Published on: July 5, 2022

ಏಕಬಳಕೆಯ ಪ್ಲಾಸ್ಟಿಕ್ ನಿಷೇಧ?

ಏಕಬಳಕೆಯ ಪ್ಲಾಸ್ಟಿಕ್ ನಿಷೇಧ?

Vejle ಸುದ್ದಿಯಲ್ಲಿ ಏಕಿದೆ?

Gönen ಪ್ಲಾಸ್ಟಿಕ್ ತ್ಯಾಜ್ಯದ ಅಪಾಯಗಳನ್ನು ಪರಿಗಣಿಸಿ, ಮಾಲಿನ್ಯವನ್ನು ನಿಯಂತ್ರಿಸುವ ಪ್ರಯತ್ನದ ಭಾಗವಾಗಿ ದೇಶದಲ್ಲಿ ಏಕಬಳಕೆಯ ಪ್ಲಾಸ್ಟಿಕ್‌ನ ಮೇಲೆ ನಿಷೇಧ ಹೇರಲಾಗಿದೆ.

ಯಾವಾಗಿನಿಂದ ನಿಯಮ ಜಾರಿ?

 • ಇದೇ ಜುಲೈ 1ರಿಂದ ಜಾರಿ ಬರುವಂತೆ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಹೇರಲಾಗಿದೆ.
 • ಅಲ್ಲದೇ, ಎಲ್ಲಾಇ-ಕಾಮರ್ಸ್ ಕಂಪನಿಗಳ ವೆಬ್​ಸೈಟ್​ನಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ (SUP) ವಸ್ತುಗಳ ಮಾರಾಟ ಮತ್ತು ಪ್ರದರ್ಶನ/ ಜಾಹೀರಾತುಗಳನ್ನು ಕೂಡಾ ಜುಲೈ 1, 2022 ರಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ.

ಮುಖ್ಯಾಂಶಗಳು

 • ಪರಿಸರ ಸಂರಕ್ಷಣಾ ಕಾಯ್ದೆಯ (ಇಪಿಎ) ಅಡಿಯಲ್ಲಿ 19 ಬಗೆಯ ಏಕಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳನ್ನು ಹಂತಹಂತವಾಗಿ ಹೊರಹಾಕಲು ಅಧಿಸೂಚನೆಯನ್ನು ಹೊರಡಿಸಲಾಗಿದೆ.
 • ಇದನ್ನು ಉಲ್ಲಂಘಿಸಿದಲ್ಲಿ ಕಾಯ್ದೆಯ ಸೆಕ್ಷನ್ 15ರ ಅಡಿಯಲ್ಲಿ ರೂ. 1 ಲಕ್ಷ ನಗದು ದಂಡ ಅಥವಾ 5 ವರ್ಷಗಳ ಕಾಲ ವಿಸ್ತರಿಸಬಹುದಾದ ಜೈಲುಶಿಕ್ಷೆಯನ್ನು ವಿಧಿಸಬಹುದಾಗಿದೆ’.
 • ಕೆಲವು ಉದ್ಯಮಗಳ ಪ್ರತಿನಿಧಿಗಳು ನಿಷೇಧಕ್ಕೆ ಸಿದ್ಧರಿಲ್ಲವಲ್ಲ ಎನ್ನುವ ಪ್ರಶ್ನೆಗೆ, ‘2022ರ ಜುಲೈ 1ರೊಳಗೆ 19 ಬಗೆಯ ಏಕಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳನ್ನು ಹಂತಹಂತವಾಗಿ ತೆಗೆದುಹಾಕುವ ಅಧಿಸೂಚನೆಯನ್ನು 2021ರ ಆಗಸ್ಟ್‌ನಲ್ಲಿ ಹೊರಡಿಸಲಾಗಿದೆ.

ಏಕಬಳಕೆಯ ಪ್ಲಾಸ್ಟಿಕ್ ಎಂದರೇನು?

