Published on: November 24, 2021

ರೋಸೆನ್ಬೌರ್ ಫೈರ್ ಫೈಟಿಂಗ್ ಸಿಮ್ಯುಲೇಟರ್

ರೋಸೆನ್ಬೌರ್ ಫೈರ್ ಫೈಟಿಂಗ್ ಸಿಮ್ಯುಲೇಟರ್

ಸುದ್ಧಿಯಲ್ಲಿ ಏಕಿದೆ ?  ಬೆಂಗಳೂರು ವಿಮಾನ ನಿಲ್ದಾಣ ಮತ್ತೊಂದು ಅಂತಾರಾಷ್ಟ್ರೀಯ ಹಿರಿಮೆಗೆ ಪಾತ್ರವಾಗಿದ್ದು, ರೋಸೆನ್‌ಬೌರ್ ಫೈರ್ ಫೈಟಿಂಗ್ ಸಿಮ್ಯುಲೇಟರ್ ನಿಯೋಜನೆ ಮಾಡುವ ಮೂಲಕ ಈ ವ್ಯವಸ್ಥೆ ಹೊಂದಿದ ದಕ್ಷಿಣ ಏಷ್ಯಾದ ಮೊದಲ ವಿಮಾನ ನಿಲ್ದಾಣ ಎಂಬ ಕೀರ್ತಿಗೆ ಭಾಜನವಾಗಿದೆ.

ಮುಖ್ಯಾಂಶಗಳು

  • ಇದೊಂದು ಅತ್ಯಾಧುನಿಕ ಅಗ್ನಿಶಾಮಕ ತಂತ್ರಜ್ಞಾನವಾಗಿದ್ದು, ಇದು ಯಾವುದೇ ರೀತಿಯ ಅಗ್ನಿ ಅವಘಡವಾದರೂ ಕೂಡಲೇ ಅದನ್ನು ಆರಿಸುವ ಕೆಲಸದಲ್ಲಿ ನಿಪುಣತೆ ಹೊಂದಿದೆ. ವಿಮಾನ ನಿಲ್ದಾಣ ಅಥವಾ ವಿಮಾನಗಳ ಅಪಘಾತದ ಸಂದರ್ಭದಲ್ಲಿ ಹೊತ್ತಿಕೊಳ್ಳುವ ಅಗ್ನಿ ಅವಘಡವನ್ನು ತುರ್ತಾಗಿ ಆರಿಸುವಲ್ಲಿ ಈ ಅತ್ಯಾಧುನಿಕ ಸಿಮ್ಯುಲೇಟರ್ ಕೆಲಸ ಮಾಡಲಿದೆ.
  • ರೋಸನ್‌ಬೌರ್ ಸಿಮ್ಯುಲೇಟರ್‌ನ ಎರಡು ಫ್ಯಾಂಥರ್ ೬ ಟ್ರಕ್‌ಗಳು, ಹಾಗೂ ೮ ಟ್ರಕ್‌ಗಳನ್ನು ಇರಿಸಲಾಗಿದೆ. ಈ ಟ್ರಕ್‌ಗಳಲ್ಲಿ ಎರಡು ಹೈರೀಚ್ ಎಕ್ಸ್ಟೆಂಡೆಬಲ್ ಟರೆಟ್ಸ್ (ಎಚ್‌ಆರ್‌ಇಟಿ)ಯನ್ನು ಒಳಗೊಂಡಿದ್ದು, ಈ ಮಟ್ಟದ ಸುಸಜ್ಜಿತ ಟ್ರಕ್‌ಗಳನ್ನು ದಕ್ಷಿಣ ಏಷ್ಯಾದಲ್ಲಿಯೇ ಯಾವ ವಿಮಾನ ನಿಲ್ದಾಣಗಳು ಒಳಗೊಂಡಿಲ್ಲ.
  • ವಿಮಾನ ನಿಲ್ದಾಣದಲ್ಲಿರುವ ಅಗ್ನಿಶಾಮಕ ದಳದವರಿಗೆ ಈ ಸಿಮ್ಯುಲೇಟರ್‌ನನ್ನು ಬಳಸುವ ವಿಧಾನವನ್ನು ತರಬೇತಿ ನೀಡಲಾಗಿದೆ. ಅದರಲ್ಲೂ ಕಮಾಂಡ್ ನಿಯಂತ್ರಕರು, ಮೂಲ ಚಾಲಕರು, ಪೋಸಿಶನಿಂಗ್ ಇನ್ಸಿಡೆಂಟ್ ಕಮಾಂಡರ್‌ಗಳು, ಕ್ಯೂ ಕಮಾಂಡರ್‌ಗಳು ಹಾಗೂ ಅಗ್ನಿಶಾಮಕ ಮುಂಚೂಣಿ ಸಿಬ್ಬಂದಿಗೆ ಈ ತರಬೇತಿಯನ್ನು ಕಡ್ಡಾಯವಾಗಿ ನೀಡಲಾಗುವುದು