Published on: July 19, 2022

ಕಾಶಿ ಯಾತ್ರಾರ್ಥಿಗಳಿಗೆ ಸಹಾಯಧನ

ಕಾಶಿ ಯಾತ್ರಾರ್ಥಿಗಳಿಗೆ ಸಹಾಯಧನ

http://wendykeithdesigns.co.uk/wordpress ಸುದ್ದಿಯಲ್ಲಿ ಏಕಿದೆ?

far-forth ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ ಸಹಾಯಧನವನ್ನು ಡಿಬಿಟಿ ಮೂಲಕ ಆನ್ ಲೈನ್ ನಲ್ಲಿ ವರ್ಗಾವಣೆ ಮಾಡಿದರು.

ಮುಖ್ಯಾಂಶಗಳು

  • ದಿವ್ಯ ಕಾಶಿ – ಭವ್ಯ ಕಾಶಿಯಾಗಿ ಅನಾವರಣಗೊಂಡಿರುವ ಕಾಶಿಯನ್ನು ರಾಜ್ಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸಂದರ್ಶಿಸಲಿ ಎನ್ನುವ ಉದ್ದೇಶದಿಂದ ಸಹಾಯಧನ ಯೋಜನೆ ಪ್ರಾರಂಭಿಸಲಾಗಿದೆ. ಈ ಬಾರಿಯ ಆಯವ್ಯಯದಲ್ಲಿ ಇದಕ್ಕಾಗಿ ಅಗತ್ಯ ಅನುದಾನವನ್ನೂ ನೀಡಲಾಗಿದೆ.
  • ಯಾತ್ರಾರ್ಥಿಗಳು ಸುಲಭವಾಗಿ ಸಹಾಯಧನ ಪಡೆದುಕೊಳ್ಳುವುದಕ್ಕೆ ಅನುವು ಮಾಡಿಕೊಡುವ ವೆಬ್‌ಪೋರ್ಟಲ್‌ನ್ನು ಸೇವಾಸಿಂಧು ವೆಬ್‌ಪೋರ್ಟ್‌ಲ್‌ನಲ್ಲಿ ಸಿದ್ದಪಡಿಸಲಾಗಿದೆ. ಯಾತ್ರಾರ್ಥಿಗಳು ಕಾಶಿಗೆ ಭೇಟಿ ನೀಡಿದ ಸಂಧರ್ಭದಲ್ಲಿ ಅಲ್ಲಿನ ಕರ್ನಾಟಕ ಛತ್ರದಲ್ಲಿ ತಮ್ಮ ಹೆಸರು ನೊಂದಣಿ ಮಾಡಿಸಿಕೊಂಡು ಅಗತ್ಯ ದಾಖಲಾತಿಗಳನ್ನು ವೆಬ್‌ಪೋರ್ಟ್‌ಲ್‌ ಮೂಲಕ ಸಲ್ಲಿಸಬಹುದು.
  • ಈ ರೀತಿಯಾಗಿ ಅಪ್‌ಲೋಡ್‌ ಮಾಡಲಾದ ದಾಖಲೆಗಳನ್ನು ಪರಿಶೀಲಿಸಿ ಅರ್ಜಿದಾರರ ಆಧಾರ್‌ ಲಿಂಕ್‌ ಹೊಂದಿರುವ ಬ್ಯಾಂಕ್‌ ಖಾತೆಗೆ ರೂ. 5,000 ಗಳ ಸಹಾಯ ಧನವನ್ನು ನೇರವಾಗಿ ಡಿ.ಬಿ.ಟಿ ಮೂಲಕ ಜಮಾ ಮಾಡಲಾಗುವುದು.