 • ಏಕ-ಬಳಕೆಯ ಪ್ಲಾಸ್ಟಿಕ್ ಎನ್ನುವುದು ಪ್ಲಾಸ್ಟಿಕ್‌ನಿಂದ ಮಾಡಿದ ವಸ್ತುವಾಗಿದ್ದು, ಅದನ್ನು ವಿಲೇವಾರಿ ಮಾಡುವ ಅಥವಾ ಮರುಬಳಕೆ ಮಾಡುವ ಮೊದಲು “ಒಮ್ಮೆ ಒಮ್ಮೆ ಮಾತ್ರ” ಬಳಸಲು ಉದ್ದೇಶಿಸಲಾಗಿದೆ.
 • ಈ ವಸ್ತುಗಳು ಹೆಚ್ಚಾಗಿ ಪಾಲಿಥಿನ್ ಬ್ಯಾಗ್‌ಗಳು, ಸ್ಯಾಚೆಟ್‌ಗಳು, ಶಾಂಪೂ ಬಾಟಲಿಗಳು, ಬಿಸಾಡಬಹುದಾದ ಗ್ಲಾಸ್‌ಗಳು, ಇಯರ್ ಬಡ್ಸ್ ಕಡ್ಡಿ ಇತ್ಯಾದಿಗಳಾಗಿವೆ, ಇವುಗಳನ್ನು ಬಳಸಿದ ಕೂಡಲೇ ವಿಲೇವಾರಿ ಮಾಡಲಾಗುತ್ತದೆ. ಮರುಬಳಕೆ ಮಾಡುವುದಿಲ್ಲ. ಇವುಗಳಿಂದ ಪ್ಲಾಸ್ಟಿಕ್ ತ್ಯಾಜ್ಯ ಹೆಚ್ಚಾಗಿ ಪರಿಸರದ ಮೇಲೆ ದುಷ್ಪರಿಣಾಮ ಬಿರುತ್ತದೆ

ನಿಷೇಧಿತ 19 ಏಕಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳು:

 • ಇಯರ್ ಬಡ್ಸ್, ಬಲೂನ್‌ಗಳಿಗೆ ಅಂಟಿಸುವ ಪ್ಲಾಸ್ಟಿಕ್ ಸ್ಟಿಕ್ಸ್‌, ಪ್ಲಾಸ್ಟಿಕ್ ಬಾವುಟ, ಕ್ಯಾಂಡಿ ಸ್ಟಿಕ್ಸ್, ಐಸ್‌ಕ್ರೀಂ ಕಡ್ಡಿಗಳು, ಪಾಲಿಸ್ಟೈರೇನ್ (ಥರ್ಮೊಕೋಲ್), ಪ್ಲಾಸ್ಟಿಕ್ ತಟ್ಟೆ, ಲೋಟಗಳು, ಪ್ಲಾಸ್ಟಿಕ್ ರೂಪದ ಗಾಜುಗಳು, ಫೋರ್ಕ್‌ಗಳು, ಚಮಚಗಳು, ಸ್ಟ್ರಾಗಳು, ಟ್ರೇಗಳು, ಚಾಕುಗಳು, ಸಿಹಿತಿನಿಸುಗಳ ಡಬ್ಬಿಗಳಲ್ಲಿ ಬಳಸುವ  ಪ್ಯಾಕೇಜಿಂಗ್ ಫಿಲಂಗಳು, ಆಹ್ವಾನಪತ್ರಿಕೆಗಳು, ಸಿಗರೇಟು ಪ್ಯಾಕೇಟ್‌ಗಳು, 100 ಮೈಕ್ರಾನ್‌ಗಿಂತ ಕಮ್ಮಿ ಇರುವ ಪ್ಲಾಸ್ಟಿಕ್ ಅಥವಾ ಪಿವಿಸಿ ಬ್ಯಾನರ್‌ಗಳು ಮತ್ತು ಸ್ಟಿಕರ್‌ಗಳು.

ನಿಷೇಧ:

