Published on: January 7, 2023

ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳ

ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳ

ಸುದ್ದಿಯಲ್ಲಿ ಏಕಿದೆ? ರಾಜ್ಯ ರಾಜಧಾನಿ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ರಾಜ್ಯ ಕೃಷಿ ಇಲಾಖೆ ವತಿಯಿಂದ ಜನವರಿ 20 ರಿಂದ ಮೂರು ದಿನಗಳ ಕಾಲ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳ -2023′ ಹಮ್ಮಿಕೊಳ್ಳಲಾಗಿದೆ.

ಮುಖ್ಯಾಂಶಗಳು

  • 2023 ಅನ್ನು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ಘೋಷಣೆ ಮಾಡಲಾಗಿದೆ. ರೈತರಿಗೆ ಮಾರುಕಟ್ಟೆ ಒದಗಿಸಲು ಈ ಮೇಳ ಆಯೋಜಿಸಲಾಗಿದೆ ಎಂದು ಹೇಳಿದರು.
  • ರಾಯಚೂರಿನಲ್ಲಿ ಸಿರಿಧಾನ್ಯ ಉದ್ಯಾನವನ ಸ್ಥಾಪಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ಇದು ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಉದ್ಯೋಗಾವಕಾಶಗಳಿಗೆ ಉತ್ತೇಜನ ನೀಡುತ್ತದೆ. ಈ ವಲಯದ ರೈತರು ಮತ್ತು ಗ್ರಾಹಕರ ನಡುವಿನ ಅಂತರವನ್ನು ಕಡಿಮೆ ಮಾಡುವುದು ನಮ್ಮ ಗುರಿಯಾಗಿದೆ
  • ಆಯೋಜಕರು : ಕೃಷಿ ಇಲಾಖೆಯು
  • ಸಹಯೋಗ: ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ನಿಯಮಿತ (KAPPEC) ಮತ್ತು ಸಾವಯವ ಕೃಷಿಗಾಗಿ ಅಂತರರಾಷ್ಟ್ರೀಯ ಸಾಮರ್ಥ್ಯ ಕೇಂದ್ರ (ICCOA) ಸಹಯೋಗದಲ್ಲಿ ಮೇಳವನ್ನು ಆಯೋಜಿಸುತ್ತಿದೆ.
  • ವಿಶೇಷತೆ :ಮೇಳದಲ್ಲಿ ಸಿರಿಧಾನ್ಯ ಬೆಳೆಗಾರರು, ಗ್ರಾಹಕರು, ರಫ್ತುದಾರರು, ಸಂಪರ್ಕ ಕಲ್ಪಿಸುವ ಮಾರಾಟ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.
  • ಉದ್ದೇಶ: ಸಿರಿಧಾನ್ಯ ಬೆಳೆಯುವ ರೈತರಿಗೆ ಮಾರುಕಟ್ಟೆ ಒದಗಿಸಲು ಹಾಗೂ ರೈತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ, ಸಾವಯವ ಮತ್ತು ಸಿರಿಧಾನ್ಯ ಮಾರುಕಟ್ಟೆ ವಿಸ್ತರಣೆ ಜೊತೆಗೆ ಆರೋಗ್ಯಕರ ಜವನ ಶೈಲಿಗೆ ಸಿರಿಧಾನ್ಯಗಳ ಮಹತ್ವ ತಿಳಿಸುವ ಉದ್ದೇಶದಿಂದ ಆಯೋಜಿಸಲಾಗಿದೆ

