ಅಮೃತ ನಗರೋತ್ಧಾನ ಯೋಜನೆ
ಅಮೃತ ನಗರೋತ್ಧಾನ ಯೋಜನೆ
ಸುದ್ಧಿಯಲ್ಲಿ ಏಕಿದೆ?
ಮುಖ್ಯಮಂತ್ರಿಗಳ ಅಮೃತ ನಗರೋತ್ಧಾನ ಯೋಜನೆಯಡಿ ನಗರ ಸ್ಥಳೀಯ ಸಂಸ್ಥೆಗಳ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಮೂರು ವರ್ಷಗಳ ಬದಲಾಗಿ ಎರಡು ವರ್ಷಗಳಲ್ಲಿಯೇ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
9 ಜಿಲ್ಲೆ ಕಾಮಗಾರಿಗೆ ಅನುಮೋದನೆ:
- ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ 4ನೇ ಹಂತದ ಯೋಜನೆಯಡಿ ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ತುಮಕೂರು ಸೇರಿದಂತೆ ಒಂಬತ್ತು ಜಿಲ್ಲೆಗಳ 503.25 ಕೋಟಿ ರು. ಮೊತ್ತದ ಕಾಮಗಾರಿಗಳಿಗೆ ಪೌರಾಡಳಿತ ಇಲಾಖೆ ಅನುಮೋದನೆ ನೀಡಿದೆ.
ಅಮೃತ್ 2.0 ಯೋಜನೆ
- ಕೇಂದ್ರ ಪುರಸ್ಕೃತ ಅಮೃತ್ 2.0 ಯೋಜನೆಯಡಿ ಐದು ವರ್ಷಗಳಲ್ಲಿ ರಾಜ್ಯದ ಪಾಲೂ ಸೇರಿದಂತೆ ಒಟ್ಟು 9260 ಕೋಟಿ ರು. ವೆಚ್ಚದಲ್ಲಿ 287 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನೀರು ಮತ್ತು ಒಳಚರಂಡಿ ವ್ಯವಸ್ಥೆ ರೂಪಿಸಲಾಗುತ್ತಿದೆ. ಈ ಯೋಜನೆಯಡಿ, ತಾಂತ್ರಿಕವಾಗಿ ಕಾರ್ಯಸಾಧ್ಯವಾಗಿರುವ ನಗರ ಸ್ಥಳೀಯ ಸಂಸ್ಥೆಗಳನ್ನು ಮೊದಲ ಹಂತದಲ್ಲಿ ಆಯ್ಕೆ ಮಾಡಿ ಕಾಮಗಾರಿ ಪ್ರಾರಂಭಿಸಬೇಕು
ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆ
-
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಂಡ್ಯ ಜಿಲ್ಲೆ, ಕೋಲಾರ, ಚಿಕ್ಕಬಳ್ಳಾಪುರ(ಚಿಕ್ಕಬಳ್ಳಾಪುರ ನಗರಸಭೆ ಹೊರತುಪಡಿಸಿ), ದಕ್ಷಿಣ ಕನ್ನಡ(ಉಳ್ಳಾಲ ನಗರಸಭೆ, ಸೋಮೇಶ್ವರ ಮತ್ತು ಕೋಟೆಕಾರು ಪಟ್ಟಣ ಪಂಚಾಯಿತಿ ಹೊರತುಪಡಿಸಿ), ಧಾರವಾಡ, ಗದಗ( ಗದಗ-ಬೆಟಗೇರಿ ನಗರಸಭೆ ಹೊರತುಪಡಿಸಿ), ಕೊಪ್ಪಳ, ಹಾವೇರಿ(ಶಿಗ್ಗಾಂವ, ಬಂಕಾಪುರ, ಸವಣೂರು ಪುರಸಭೆ ಹೊರತುಪಡಿಸಿ), ರಾಯಚೂರು(ಮಾನ್ವಿ, ಜಾಲಹಳ್ಳಿ ಪುರಸಭೆ ಮತ್ತು ಕವಿತಾಳ ಪಟ್ಟಣ ಪಂಚಾತಿಯಿ ಹೊರತುಪಡಿಸಿ), ಯಾದಗಿರಿ, ಬೀದರ್, ಶಿವಮೊಗ್ಗ, ಬಾಗಲಕೋಟೆ, ಉತ್ತರ ಕನ್ನಡ ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳಲ್ಲಿ 2022-23 ರಿಂದ 2024-25ನೇ ಸಾಲಿನ ಆರ್ಥಿಕ ವರ್ಷದವರೆಗೆ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ ಈ ಕಾಮಗಾರಿಗಳನ್ನು ಕೈಗತ್ತಿಕೊಳ್ಳಲಾಗುತ್ತದೆ.