 • 2030ರೊಳಗಾಗಿ ಪ್ಲಾಸ್ಟಿಕ್‌ ಬಳಕೆ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವ ಪ್ರತಿಜ್ಞೆಯನ್ನು 170 ದೇಶಗಳು 2019ರಲ್ಲಿ ನಡೆದ ವಿಶ್ವಸಂಸ್ಥೆ ಪರಿಸರ ಸಮಾವೇಶದಲ್ಲಿ ತೆಗೆದುಕೊಂಡಿದ್ದವು.
 • ಕೆಲ ರಾಷ್ಟ್ರಗಳು ಪ್ಲಾಸ್ಟಿಕ್‌ ತ್ಯಾಜ್ಯ ನಿಯಂತ್ರಣಕ್ಕೆ ಗಂಭೀರವಾದ ಹೆಜ್ಜೆ ಇಟ್ಟಿವೆ. ಈ ರೀತಿ ಕಠಿಣ ಕ್ರಮ ತೆಗೆದುಕೊಂಡ ರಾಷ್ಟ್ರಗಳ ಪೈಕಿ ಕೀನ್ಯಾ ಮೊದಲಿದೆ.
 • ವಿಶ್ವ ಆರ್ಥಿಕ ವೇದಿಕೆಯ ವರದಿ ಪ್ರಕಾರ, ಕೀನ್ಯಾದಲ್ಲಿ 2017ರಲ್ಲೇ ಒಂದು ಬಾರಿ ಬಳಸಿ ಎಸೆಯುವ (Single use) ಪ್ಲಾಸ್ಟಿಕ್‌ ಚೀಲಗಳನ್ನು ನಿಷೇಧಿಸಲಾಗಿದೆ.
 • ರಾಷ್ಟ್ರೀಯ ಉದ್ಯಾನ, ಅರಣ್ಯ, ಸಮುದ್ರ ತೀರಗಳಿಗೆ ತೆರಳುವ ಪ್ರವಾಸಿಗರು ಪ್ಲಾಸ್ಟಿಕ್‌ ಬಾಟಲ್‌, ತಟ್ಟೆಗಳನ್ನು ಒಯ್ಯುವಂತಿಲ್ಲ ಎನ್ನುವ ಕಠಿಣ ನಿಯಮವೂ ಇಲ್ಲಿದೆ.
 • ಜಿಂಬಾಬ್ವೆಯಲ್ಲಿ ಥರ್ಮಾಕೋಲ್‌ನ ಆಹಾರದ ಪೊಟ್ಟಣಗಳನ್ನು ನಿಷೇಧಿಸಲಾಗಿದೆ. ಈ ನಿಯಮ ಉಲ್ಲಂಘಿಸಿದವರಿಗೆ ರೂ. 3 ಲಕ್ಷದವರೆಗೂ ದಂಡವಿದೆ.
 • ಬ್ರಿಟನ್‌ನಲ್ಲಿ ಪ್ಲಾಸ್ಟಿಕ್‌ ಚೀಲಗಳ ಮೇಲೆ ತೆರಿಗೆ ವಿಧಿಸಲಾಗಿದ್ದು, ಅಮೆರಿಕ, ಯುರೋಪ್‌ ಒಕ್ಕೂಟ, ಚೀನಾಗಳಲ್ಲಿ ಒಮ್ಮೆ ಬಳಸಿ ಎಸೆಯುವ ಪ್ಲಾಸ್ಟಿಕ್‌ ಉತ್ಪನ್ನಗಳನ್ನು ನಿಷೇಧವಿದೆ. ಭಾರತ ಈ ಪಟ್ಟಿಗೆ ಹೊಸ ಸೇರ್ಪಡೆ.
 • ನಮ್ಮ ಮಂಗಳೂರು ಪಾಲಿಕೆಯ ಸಭೆಯಲ್ಲಿ ಬಾಟಲಿ–ಲೋಟದಲ್ಲಿ ನೀರು ಕೊಡುವುದಿಲ್ಲ. ಸ್ಟೀಲ್‌ ಜಗ್‌ ಮತ್ತು ಲೋಟದಲ್ಲಿ ನೀರು ಕೊಡಲಾಗುತ್ತದೆ.

ಕ್ರಮಗಳು

 • ನಿಷೇಧಿಸಲ್ಪಟ್ಟ ಪ್ಲಾಸ್ಟಿಕ್‌ ಅನ್ನು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಸಾಗಣೆ ಮಾಡುವುದನ್ನು ತಪ್ಪಿಸುವ ಸಲುವಾಗಿ ಗಡಿ ಭಾಗದಲ್ಲಿ ತಪಾಸಣಾ ಕೇಂದ್ರಗಳನ್ನು ಆರಂಭಿಸುವಂತೆ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಲಾಗಿದೆ.
 • ಆದೇಶ ಉಲ್ಲಂಘಿಸುವವರಿಗೆ ದಂಡದ ಜೊತೆಗೆ ಜೈಲು ಶಿಕ್ಷೆ ವಿಧಿಸುವ ಅವಕಾಶ ಇದೆ. ಪರಿಸರ ಇಲಾಖೆಯು 2020ರಲ್ಲಿ ಆರಂಭಿಸಿದ್ದ ‘ಗ್ರೀನ್‌ ವಾರ್‌ ರೂಂ’ಗಳ ಮೂಲಕ ವಾಯು ಗುಣಮಟ್ಟ ಪರಿಶೀಲಿಸಲಿದೆ. ಜೊತೆಗೆ ಈ ಕುರಿತ ದೂರುಗಳನ್ನೂ ಸ್ವೀಕರಿಸಿ ಪರಿಹಾರ ಒದಗಿಸಲಿದೆ’.    ಭಾರತದಲ್ಲಿ ವಾರ್ಷಿಕ ಸುಮಾರು 2.4 ಲಕ್ಷ ಟನ್‌ ಏಕಬಳಕೆ ಪ್ಲಾಸ್ಟಿಕ್‌ ಉತ್ಪಾದಿಸಲಾಗುತ್ತದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಹೇಳಿದೆ.

