Published on: September 15, 2023

‘ಕರ್ನಾಟಕ ರಾಜ್ಯ ಗಿಗ್‌ ಕಾರ್ಮಿಕ ವಿಮಾ ಯೋಜನೆ’

‘ಕರ್ನಾಟಕ ರಾಜ್ಯ ಗಿಗ್‌ ಕಾರ್ಮಿಕ ವಿಮಾ ಯೋಜನೆ’

ಸುದ್ದಿಯಲ್ಲಿ ಏಕಿದೆ? ಇ-ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯದ ಗಿಗ್ ಕಾರ್ಮಿಕರಿಗೆ ‘ಕರ್ನಾಟಕ ರಾಜ್ಯ ಗಿಗ್‌ ಕಾರ್ಮಿಕ ವಿಮಾ ಯೋಜನೆ’ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮುಖ್ಯಾಂಶಗಳು

  • ಎಲ್ಲಾ ಇ-ಕಾಮರ್ಸ್ ಡೆಲಿವರಿ ಉದ್ಯೋಗಿಗಳಿಗೆ 4 ಲಕ್ಷಗಳ ಜೀವ ಮತ್ತು ಅಪಘಾತ ವಿಮೆಯನ್ನು ನೀಡಲಾಗುವುದು ಎಂದು 2023-24ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಲಾಗಿತ್ತು  

ಯೋಜನೆಯ ವಿವರ

  • ಗಿಗ್ ಉದ್ಯೋಗಿಗಳಿಗೆ 2 ಲಕ್ಷ ರೂ. ಜೀವ ವಿಮೆ ಹಾಗೂ 2 ಲಕ್ಷ ರೂ. ಅಪಘಾತ ವಿಮೆ ಸೇರಿದಂತೆ 4 ಲಕ್ಷ ರೂ. ವಿಮೆ ದೊರೆಯಲಿದೆ.
  • ಅಪಘಾತದಿಂದ ಉಂಟಾಗುವ ಸಂಪೂರ್ಣ ಶಾಶ್ವತ/ಭಾಗಶಃ ಅಂಗವೈಕಲ್ಯ ಪರಿಹಾರವಾಗಿ (ಶೇಕಡವಾರು ಅಂಗವೈಕಲ್ಯ ಆಧಾರದ ಮೇಲೆ) 2 ಲಕ್ಷ ರು. ಪರಿಹಾರ ದೊರೆಯಲಿದೆ. ಆಸ್ಪತ್ರೆ ವೆಚ್ಚ ಮರುಪಾವತಿ 1 ಲಕ್ಷ ರು.ವರೆಗೆ ಲಭ್ಯವಾಗಲಿದೆ.
  • ಈ ಸೌಲಭ್ಯಗಳು ಕರ್ತವ್ಯದಲ್ಲಿ ಇರುವಾಗ ಮತ್ತು ಕರ್ತವ್ಯದಲ್ಲಿ ಇರದೇ ಇದ್ದಾಗಲೂ ಸಂಭವಿಸುವ ಅಪಘಾತ ಹೊಂದಿದ್ದಲ್ಲಿ ಅನ್ವಯಿಸುತ್ತದೆ. ಈ ಸೌಲಭ್ಯಗಳು ಗಿಗ್‌ ಕಾರ್ಮಿಕರ ಉದ್ಯೋಗದಾತರು/ ಅಗ್ರಿಗೇಟರ್‌ ಸಂಸ್ಥೆಗಳು ನೀಡುತ್ತಿರುವ ಸೌಲಭ್ಯಕ್ಕೆ ಹೆಚ್ಚುವರಿಯಾಗಿ ಲಭ್ಯವಾಗುತ್ತದೆ.
  • ಗಿಗ್‌ ಕಾರ್ಮಿಕರು ರಾಜ್ಯ ಸರ್ಕಾರದ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಅರ್ಜಿ ಸಲ್ಲಿಸಿ ಗುರುತಿನ ಚೀಟಿ ಪಡೆಯಬೇಕಾಗುತ್ತದೆ.
  • ಅರ್ಹತೆ: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 60 ವರ್ಷದ ಎಲ್ಲ ಪ್ಲಾಟ್‌ಫಾರಂ ಆಧಾರಿತ ಗಿಗ್‌ ಕಾರ್ಮಿಕರು ಯೋಜನೆಗೆ ಒಳಪಡುತ್ತಾರೆ. ಆದಾಯ ತೆರಿಗೆ ಪಾವತಿದಾರರಾಗಿಬಾರದು. ಇಎಸ್‌ಐ ಮತ್ತು ಇಪಿಎಫ್‌ ಸೌಲಭ್ಯ ಹೊಂದಿರಬಾರದು.
  • ಒಂದು ವೇಳೆ ಫಲಾನುಭವಿ ಆತ್ಮಹತ್ಯೆ ಮಾಡಿಕೊಂಡಲ್ಲಿ, ಅಪಘಾತದ ವೇಳೆ ಮದ್ಯ ಅಥವಾ ಮಾದಕ ದ್ರವ್ಯ ಸೇವಿಸಿದಲ್ಲಿ, ಬುದ್ಧಿಭ್ರಮಣೆ ಕಾರಣ ಅಪಘಾತ ಸಂಭವಿಸಿದ್ದಲ್ಲಿ, ಅಪರಾಧದ ಉದ್ದೇಶದಿಂದ ಮಾಡಿದ ಯಾವುದಾದರೂ ಕಾನೂನು ಉಲ್ಲಂಘನೆಯ ಕಾರಣ ಅಪಘಾತ ಮಾಡಿದ್ದಲ್ಲಿ ಈ ಸೌಲಭ್ಯ ದೊರೆಯುವುದಿಲ್ಲ.

ಗಿಗ್ ಕಾರ್ಮಿಕರು ಎಂದರೆ: “ಗಿಗ್ ಕಾರ್ಮಿಕರು  ಹೆಚ್ಚಾಗಿ ಅರೆಕಾಲಿಕ ಆಧಾರದ ಮೇಲೆ ಪೂರಕ ಆದಾಯವನ್ನು ಗಳಿಸುವ ಮಾರ್ಗವಾಗಿ ಕೆಲಸ ಮಾಡುತ್ತಿರುತ್ತಾರೆ”.  ಸ್ವಿಗ್ಗಿ, ಜೊಮಾಟೋಗಳಲ್ಲಿ ಫುಡ್ ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಪ್ಲಿಪ್ ಕಾರ್ಟ್, ಬಿಗ್ ಬಾಸ್ಕೆಟ್ ನಂತಹ ಕಂಪನಿಗಳ ಉದ್ಯೋಗಿಗಳು