ಹೆಚ್ಚಿನ ಮಾಹಿತಿ – ಸಿರಿಧಾನ್ಯ ವರ್ಷ

ಹಿನ್ನೆಲೆ

ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದಲ್ಲಿ 2023 ನೇ ವರ್ಷವನ್ನು ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷ ಎಂದು ಘೋಷಿಸಲಾಗಿದೆ. ಭಾರತದ ನಾಯಕತ್ವದ ನಿರ್ಣಯವನ್ನು ವಿಶ್ವಸಂಸ್ಥೆ ಅಂಗೀಕರಿಸಿದೆ ಮತ್ತು ಇದಕ್ಕೆ 70 ರಾಷ್ಟ್ರಗಳ ಬೆಂಬಲ ದೊರೆತಿದೆ. ಇದರಿಂದ ಜಗತ್ತಿನಾದ್ಯಂತ ಸಿರಿಧಾನ್ಯಗಳ ಮಹತ್ವ, ಸುಸ್ಥಿರ ಕೃಷಿಯಲ್ಲಿ ಇದರ ಪಾತ್ರ ಮತ್ತು ಇದರ ಉಪಯುಕ್ತತೆ ಹಾಗೂ ಶ್ರೇಷ್ಠ ಆಹಾರದ ಲಾಭಗಳ ಕುರಿತು ಜಾಗೃತಿ ಮೂಡಿಸಲು ಸಹಕಾರಿಯಾಗಲಿದೆ. ಏಷ್ಯಾದಲ್ಲಿ ಶೇ 80 ಕ್ಕೂ ಹೆಚ್ಚಿನ ಪ್ರಮಾಣದಲ್ಲಿ ಸಿರಿಧಾನ್ಯಗಳನ್ನು ಭಾರತದಲ್ಲಿ ಉತ್ಪಾದಿಸಲಾಗುತ್ತಿದೆ ಮತ್ತು 170 ಲಕ್ಷ ಟನ್ ಸಿರಿಧಾನ್ಯಗಳ ಉತ್ಪಾದನೆ ಮೂಲಕ ದೇಶ ಸಿರಿಧಾನ್ಯಗಳನ್ನು ಬೆಳಯುವಲ್ಲಿ ಜಾಗತಿಕ ಕೇಂದ್ರವಾಗಿದೆ. ಸಿಂಧೂನಾಗರಿಕತೆಯಲ್ಲಿ ಈ ಧಾನ್ಯಗಳಿಗೆ ಪುರಾವೆ ದೊರೆಯುತ್ತವೆ ಮತ್ತು ಅಲ್ಲಿ ಆಹಾರಕ್ಕಾಗಿ ಮೊದಲ ಗಿಡ ನೆಡಲಾಗಿತ್ತು. ಸಿರಿಧಾನ್ಯಗಳನ್ನು 131 ದೇಶಗಳಲ್ಲಿ ಬೆಳೆಯಲಾಗುತ್ತಿದೆ ಮತ್ತು ಇವು ಏಷ್ಯಾ ಮತ್ತು ಆಫ್ರಿಕಾ ದೇಶಗಳಲ್ಲಿ ಸುಮಾರು 60 ಕೋಟಿ ಜನರಿಗೆ ಸಾಂಪ್ರದಾಯಿಕ ಆಹಾರವಾಗಿದೆ.

ಸಿರಿಧಾನ್ಯ ವರ್ಷ ಆಚರಿಸಲು ಕಾರಣ? ಭಾರತದ ಗಮನ ಈಗ ಪೌಷ್ಟಿಕಾಂಶದ ಭದ್ರತೆಯ ಮೇಲೆ ಕೇಂದ್ರೀಕೃತವಾಗಿದೆ. ಸಾಂಕ್ರಾಮಿಕ ರೋಗದ ನಂತರ, ಜನರು ಆರೋಗ್ಯಕರ ಜೀವನಶೈಲಿಯ ಬಗ್ಗೆ ಹೆಚ್ಚು ಜಾಗೃತರಾಗಿದ್ದಾರೆ. ಅವರ ಯೋಗಕ್ಷೇಮಕ್ಕಾಗಿ ಆರೋಗ್ಯಕರ ಆಹಾರಕ್ರಮಕ್ಕೆ ಬದಲಾಗುತ್ತಿದ್ದಾರೆ. “ಜಗತ್ತು ಹೊಸ ಆಯ್ಕೆಗಳನ್ನು ಹುಡುಕುತ್ತಿರುವ ಸಮಯದಲ್ಲೇ ಸಿರಿಧಾನ್ಯ ಮತ್ತು ಸಾವಯವ ಪದಾರ್ಥಗಳು ಆದ್ಯತೆಯ ಆಹಾರವಾಗಿ ವೇಗವಾಗಿ ಹೊರಹೊಮ್ಮುತ್ತಿವೆ”.”ಬೆಳೆಯುವ ಸಿರಿಧಾನ್ಯಗಳಲ್ಲಿ ಕೀಟನಾಶಕಗಳು ಮತ್ತು ರಾಸಾಯನಿಕಗಳ ಬಳಕೆಯು ಅತ್ಯಂತ ಕಡಿಮೆ ಅಥವಾ ಶೂನ್ಯವಾಗಿದೆ.

ನಿಮಗಿದು ತಿಳಿದಿರಲಿ:  ಭಾರತವು ಸಿರಿಧಾನ್ಯ ಉತ್ಪಾದನೆಯಲ್ಲಿ ವಿಶ್ವದಲ್ಲಿ ಮುಂಚೂಣಿಯಲ್ಲಿದೆ. ಉಳಿದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕವು ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.