ಪ್ಲಾಸ್ಟಿಕ್ ಹುಟ್ಟು ಹಾಕುವ ಅಪಾಯಗಳು

 • ಪ್ಲಾಸ್ಟಿಕ್ ತಯಾರಿಕಾ ಹಂತದಲ್ಲಿಯೇ ದೊಡ್ಡ ಮಟ್ಟದ ಮಾಲಿನ್ಯವನ್ನು ಉಂಟುಮಾಡುತ್ತದೆ. ಇದು ನೇರವಾಗಿ ಮನುಷ್ಯ ಮತ್ತು ಪ್ರಾಣಿಗಳ ಆರೋಗ್ಯದ ಮೇಲೆ ದುಷ್ಟರಿಣಾಮ ಬೀರುತ್ತದೆ.
 • ಅಮೆರಿಕದ ಪರಿಸರ ಸಂರಕ್ಷಣಾ ಸಂಸ್ಥೆ 1986ರಲ್ಲಿ ತೀರಾ ಅಪಾಯಕಾರಿ ತ್ಯಾಜ್ಯವನ್ನು ಉತ್ಪಾದಿಸುವ ಇಪ್ಪತ್ತು ರಾಸಾಯನಿಕಗಳ ಪಟ್ಟಿಯೊಂದನ್ನು ತಯಾರಿಸಿತ್ತು. ಅದರಲ್ಲಿ ಮೊದಲ ಐದು ರಾಸಾಯನಿಕಗಳು ಪ್ಲಾಸ್ಟಿಕ್ ಕಾರ್ಖಾನೆಗಳಲ್ಲಿ ಸಾಮಾನ್ಯವಾಗಿ ಉಪಯೋಗಿಸುವಂಥವುಗಳಾ ಗಿವೆ.
 • ಬೆಳವಣಿಗೆಗೆ ತೊಂದರೆ, ಉಸಿರಾಟದ ತೊಂದರೆ, ತಲೆನೋವು, ಆಯಾಸ, ಹಾರ್ಮೋನುಗಳ ಬದಲಾವಣೆಗಳು, ವೀರ್ಯಾಣುಗಳ ಸಂಖ್ಯೆ ಕ್ಷೀಣಗೊಳ್ಳುವಿಕೆ, ಬಂಜೆತನ ಮುಂತಾದ ತೊಂದರೆಗಳನ್ನು ಉಂಟುಮಾಡ ಬಲ್ಲದು.
 • ಪ್ಲಾಸ್ಟಿಕ್ ವಸ್ತು ಗಳು ಸಾಮಾ ನ್ಯವಾಗಿ ಯಾವುದೇ ಒಂದು ವಸ್ತುವಿನೊಂದಿಗೂ ವರ್ತಿಸುವುದಿಲ್ಲ. ಆದರೆ ಪ್ಲಾಸ್ಟಿಕ್ನಲ್ಲಿರುವ ಕೆಲವೊಂದು ವಿಷಕಾರಿ ರಾಸಾಯನಿಕಗಳು ದೀರ್ಘಕಾಲದ ಸಂಪರ್ಕದಲ್ಲಿ ಆಹಾರ ಪದಾರ್ಥಗಳೊಂದಿಗೆ ವರ್ತಿಸುವ ಸಾಮರ್ಥ್ಯವನ್ನು ಹೊಂದಿವೆ.
 • ತೇವಾಂಶವಿರುವ ಆಹಾರ ಪದಾರ್ಥಗಳು ದೀರ್ಘ ಕಾಲ ಪ್ಲಾಸ್ಟಿಕ್ನೊಂದಿಗೆ ಇದ್ದಾಗ ಅಲ್ಲಿ ರಾಸಾಯನಿಕ ಪ್ರಕ್ರಿಯೆ ಉಂಟಾಗಿ ಅವು ವಿಷವಾಗಿ ಪರಿವರ್ತನೆಗೊ ಳ್ಳುತ್ತವೆ. ಆ ಪದಾರ್ಥಗಳನ್ನು ನಾವು ಸೇವಿಸುವುದರಿಂದ ಅನೇಕ ರೋಗಗಳಿಗೆ ತುತ್ತಾಗಲು ಅವಕಾಶ ಕಲ್ಪಿಸಿದಂತಾಗುತ್ತದೆ.

