Published on: March 3, 2023

ಕಾವೇರಿ 2.0 ತಂತ್ರಾಂಶ

ಕಾವೇರಿ 2.0 ತಂತ್ರಾಂಶ


ಸುದ್ದಿಯಲ್ಲಿ ಏಕಿದೆ? ಕಂದಾಯ ಇಲಾಖೆಯ ನೋಂದಣಿ ವ್ಯವಸ್ಥೆಯಲ್ಲಿ ಮಧ್ಯವರ್ತಿ ಹಾವಳಿ, ವಂಚನೆ ತಡೆದು ಜನಸ್ನೇಹಿ ಸೇವೆ ನೀಡುವ ಉದ್ದೇಶದಿಂದ ಅಭಿವೃದ್ಧಿ ಪಡಿಸಿದ ‘ಕಾವೇರಿ 2.0’ ತಂತ್ರಾಂಶದ ಸೇವೆ ಮೂರು ತಿಂಗಳಲ್ಲಿ ರಾಜ್ಯಾದ್ಯಂತ ಲಭ್ಯವಾಗಲಿದೆ. 


ಮುಖ್ಯಾಂಶಗಳು

  • ನೋಂದಣಿ ಮತ್ತು ಮುದ್ರಾಂಕ ಇಲಾಖೆ ಸೇವೆ ಬಗ್ಗೆ ಸಾಕಷ್ಟು ದೂರುಗಳು ಕೇಳಿ ಬರುತ್ತಿದ್ದು, ಅಭಿವೃದ್ಧಿ ಪಡಿಸಿದ ನೂತನ ತಂತ್ರಾಂಶದಿಂದ ಸೇವೆಗಳು ಸುಲಭವಾಗಲಿವೆ.
  • ಕಲ್ಯಾಣ ಕರ್ನಾಟಕದ ಕಲಬುರಗಿ ಜಿಲ್ಲೆಯ ಚಿಂಚೋಳಿಯಲ್ಲಿರುವ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಜನಸ್ನೇಹಿ ತಂತ್ರಾಂಶವನ್ನು ಪರೀಕ್ಷಿಸಲಾಗಿದೆ.
  • ಇಲ್ಲಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಎಲ್ಲಾ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಅಳವಡಿಕೆ ಮಾಡಲಾಗುವುದು.
  • ಶೀಘ್ರದಲ್ಲಿ ದೊಡ್ಡಬಳ್ಳಾಪುರದಲ್ಲಿ ಅಧಿಕೃತವಾಗಿ ಜಾರಿಗೆ ಬರಲಿದೆ.

ಉದ್ದೇಶ

  • ನಕಲಿ ದಾಖಲೆಗಳನ್ನು ನೀಡಿ ನೋಂದಣಿ ಮಾಡುವ ಪ್ರಕ್ರಿಯೆಗೆ ಕಡಿವಾಣ ಬೀಳಲಿದೆ, ಕಚೇರಿಗೆ ಬಂದು ದಿನವಿಡಿ ಕಾಯುವುದು ತಪ್ಪಲಿವೆ. ನೋಂದಣಿಗೆ ಸಂಬಂಧಪಟ್ಟಂತೆ ಹಿಂದೆ ಡಿಡಿ, ಚಲನ್‌ಗಳ ಹಗರಣ ನಡೆದಿತ್ತು. ಯಾರದ್ದೋ ಹೆಸರಿಗೆ ಡಿಡಿ ಹೋಗುತ್ತಿತ್ತು. ಕಚೇರಿ ಸದಾ ಜನರಿಂದ ಕೂಡಿರುತ್ತಿತ್ತು. ಹೊಸ ತಂತ್ರಾಂಶದಿಂದ ಈಗ ಎಲ್ಲ ಸಮಸ್ಯೆ ಬಗೆಹರಿಯಲಿದೆ.

