Published on: November 4, 2023
ಕನ್ನಡ ರಾಜ್ಯೋತ್ಸವ 2023
ಕನ್ನಡ ರಾಜ್ಯೋತ್ಸವ 2023
ಸುದ್ದಿಯಲ್ಲಿ ಏಕಿದೆ? ಪ್ರತಿವರ್ಷ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುತ್ತದೆ. ಪ್ರತಿವರ್ಷ ರಾಜ್ಯ ಸರ್ಕಾರ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುತ್ತೆ.
ಮುಖ್ಯಾಂಶಗಳು
- ಈ ವರ್ಷ ಕರ್ನಾಟಕವೆಂದು ನಾಮಕರಣ ಮಾಡಿ 50 ವರ್ಷವಾದ ಹಿನ್ನೆಲೆಯಲ್ಲಿ ಕರ್ನಾಟಕ-50 ಎಂಬ ಶಿರ್ಷಿಕೆ ಅಡಿಯಲ್ಲಿ ಸರ್ಕಾರ ವಿಶೇಷವಾಗಿ ರಾಜ್ಯೋತ್ಸವ ಆಚರಿಸುತ್ತಿದೆ.
- 13 ಮಹಿಳೆಯರು ಮತ್ತು 54 ಪುರುಷರು ಹಾಗೂ ಒಬ್ಬರು ಮಂಗಳ ಮುಖಿ ಸೇರಿದಂತೆ ವಯಕ್ತಿಕವಾಗಿ ಒಟ್ಟು 68 ಸಾಧಕರಿಗೆ ಹಾಗೂ ಕರ್ನಾಟಕ ಸಂಭ್ರಮ-50 ರ ಪ್ರಯುಕ್ತ ವಿಶೇಷವಾಗಿ 10 ಸಂಘ-ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಯಿತು.
ಹಿನ್ನೆಲೆ
1956 ರ ನವೆಂಬರ್ 1 ರಂದು, ಮದ್ರಾಸ್, ಮುಂಬಯಿ, ಹೈದರಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳು ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು. ಹಾಗೂ ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೆಯ ಮೈಸೂರು ಎಂಬುದಾಗಿ ಹೊಸದಾಗಿ ರೂಪುಗೊಂಡ ಮೈಸೂರು ರಾಜ್ಯವನ್ನು ಮೂರು ಪ್ರದೇಶಗಳಲ್ಲಿ ಗುರುತಿಸಲಾಯಿತು. ನವೆಂಬರ್ 1, 1973 ರಂದು ಮೈಸೂರು ರಾಜ್ಯಕ್ಕೆ “ಕರ್ನಾಟಕ” ಎಂದು ನಾಮಕರಣ ಮಾಡಲಾಯಿತು.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಕುರಿತು
- ಕರ್ನಾಟಕದ ಎರಡನೇ ಅತ್ಯುನ್ನತ ನಾಗರಿಕ ಗೌರವವಾಗಿದೆ
- ನವೆಂಬರ್ 1 ರಂದು ರಾಜ್ಯ ಸ್ಥಾಪನೆಯ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದಿಂದ ವಾರ್ಷಿಕವಾಗಿ ನೀಡಲಾಗುತ್ತದೆ.
- ಇದನ್ನು ಹಿಂದೆ ಮೈಸೂರು ರಾಜ್ಯ ಪ್ರಶಸ್ತಿ ಎಂದು ಕರೆಯಲಾಗುತ್ತಿತ್ತು
- ಮೊದಲ ಪ್ರಶಸ್ತಿ: 1966ರಲ್ಲಿ ನೀಡಲಾಯಿತು
- ಬಹುಮಾನ: 5 ಲಕ್ಷ ರೂಪಾಯಿ , 25 ಗ್ರಾಂ ಚಿನ್ನ ಮತ್ತು ಫಲಕ
- ಪ್ರಶಸ್ತಿಯನ್ನು 1977, 1978, 1979, 1980 ಮತ್ತು 2009 ರಲ್ಲಿ ನೀಡಲಾಗಿಲ್ಲ.
- ನೀಡುವವರು :ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