ಪರಿಸರ ಹಾನಿ

 • ಜನರು ಪ್ಲಾಸ್ಟಿಕ್ ಚೀಲಗಳಲ್ಲಿ ಹಸಿ ತ್ಯಾಜ್ಯವನ್ನು ತುಂಬಿ ಅವೈಜ್ಞಾನಿಕವಾಗಿ ಎಲ್ಲೆಂದರಲ್ಲಿ ಎಸೆಯುತ್ತಾರೆ. ಇದರಿಂದಾಗಿ ಆ ಹಸಿ ತ್ಯಾಜ್ಯ ನೆಲದ ಸಂಪರ್ಕವನ್ನು ಪಡೆಯದೇ ಅಲ್ಲಿ ಕೊಳೆತು ನಾರುತ್ತದೆ. ಮಣ್ಣಿನಲ್ಲಿ ಸೇರಿ ಹೋಗುವ ಅವಕಾಶ ಅದಕ್ಕೆ ಇರುವುದೇ ಇಲ್ಲ. ಇದರಿಂದ ಮಣ್ಣಿನ ಫಲವತ್ತತೆ ಕಡಿಮೆಯಾಗುವುದಲ್ಲದೆ ಮಣ್ಣಿನಲ್ಲಿರುವ ಎರೆಹುಳಗಳ ಜೀವಕ್ಕೆ ಮಾರಕವಾಗಿವೆ.
 • ಪ್ಲಾಸ್ಟಿಕನ್ನು ಪರಿಸರದಲ್ಲಿ ಎಲ್ಲೆಂದರಲ್ಲಿ ಎಸೆದಾಗ ಅದು ಮಣ್ಣಿನಲ್ಲಿ ಸಸಿಗಳ ಬೇರು ಇಳಿಯದಂತೆ ತಡೆಯುತ್ತದೆ. ಇದರಿಂದಾಗಿ ಪ್ಲಾಸ್ಟಿಕ್ ಇರುವಲ್ಲಿ ಒಂದು ಹುಲ್ಲು ಕಡ್ಡಿ ಕೂಡ ಹುಟ್ಟುವುದಿಲ್ಲ.
 • ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಅನ್ನು ಎಸೆಯುವ ಪರಿಣಾಮವಾಗಿ ನೀರು ಮಣ್ಣಿನಲ್ಲಿ ಇಂಗದಂತೆ ಪ್ಲಾಸ್ಟಿಕ್ ತಡೆಯುತ್ತದೆ. ಇದರಿಂದ ಅಂತರ್ಜಲದ ಮಟ್ಟ ಕುಸಿಯಲು ಪ್ಲಾಸ್ಟಿಕ್ ಕಾರಣವಾಗುತ್ತದೆ.
 • ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹರಿಯುವ ಚರಂಡಿ, ನದಿಗಳಲ್ಲಿ ಬಿಸಾಡುವುದರಿಂದ ಜಲ ಮಾಲಿನ್ಯ ಉಂಟಾಗುವುದಲ್ಲದೆ ನೀರಿನ ಹರಿವಿಗೆ ತೊಂದರೆ ಉಂಟಾಗುತ್ತದೆ.
 • ಉಪಯೋಗಿಸಿ ಬಿಸಾಡುವ ಪ್ಲಾಸ್ಟಿಕ್ ತಟ್ಟೆ -ಲೋಟಗಳಲ್ಲಿ ನೀರು ನಿಲ್ಲುತ್ತದೆ. ಅದರಲ್ಲಿ ಸೊಳ್ಳೆಗಳು ಸಂತಾನೋತ್ಪತ್ತಿ ಮಾಡುತ್ತವೆ. ಆದ್ದರಿಂದ ಇವು ಮಲೇರಿಯಾ, ಫೈ ಲೇರಿಯಾ (ಆನೆಕಾಲು ರೋಗ), ಡೆಂಗ್ಯೂ, ಚಿಕುನ್ ಗುನ್ಯಾದಂಥ ಸಾಂಕ್ರಾಮಿಕ ರೋಗಗಳ ಆಶ್ರಯತಾಣವಾಗುತ್ತವೆ.
 • ಪ್ಲಾಸ್ಟಿಕ್ ನೂರು ವರ್ಷ ಕಳೆದರೂ ಮಣ್ಣಿನಲ್ಲಿ ಸೇರಿ ಹೋಗುವುದಿಲ್ಲ. ಇದನ್ನು ಉರಿಸಿದಾಗ ಅದು ಮುದ್ದೆಯಾಗುತ್ತದೆಯೇ ವಿನಾ ನಾಶವಾಗುವುದಿಲ್ಲ. ಇದನ್ನು ಉರಿಸಿದಾಗ ದೊಡ್ಡ ಪ್ರಮಾಣದಲ್ಲಿ ಪೋಸ್ಟೀ ನ್, ಕಾರ್ಬನ್ ಮೋನಾಕ್ಸೆ„ಡ್, ಕ್ಲೋ ರಿನ್, ಸಲ#ರ್ ಡೈ ಆಕ್ಸೆ„ಡ್, ಡಯಾಕ್ಸಿನ್ ಮುಂತಾದ ವಿಷಾನಿಲಗಳು ವಾತಾವರಣ ಸೇರುತ್ತವೆ. ಇದು ವಾಯು ಮಾಲಿನ್ಯಕ್ಕೆ ಕಾರಣವಾಗುತ್ತದೆ.
 • ಈ ವಿಷಾನಿಲ ಗಾಳಿಯೊಂದಿಗೆ ಸೇರಿ ಮನುಷ್ಯನ ದೇಹವನ್ನು ಪ್ರವೇಶಿಸುವುದರಿಂದ ಶ್ವಾಸಕೋಶದ ತೊಂದರೆಗಳು, ಉಸಿರಾಟದ ತೊಂದರೆಗಳು ಹೆಚ್ಚು ಕಂಡುಬರುತ್ತವೆ.