3 ಹಂತದಲ್ಲಿ ಕಾರ್ಯ ನಿರ್ವಹಿಸಲಿದೆ

1.ನೋಂದಣಿ ಪೂರ್ವ: ನಾಗರಿಕರು ನೋಂದಣಿ ಕಚೇರಿಗೆ ಹಾಜರಾಗುವ ಮುನ್ನ ಎಲ್ಲ ಡೇಟಾ ಮತ್ತು ದಾಖಲೆಗಳನ್ನು ಆನ್‌ಲೈನ್‌ ಮೂಲಕ ಅಪ್‌ಲೋಡ್‌ ಮಾಡಿ ಉಪನೋಂದಣಾಧಿಕಾರಿಗಳ ಕಚೇರಿಗೆ ಕಳುಹಿಸಬೇಕು. ಈ ದಾಖಲೆಗಳನ್ನು ಪರಿಶೀಲಿಸಿದ ನಂತರ ನಿಗದಿತ ಶುಲ್ಕ ಪಾವತಿಸಲು ತಿಳಿಸಲಾಗುತ್ತದೆ. ನಂತರ ನಾಗರಿಕರು ತಮ್ಮ ಅನುಕೂಲಕ್ಕೆ ಅನುಗುಣವಾಗಿ ನೋಂದಣಿ ಪ್ರಕ್ರಿಯೆ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಬಹುದಾಗಿದೆ. ನಾಗರಿಕರು ತಮ್ಮ ಭಾವಚಿತ್ರ ಹೆಬ್ಬೆರಳು ಗುರುತನ್ನು ಸೆರೆ ಹಿಡಿಯುವ ಸಂಬಂಧ ನಿಗದಿತ ದಿನಾಂಕ ಮತ್ತು ಸಮಯದಲ್ಲಿ ಉಪನೋಂದಣಿ ಕಚೇರಿಗೆ ಬರಬೇಕು.

  1. ನೋಂದಣಿ: ನೋಂದಣಿ ಪ್ರಕ್ರಿಯೆ 10 ನಿಮಿಷಗಳಲ್ಲಿ ಮುಗಿಯಲಿದೆ.

ವಂಚನೆ ರಹಿತ ತಂತ್ರಾಂಶ: ಅಭಿವೃದ್ಧಿ ಪಡಿಸಿದ ತಂತ್ರಾಂಶದಿಂದ ವಂಚನೆ ತಡೆಯಬಹುದಾಗಿದೆ. ತಂತ್ರಾಂಶವನ್ನು ಇತರೆ ಇಲಾಖೆಯ ತಂತ್ರಾಂಶಗಳೊಂದಿಗೆ ಸಂಯೋಜಿಸಲಾಗಿದೆ. ಕೃಷಿ ಜಮೀನುಗಳ ವಿವರ ಪಡೆಯಲು ‘ಭೂಮಿ’ ಗ್ರಾಮೀನ ಹಾಗೂ ನಗರ ಪ್ರವೇಶದ ಕೃಷಿಯೇತರ ಸ್ವತ್ತುಗಳಿಗೆ ‘ಇ-ಸ್ವತ್ತು ಸೇರಿದಂತೆ ‘ಸಕಾಲ’, ಖಜಾನೆ-2 ತಂತ್ರಾಂಶಗಳೊಂದಿಗೆ ಸಂಯೋಜಿಸಿರುವುದರಿಂದ ಮೋಸದ ನೋಂದಣಿ ತಡೆಯಬಹುದಾಗಿದೆ. ನೋಂದಾಯಿತ ದಸ್ತಾವೇಜಿನ ವಿವರಗಳನ್ನು ಸಂಬಂಧಪಟ್ಟ ಸಂಯೋಜಿತ ಇಲಾಖೆಗೆ ಮ್ಯೂಟೇಶನ್‌ಗೆ ಕಳುಹಿಸಲಾಗುವುದು.

ಕಾಲ್‌ಸೆಂಟರ್‌ ಸ್ಥಾಪನೆ: ನಾಗರಿಕರಿಗೆ ಜಾಗೃತಿ ಮೂಡಿಸಲು, ಹೊಸ ವ್ಯವಸ್ಥೆಯಲ್ಲಿ ಸಹಾಯ ಮಾಡಲು, ಅರ್ಜಿಯ ಸ್ಥಿತಿ ತಿಳಿಯಲು ಹಾಗೂ ಕುಂದುಕೊರತೆಗಳನ್ನು ದಾಖಲಿಸಲು ಕಾಲ್‌ ಸೆಂಟರ್‌ ಸ್ಥಾಪಿಸಲಾಗಿದೆ.

ಪಾಸ್‌ಪೋರ್ಟ್‌ ಮಾದರಿ ಕಚೇರಿ: ಇನ್ನು ಮುಂದೆ ನೋಂದಣಿ ಕಚೇರಿಗಳನ್ನು ಪಾಸ್‌ಪೋರ್ಟ್‌ ಮಾದರಿ ಕಚೇರಿಯಲ್ಲಿ ಸಿದ್ಧಪಡಿಸಲಾಗುವುದು. ನಾಗರಿಕರಿಗೆ ಕಾಯುವ ಪ್ರದೇಶ, ವಿಶ್ರಾಂತಿ ಕೊಠಡಿ, ಕ್ಯಾಂಟೀನ್‌, ರಾರ‍ಯಂಪ್‌, ಲಿಫ್‌ಟ ಮುಂತಾದ ಸೌಲಭ್ಯಗಳನ್ನು ಕಲ್ಪಿಸಲಾಗುವುದು