Published on: January 11, 2023

ಇನ್ಫೋಸಿಸ್ ಪ್ರಶಸ್ತಿ

ಇನ್ಫೋಸಿಸ್ ಪ್ರಶಸ್ತಿ


ಸುದ್ದಿಯಲ್ಲಿ ಏಕಿದೆ? ಆರು ಸಂಶೋಧಕರಿಗೆ ಆಯಾ ಕ್ಷೇತ್ರಗಳಲ್ಲಿನ ಅವರ ಕಾರ್ಯವನ್ನು ಗುರುತಿಸಿ 2022ನೇ ಸಾಲಿನ ಇನ್ಫೋಸಿಸ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.


ಮುಖ್ಯಾಂಶಗಳು

  • ಅಮೆರಿಕದ ಬರ್ಕ್ಲಿಯ ಸೈಮನ್ಸ್ ಇನ್ಸ್ಟಿಟ್ಯೂಟ್ ಫಾರ್ ದಿ ಥಿಯರಿ ಆಫ್ ಕಂಪ್ಯೂಟಿಂಗ್ನ ನಿರ್ದೇಶಕಿ ಪ್ರೊ. ಶಾಫಿ ಗೋಲ್ಡ್ವಾಸರ್ ಪ್ರಶಸ್ತಿ ಪ್ರದಾನ ಮಾಡಿದರು.

ಯಾರಿಗೆ ನೀಡುತ್ತದೆ?

  • ಇನ್ಫೋಸಿಸ್ ಸೈನ್ಸ್ ಫೌಂಡೇಶನ್ ಲಾಭೋದ್ದೇಶವಿಲ್ಲದ ಟ್ರಸ್ಟ್ ಆಗಿದ್ದು, ಸಂಸ್ಥೆಯು ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್, ಮಾನವಿಕತೆ, ಜೀವ ವಿಜ್ಞಾನ, ಗಣಿತ ವಿಜ್ಞಾನ, ಭೌತಿಕ ವಿಜ್ಞಾನ ಮತ್ತು ಸಮಾಜ ವಿಜ್ಞಾನ ಕ್ಷೇತ್ರಗಳಲ್ಲಿನ ಸಂಶೋಧಕರನ್ನು ಗುರ್ತಿಸಿ ವಾರ್ಷಿಕವಾಗಿ ಗೌರವಿಸುತ್ತದೆ.

ಉದ್ದೇಶ:  ಭಾರತ ಮತ್ತು ಪ್ರಪಂಚದ ಅಭಿವೃದ್ಧಿಗೆ ವೈಜ್ಞಾನಿಕ ಸಂಶೋಧನೆಯ ಪ್ರಾಮುಖ್ಯತೆಯನ್ನು ಎತ್ತಿ ಹಿಡಿಯಲು ಇನ್ಫೋಸಿಸ್ ಈ ಪ್ರಶಸ್ತಿಯನ್ನು ನೀಡುತ್ತಿದೆ.