Published on: November 15, 2021
ಸುದ್ಧಿ ಸಮಾಚಾರ 15 ನವೆಂಬರ್ 2021
ಸುದ್ಧಿ ಸಮಾಚಾರ 15 ನವೆಂಬರ್ 2021
- ನಾಡಗೀತೆಗೆ ಮೈಸೂರು ಅನಂತ ಸ್ವಾಮಿ ಅವರ ರಾಗ ಸಂಯೋಜನೆಯ ದಾಟಿಯನ್ನೇ ಉಳಿಸಿಕೊಳ್ಳುವಂತೆ ಎಚ್.ಆರ್.ಲೀಲಾವತಿ ನೇತೃತ್ವದ ಸಮಿತಿ ನೀಡಿರುವ ವರದಿಯನ್ನು ಸರಕಾರ ಯಾವುದೇ ಕಾರಣಕ್ಕೂ ಒಪ್ಪಬಾರದು ಎಂದು ಸುಗಮ ಸಂಗೀತಗಾರರು ಒತ್ತಾಯಿಸಿದ್ದಾರೆ.
- ದೆಹಲಿಯಲ್ಲಿ ಶುದ್ಧಗಾಳಿಗೆ ಪರದಾಡುತ್ತಿರುವ ಮಧ್ಯೆ, ದೇಶದಲ್ಲಿ ಅತೀ ಹೆಚ್ಚು ಬಿಸಿಲಿನ ತಾಪ ಇರುವ 50 ಜಿಲ್ಲೆಗಳ ಪಟ್ಟಿಯಲ್ಲಿ ಕಲಬುರಗಿ ಮತ್ತು ವಿಜಯಪುರ ಸ್ಥಾನ ಪಡೆದಿವೆ. ಮುಂಬರುವ ದಿನಗಳಲ್ಲಿ ಬಿಸಿಲ ಪ್ರಖರತೆ ಹೆಚ್ಚಾಗುವ ಆತಂಕವನ್ನು ಪರಿಸರ ಸಂಬಂಧಿತ ವರದಿಗಳು ವ್ಯಕ್ತಪಡಿಸಿವೆ.
- ದೇಶಾದ್ಯಂತ ಮಕ್ಕಳ ಮೇಲೆ ನಡೆದ ಸೈಬರ್ ದೌರ್ಜನ್ಯ ಪ್ರಕರಣಗಳು 2019ಕ್ಕೆ ಹೋಲಿಸಿದರೆ 2020ರಲ್ಲಿ ಶೇ.400ರಷ್ಟು ಹೆಚ್ಚಾಗಿದೆ. ಮಕ್ಕಳ ಮೇಲಿನ ಸೈಬರ್ ದೌರ್ಜನ್ಯ ಪ್ರಕರಣಗಳು ಜಾಸ್ತಿ ದಾಖಲಾಗಿರುವ ಐದು ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ.
- ಜಾರಿ ನಿರ್ದೇಶನಾಲಯ (ಇ.ಡಿ) ಮತ್ತು ಕೇಂದ್ರ ತನಿಖಾ ದಳ (ಸಿಬಿಐ) ನಿರ್ದೇಶಕರ ಅಧಿಕಾರ ಅವಧಿಯಲ್ಲಿ 5 ವರ್ಷಗಳವರೆಗೆ ವಿಸ್ತರಣೆ ಮಾಡುವ ಎರಡು ಸುಗ್ರೀವಾಜ್ಞೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ.
- ದೇಶದಲ್ಲೇ ಮೊದಲ ಬಾರಿಗೆ ಉತ್ತರ ಪ್ರದೇಶದಲ್ಲಿ ಹಸುಗಳಿಗೆ ಆಂಬುಲೆನ್ಸ್ ಸೇವೆಯನ್ನು ಒದಗಿಸುವ ಯೋಜನೆಗೆ ಚಾಲನೆ ನೀಡಲಾಗುತ್ತಿದೆ.
- ಕಲುಷಿತ ನೀರು ಹಾಗೂ ಆಹಾರದಿಂದ ಮನುಷ್ಯರಿಗೆ ಹರಡುವ ಮಾರಕ ನೋರೋವೈರಸ್ನ ಪ್ರಕರಣಗಳು ಕೇರಳದ ವಯನಾಡು ಜಿಲ್ಲೆಯಲ್ಲಿ ದೃಢಪಟ್ಟಿವೆ.
- ರಷ್ಯಾದ ಎಸ್-400 ಕ್ಷಿಪಣಿ ನಿರೋಧಕ ವ್ಯವಸ್ಥೆ, ಬ್ರಿಟನ್ನ ಎಂ777 ಹೊವಿಟ್ಜರ್ ಗನ್ಗಳು ಭಾರತೀಯ ಸೇನೆಯ ಬತ್ತಳಿಕೆ ಸೇರಿದ್ದು, ಗಡಿಯಲ್ಲಿ ಸದಾ ಕಿರಿಕಿರಿ ಉಂಟುಮಾಡುವ ಚೀನಾ ಜತೆ ಹೋರಾಡಲು ಮತ್ತಷ್ಟು ಶಕ್ತಿ ತುಂಬಿವೆ.
- ಬಿರ್ಸಾ ಮುಂಡಾ ಅವರ ಜನ್ಮದಿನವಾದ ನವೆಂಬರ್ 15 ಅನ್ನು ‘ಜಂಜಾಟಿಯ ಗೌರವ್ ದಿವಸ್’ ಎಂದು ಆಚರಿಸಲು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ
- ಇತಿಹಾಸಕಾರ–ಲೇಖಕ, ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತ ಬಾಬಾಸಾಹೇಬ್ ಪುರಂದರೆ (ಬಲ್ವಂತ್ ಮೊರೇಶ್ವರ್ ಪುರಂದರೆ) ಅವರು ನಿಧನರಾಗಿದ್ದಾರೆ.
- ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ತಂಡದ ಪ್ರಶಸ್ತಿ ಬರ ಕೊನೆಗೂ ಅಂತ್ಯಗೊಂಡಿದೆ. ಅಪಾಯಕಾರಿ ನ್ಯೂಜಿಲೆಂಡ್ ತಂಡದ ಎದುರು 8 ವಿಕೆಟ್ಗಳ ಭರ್ಜರಿ ಜಯ ದಾಖಲಿಸುವ ಮೂಲಕ ಕಾಂಗರೂ ಪಡೆ ಮೊತ್ತ ಮೊದಲ ಬಾರಿ ಟಿ20 ವಿಶ್ವಕಪ್ ಟ್ರೋಫಿ ಎತ್ತಿ ಹಿಡಿದಿದೆ.