Published on: November 19, 2021
ಮೂರು ಕೃಷಿ ಕಾಯ್ದೆಗಳು ರದ್ದು
ಮೂರು ಕೃಷಿ ಕಾಯ್ದೆಗಳು ರದ್ದು
ಸುದ್ಧಿಯಲ್ಲಿ ಏಕಿದೆ ? ಕಳೆದ ಒಂದು ವರ್ಷದಿಂದ ವ್ಯಾಪಕ ವಿರೋಧ, ಪ್ರತಿಭಟನೆಗೆ ಕಾರಣವಾಗಿದ್ದ ವಿವಾದಾತ್ಮಕ ಮೂರು ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ.
ಆ ಕಾನೂನುಗಳು ಯಾವುವು?
- ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಅನುಕೂಲ) ಕಾಯಿದೆ, 2020
- ಅಗತ್ಯ ಸರಕುಗಳ (ತಿದ್ದುಪಡಿ) ಕಾಯಿದೆ, 2020
- ರೈತರ (ಸಬಲೀಕರಣ ಮತ್ತು ರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯಿದೆ, 2020.
ರೈತರ ಚಿಂತೆಗಳೇನು?
- ರೈತರ ಮುಖ್ಯ ಕಾಳಜಿಗಳೆಂದರೆ, ಈ ಕಾನೂನುಗಳು ಆಯ್ದ ಬೆಳೆಗಳ ಮೇಲೆ ಕೇಂದ್ರದಿಂದ ಖಾತರಿಪಡಿಸುವ ಕನಿಷ್ಠ ಬೆಂಬಲ ಬೆಲೆಯನ್ನು (MSP) ರದ್ದುಗೊಳಿಸುತ್ತವೆ. ಇದು ಅಂತಿಮವಾಗಿ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳ ಕರುಣೆಗೆ ರೈತರನ್ನು ಬಿಡುತ್ತದೆ ಎಂಬ ಆತಂಕ .
ಕಾನೂನುಗಳ ಬಗ್ಗೆ ಕೇಂದ್ರದ ನಿಲುವು
- ಮೂರು ಕೃಷಿ ಕಾಯ್ದೆಗಳು ಸಣ್ಣ ರೈತರನ್ನು ಸಬಲೀಕರಣಗೊಳಿಸಲಿವೆ. ಇವುಗಳನ್ನು ಕೃಷಿ ವಲಯದಲ್ಲಿ ಮತ್ತಷ್ಟು ಸುಧಾರಣೆಗಾಗಿ ಜಾರಿಗೊಳಿಸಲಾಗಿದೆ.
- ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಎಲ್ಲ ಮಟ್ಟದ ಪ್ರಯತ್ನಗಳನ್ನು ನಡೆಸಿದ್ದೆವು. ಅವರ ಆಕ್ಷೇಪಣೆಗಳು ಇರುವ ವಿಭಾಗಗಳಲ್ಲಿ ಬದಲಾವಣೆ ತರಲು ಕೂಡ ಸಿದ್ಧರಿದ್ದೆವು. ಒಂದು ವರ್ಗದ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ನಮ್ಮಿಂದ ಸಾಧ್ಯವಾಗದೆ ಇರುವುದಕ್ಕೆ ದೇಶದ ಜನತೆಯ ಕ್ಷಮೆ ಕೋರುತ್ತೇನೆ. ನಾವು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ ಎಂದು ಮೋದಿ ಹೇಳಿದ್ದಾರೆ.
- ರೈತರು ತಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಬೆಲೆಯನ್ನು ಪಡೆದುಕೊಳ್ಳುವುದನ್ನು ನೋಡಿಕೊಳ್ಳಲು ಅನೇಕ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಸಣ್ಣ ರೈತರನ್ನು ವಿಮೆಯ ಅಡಿ ತರಲಾಗಿದೆ. ಫಲಾನುಭವಿಗಳಿಗೆ ನೇರ ಹಣ ವರ್ಗಾವಣೆ ಈ ಸರ್ಕಾರದ ಪ್ರಮುಖ ಸಾಧನೆಗಳಲ್ಲಿ ಒಂದು. ಕೇಂದ್ರ ಸರ್ಕಾರವು ಈವರೆಗೂ 22 ಕೋಟಿ ಮಣ್ಣಿನ ಆರೋಗ್ಯ ಕಾರ್ಡ್ಗಳನ್ನು ರೈತರಿಗೆ ನೀಡಲಾಗಿದೆ. ಇದು ಕೃಷಿ ಉತ್ಪಾದನೆಯನ್ನು ವೃದ್ಧಿಸಿದೆ. ಬೆಳೆ ವಿಮೆಯನ್ನು ಪರಿಣಾಮಕಾರಿಯಾಗಿ ಮಾಡಲಾಗಿದೆ. ಗ್ರಾಮೀಣ ಮಾರುಕಟ್ಟೆ ಮೂಲಸೌಕರ್ಯವನ್ನು ಸುಧಾರಿಸಲಾಗಿದೆ.