ಪ್ರಾಣಿ, ಪಕ್ಷಿ, ಜಲಚರಗಳ ಮೇಲೆ ಹಾನಿ

 • ಮನೆಯಲ್ಲಿ ಉಳಿದ ಆಹಾರ ವಸ್ತುಗಳನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿ ಎಲ್ಲೆಂದರಲ್ಲಿ ಎಸೆಯುವ ಪರಿಣಾಮ ಆ ಚೀಲಗಳಲ್ಲಿರುವ ಆಹಾರ ವಸ್ತುಗಳನ್ನು ತಿನ್ನಲು ಬಯಸುವ ಪ್ರಾಣಿ ಪಕ್ಷಿಗಳು ಆಹಾರವನ್ನು ಪ್ಲಾಸ್ಟಿಕ್ನೊಂದಿಗೆ ನುಂಗಿ ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತವೆ.
 • ನಮ್ಮ ದೇಶದಲ್ಲಿ ವರ್ಷಕ್ಕೆ ಸುಮಾರು ಇಪ್ಪತ್ತು ಸಾವಿರ ಜಾನುವಾರುಗಳು ಪ್ಲಾಸ್ಟಿಕ್ ನುಂಗಿ ಪ್ರಾಣವನ್ನು ಕಳೆದುಕೊಳುತ್ತವೆ. ದನ-ಕರುಗಳು ಪ್ಲಾಸ್ಟಿಕನ್ನು ನುಂಗಿದಾಗ ಅವುಗಳ ಹೊಟ್ಟೆಯಲ್ಲಿ ಅದರಲ್ಲಿರುವ ರಾಸಾಯನಿಕಗಳು ಸೇರಿ ಹಾಲಿನೊಂದಿಗೆ ಬೆರೆತು ಮನುಷ್ಯನ ದೇಹವನ್ನು ಸೇರುತ್ತಿವೆ ಎಂಬುದು ಸಂಶೋಧನೆಯಿಂದ ದೃಢಪಟ್ಟಿದೆ.
 • ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಮುದ್ರದಲ್ಲಿ ಎಸೆಯುವ ಪರಿಣಾಮ ಅವು ಅಲ್ಲಿರುವ ಜಲಚರಗಳ ದೇಹದೊಳಕ್ಕೆ ಸೇರಿ ಜಲಚರಗಳ ಜೀವಕ್ಕೆ ಹಾನಿಯುಂಟು ಮಾಡುತ್ತದೆ.