಾಂಶದ ಮೂಲಕ ವರದಿ ಮಾಡುತ್ತಾರೆ. ನಂತರ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಲಾಗುವುದು.
ಉದ್ದೇಶ
ಇಲಾಖೆಯ ಅಧಿಕಾರಿಗಳ ಮತ್ತು ಗ್ರಾಮ ಆಡಳಿತಾಧಿಕಾರಿಗಳ ಪರಿಶ್ರಮದಿಂದಾಗಿ ಪ್ರತಿ ಗ್ರಾಮಗಳ ಸರ್ಕಾರಿ ಆಸ್ತಿಗಳ ವಿವರವಾದ ಡಿಜಿಟಲ್ ದಾಖಲೆ ಸಿದ್ಧಪಡಿಸಲು ಸಾಧ್ಯವಾಗಿದೆ. ಈ ಆಸ್ತಿಗಳನ್ನು ಸುರಕ್ಷಿತವಾಗಿಡಲು ಆಗಾಗ ಸ್ಥಳ ಪರಿಶೀಲಿಸಲಾಗುವುದು. ಸರ್ಕಾರಿ ಜಮೀನುಗಳು ಒತ್ತುವರಿಯಾಗುವ ದೀರ್ಘ ಕಾಲದ ಸಮಸ್ಯೆಗೆ ಹೊಸ
ವ್ಯವಸ್ಥೆಯಿಂದ ಪರಿಹಾರ ಸಿಗಲಿದೆ.