Published on: June 7, 2022

ಅಹಮದಾಬಾದ್-ಮುಂಬೈ ಬುಲೆಟ್ ರೈಲು

ಅಹಮದಾಬಾದ್-ಮುಂಬೈ ಬುಲೆಟ್ ರೈಲು

ಸುದ್ಧಿಯಲ್ಲಿಏಕಿದೆ?

ಗುಜರಾತ್, ಮಹಾರಾಷ್ಟ್ರ ಮತ್ತು ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿಯಾದ್ಯಂತ ವ್ಯಾಪಿಸಿರುವ ಮಹತ್ವಾಕಾಂಕ್ಷೆಯ ಅಹಮದಾಬಾದ್-ಮುಂಬೈ ಬುಲೆಟ್ ರೈಲು ಯೋಜನೆಗೆ ಅಗತ್ಯವಿರುವ ಒಟ್ಟು ಭೂಮಿಯಲ್ಲಿ ಶೇ. 90ಕ್ಕೂ ಹೆಚ್ಚು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಯೋಜನೆಯ ಅನುಷ್ಠಾನ ಸಂಸ್ಥೆ ಎನ್‌ಎಚ್‌ಎಸ್‌ಆರ್‌ಸಿಎಲ್ ತಿಳಿಸಿದೆ.

ಮುಖ್ಯಾಂಶಗಳು

  • ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಇಂದು ಗುಜರಾತ್‌ನ ಸೂರತ್ ಮತ್ತು ನವಸಾರಿ ಜಿಲ್ಲೆಗಳಲ್ಲಿ ಯೋಜನೆಯ ಪ್ರಗತಿಯನ್ನು ಪರಿಶೀಲಿಸಿದರು ಮತ್ತು 2026 ರಲ್ಲಿ ರಾಜ್ಯದ ಸೂರತ್ ಮತ್ತು ಬಿಲಿಮೋರಾ ನಡುವೆ ಮೊದಲ ರೈಲು ಓಡಾಟವನ್ನು ಪ್ರಾರಂಭಿಸುವ ವಿಶ್ವಾಸವಿದೆ ಎಂದು ಹೇಳಿದರು.
  • ಹೈಸ್ಪೀಡ್ ಬುಲೆಟ್ ರೈಲು ಅಹಮದಾಬಾದ್‌ನಿಂದ ಮುಂಬೈಗೆ 508-ಕಿಮೀ ಪ್ರಯಾಣವನ್ನು 2 ಗಂಟೆ 58 ನಿಮಿಷಗಳಲ್ಲಿ ಕ್ರಮಿಸುವ ನಿರೀಕ್ಷೆಯಿದೆ.