Published on: October 9, 2021
ಕೆಂಪೇಗೌಡ ವಿಮಾನ ನಿಲ್ದಾಣ
ಕೆಂಪೇಗೌಡ ವಿಮಾನ ನಿಲ್ದಾಣ
ಸುದ್ಧಿಯಲ್ಲಿ ಏಕಿದೆ? ಕೆಂಪೇಗೌಡ ಅಂತರಾಷ್ಟ್ರೀಯಯ ವಿಮಾನ ನಿಲ್ದಾಣವೂ ಅತಿ ಹೆಚ್ಚು ಪೆರಿಷೆಬಲ್(ಕೊಳೆಯುವ) ಪದಾರ್ಥಗಳ ಸರಕು ಸಾಗಣಿ ಮಾಡಿದ ದೇಶದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
- ಕೃಷಿ ಮತ್ತು ಸಂಸ್ಕರಿಸಿದ ಉತ್ಪನ್ನಗಳ ರಫ್ತು ಅಭಿವೃದ್ಧಿ ಮಂಡಳಿ(ಎಪಿಇಡಿಎ) ನೀಡಿದ ಮಾಹಿತಿಯ ಪ್ರಕಾರ, 2020-21ರ ಹಣಕಾಸು ವರ್ಷದಲ್ಲಿ 41,130 ಮೆಟ್ರಿಕ್ ಟನ್ನಷ್ಟು ಕಡಿಮೆ ಬಾಳಿಕೆ ಅವಧಿಯ ಹಣ್ಣು, ತರಕಾರಿಯಂತಹ ಕೊಳೆಯುವ ಉತ್ಪನ್ನಗಳನ್ನು ರಫ್ತು ಮಾಡಲಾಗಿದ್ದು, ಇದು ದೇಶದ ಪೆರಿಷಬಲ್ ಉತ್ಪನ್ನಗಳ ಪೈಕಿ ಶೇ.31 ರಷ್ಟು.
- ಕೋಳಿ, ಹೂಗಳ ರಫ್ತಿನಲ್ಲೂ ಕೆಂಪೇಗೌಡ ವಿಮಾನ ನಿಲ್ದಾಣವೇ ಮುಂಚೂಣಿಯಲ್ಲಿದ್ದು, 28,182 ಮೆಟ್ರಿಕ್ಟನ್ನಷ್ಟು ಕೋಳಿ ಹಾಗೂ 1,296 ಮೆ.ಟ ಹೂವುಗಳನ್ನು ರಫ್ತು ಮಾಡಲಾಗಿದೆ.
- 24 ವಿಮಾನಯಾನ ಸಂಸ್ಥೆಗಳು 46 ದೇಶಗಳಿಗೆ ಪೆರಿಷಬಲ್ ಉತ್ಪನ್ನಗಳನ್ನು ರಫ್ತು ಮಾಡುತ್ತಿವೆ. ಪೆರಿಷಬಲ್ ಉತ್ಪನ್ನಗಳನ್ನು ಅತ್ಯಾಧುನಿಕ ತಂತ್ರಜ್ಞಾನದಿಂದ ಕೆಡದಂತೆ ಸಂಸ್ಕರಿಸಿ ವೇಗವಾಗಿ ರಫ್ತು ಮಾಡಲಾಗುತ್ತಿದೆ. ಇದರಿಂದ ರಫ್ತು ಬೇಡಿಕೆಯೂ ಸಹ ದಿನೇದಿನೆ ಹೆಚ್ಚುತ್ತಲೇ ಇದೆ