Published on: November 24, 2021
ವಿಜ್ಞಾನಿ ಜಗದೀಶ್ ಚಂದ್ರ ಬೋಸ್ ಪುಣ್ಯಸ್ಮರಣೆ
ವಿಜ್ಞಾನಿ ಜಗದೀಶ್ ಚಂದ್ರ ಬೋಸ್ ಪುಣ್ಯಸ್ಮರಣೆ
ಸುದ್ಧಿಯಲ್ಲಿ ಏಕಿದೆ ? ಭಾರತದ ವಿಜ್ಞಾನಿ ಜಗದೀಶ್ ಚಂದ್ರ ಬೋಸ್ ಅವರ ಪುಣ್ಯಸ್ಮರಣೆ ದಿನವಾದ ಇಂದು( ನ.23) ದೇಶದ ವಿವಿಧ ರಂಗಗಳ ಗಣ್ಯರು ಅನಂತ ನಮನಗಳನ್ನು ಸಲ್ಲಿಸಿದ್ದಾರೆ.
- ಸಸ್ಯಸಂಕುಲಕ್ಕೂ ಭಾವನೆಗಳಿವೆ ಎಂಬ ಅವರ ವೈಜ್ಞಾನಿಕ ಪ್ರತಿಪಾದನೆ ಜಾಗತಿಕ ಮಟ್ಟದಲ್ಲಿ ದೇಶಕ್ಕೆ ಹಿರಿಮೆ ತಂದುಕೊಟ್ಟಿತ್ತು. ಅವರ ಸಾಧನೆ, ಕೊಡುಗೆಗಳು ಸ್ಮರಣೀಯ
ಸರ್ ಜಗದೀಶ್ಚಂದ್ರ ಬೋಸ್
- ಸರ್ ಜಗದೀಶ್ಚಂದ್ರ ಬೋಸ್, (ನವೆಂಬರ್ ೩೦, ೧೮೫೮ – ನವೆಂಬರ್ ೨೩, ೧೯೩೭) ಒಬ್ಬ ಬಹುಮುಖ ಪ್ರತಿಭೆಯ ಬಂಗಾಲಿ ಮೂಲದ ಭೌತಶಾಸ್ತ್ರ ಹಾಗು ಜೀವಶಾಸ್ತ್ರ ವಿಜ್ಞಾನಿ.
- ರೇಡಿಯೊ, ದೂರಸಂಪರ್ಕ, ಪ್ರಕಾಶ ಶಾಸ್ತ್ರ, ಸಸ್ಯ ಜೀವಶಾಸ್ತ್ರ ಹೀಗೆ ಅನೇಕ ವಿಜ್ಞಾನದ ವಿಭಾಗದಲ್ಲಿ ಸಂಶೋಧನೆ ನೆಡೆಸಿದ್ದ ಬೋಸರು ಅವರ ಕಾಲದ ಶ್ರೇಷ್ಟ ವಿಜ್ಞಾನಿಗಳಲ್ಲೊಬ್ಬರಾಗಿದ್ದರು.
- ಬೋಸರು ಸಸ್ಯಗಳು ಸಹ ಪ್ರಾಣಿಗಳ ಹಾಗೆ ಹೊರ ಪ್ರಭಾವಗಳಿಗೆ ಸ್ಪಂದಿಸುತ್ತವೆಂದು ಜಗತ್ತಿಗೆ ಸಾಬೀತು ಮಾಡಿ ತೊರಿಸಿದವರು. ಭಾರತ ಉಪಖಂಡದಲ್ಲಿ ಪ್ರಯೋಗವಿಜ್ಞಾನಕ್ಕೆ ಅಡಿಪಾಯ ಹಾಕಿದವರು ಇವರು.
- ರೇಡಿಯೋ ವಿಜ್ಞಾನದ ತಂದೆ ಎಂದೂ , ಬೆಂಗಾಲಿ ವಿಜ್ಞಾನಸಾಹಿತ್ಯದ ತಂದೆ ಎಂದೂ ಇವರನ್ನು ಪರಿಗಣಿಸಲಾಗುತ್ತದೆ. ತಮ್ಮ ಸಂಶೋಧನೆಗಳಿಗೆ ನೆರವಾಗುವಂತಹ ಅನೇಕ ಉಪಕರಣಗಳನ್ನು (ಕ್ರೆಸ್ಕೊಗ್ರಾಫ್ ಹಾಗು ಕೊಹೆರರ್) ತಾವೇ ಸ್ವತಃ ಕಂಡುಹಿಡಿದಿದ್ದರು.
- ಅಮೇರಿಕದ ಪೇಟೆಂಟ್ ತೆಗೆದುಕೊಂಡವರಲ್ಲಿ ಭಾರತೀಯ ಉಪಖಂಡದ ಮೊದಲಿಗರು.