- ರೈತರಿಗೆ ವಿಮೆಗಳು ಸಮರ್ಪಕವಾಗಿ ಸಿಗುವಂತೆ ಖಾತರಿ ಪಡಿಸಲಾಗಿದೆ. ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್ಪಿ) ಹೆಚ್ಚಿಸಲು ಹಾಗೂ ಸಗಟು ವ್ಯಾಪಾರ ಮಾರುಕಟ್ಟೆ ವ್ಯವಹಾರಗಳನ್ನು ಆನ್ಲೈನ್ನಲ್ಲಿ ನಡೆಸುವಂತೆ ಮಾಡಲು ನಾವು ಕ್ರಮಗಳನ್ನು ಕೈಗೊಂಡಿದ್ದೇವೆ. ಕೇಂದ್ರದ ಕೃಷಿ ಬಜೆಟ್ ಅನ್ನು ಐದು ಪಟ್ಟಿಗೂ ಅಧಿಕ ಹೆಚ್ಚಿಸಲಾಗಿದೆ. ಕಿರು ನೀರಾವರಿ ಅನುದಾನ ಹಂಚಿಕೆಯು ಈಗ 10,000 ಕೋಟಿ ರೂ ಇದೆ. ಪಶು ಸಂಗೋಪನೆ ಮತ್ತು ಮೀನುಗಾರಿಕೆಯಲ್ಲಿ ತೊಡಗಿರುವವರನ್ನೂ ವಿವಿಧ ಯೋಜನೆಗಳ ಫಲಾನುಭವಿಗಳ ಅಡಿಯಲ್ಲಿ ತರಲಾಗಿದೆ
ಶೂನ್ಯ ಬಜೆಟ್ ನೈಸರ್ಗಿಕ ಕೃಷಿ ವಿಧಾನವನ್ನು ಜಾರಿ
- ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಇನ್ನಷ್ಟು ದಕ್ಷವಾಗಿ ತರಲು ಮತ್ತು ಇತರ ಸಮಸ್ಯೆಗಳನ್ನು ಬಗೆಹರಿಸಲು ಕೇಂದ್ರ ಸರ್ಕಾರ ಸಮಿತಿಯೊಂದನ್ನು ರಚಿಸಲಿದೆ. ಅದರಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳ ಪ್ರತಿನಿಧಿಗಳು, ರೈತರು, ವಿಜ್ಞಾನಿಗಳು, ಆರ್ಥಿಕ ತಜ್ಞರು ಇರುತ್ತಾರೆ. ದೇಶದ ರೈತರ ಪರವಾಗಿ ನಮ್ಮ ಕೆಲಸ ಮುಂದುವರಿಯುತ್ತದೆ
- ದೇಶದ ಕೃಷಿ ಕ್ಷೇತ್ರದ ಅವಶ್ಯಕತೆಗಳನ್ನು ಮತ್ತು ಬೆಳೆಗಳನ್ನು ಹೆಚ್ಚಿಸಲು, ಬೆಳೆಗಳನ್ನು ವೈಜ್ಞಾನಿಕ ರೀತಿಯಲ್ಲಿ ಬದಲಾಯಿಸಲು ಹೀಗೆ ಎಲ್ಲಾ ವಿಷಯಗಳ ಬಗ್ಗೆ ಭವಿಷ್ಯದ ಬಗ್ಗೆ ನಿರ್ಣಯ ತೆಗೆದುಕೊಳ್ಳಲು ಈ ಸಮಿತಿಯನ್ನು ರಚಿಸಲಾಗುತ್ತದೆ.
ಭಾರತದಲ್ಲಿ ಕಾನೂನನ್ನು ಹೇಗೆ ರದ್ದುಗೊಳಿಸಲಾಗುತ್ತದೆ?
- ಯಾವುದೇ ಕಾನೂನಿನ ರೀತಿಯಲ್ಲಿಯೇ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಬೇಕಾಗುತ್ತದೆ. ಈ ಅಧಿವೇಶನದಲ್ಲಿಯೇ ಇದನ್ನು ಮಂಡಿಸಬಹುದು. ಸಂಸತ್ತಿನಲ್ಲಿ ಅದನ್ನು ಮಂಡಿಸಬೇಕು, ನಂತರ ಚರ್ಚೆ ಮತ್ತು ಮತ ಚಲಾಯಿಸಬೇಕು. ಸಮಯಾವಧಿಯು ರಾಜಕೀಯ ಪ್ರಕ್ರಿಯೆಯ ಮೇಲೆ ಅವಲಂಬಿತವಾಗಿರುತ್ತದೆ.
- ತಿದ್ದುಪಡಿಗಾಗಿ ಪ್ರಸ್ತಾವನೆಯನ್ನು ಸಂಬಂಧಪಟ್ಟ ಸಚಿವಾಲಯವು ಕಾನೂನು ಸಚಿವಾಲಯಕ್ಕೆ ಕಳುಹಿಸಬೇಕಾಗುತ್ತದೆ. ಸಚಿವಾಲಯವು ಕಾನೂನು ಅಂಶಗಳನ್ನು ಪರಿಶೀಲಿಸುತ್ತದೆ. ನಂತರ ಸಂಬಂಧಪಟ್ಟ ಸಚಿವರು, ಅಂದ್ರೆ ಕಾನೂನು ಸಚಿವರಲ್ಲ. ಸಂಸತ್ತಿನಲ್ಲಿ ಮಸೂದೆಯನ್ನು ಮಂಡಿಸುತ್ತಾರೆ