Published on: December 29, 2022

ಕುಕ್ಕೆ ಸುಬ್ರಹ್ಮಣ್ಯ ದೇವಾಲಯ

ಕುಕ್ಕೆ ಸುಬ್ರಹ್ಮಣ್ಯ ದೇವಾಲಯ

Maholi ಸುದ್ದಿಯಲ್ಲಿ ಏಕಿದೆ?  ಸಚಿವೆ ಸ್ಮೃತಿ ಇರಾನಿ ಅವರು ದೇವಳದ ಕಿರುಷಷ್ಠಿ ಮಹೋತ್ಸವದ ಕಾರ್ತಿಕ ವೇದಿಕೆಯಲ್ಲಿ  ಪವಿತ್ರ ಶ್ರದ್ಧಾಕೇಂದ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೇಂದ್ರ ಸರ್ಕಾರದ ‘ http://noamchen.com/israel-stock-photos/ ಸ್ವದೇಶಿ ದರ್ಶನ್’ ಯೋಜನೆಯನ್ನು ಜಾರಿಗೆ ತರಲು ಉತ್ಸುಕಳಾ ಗಿದ್ದೇ ನೆ ಎಂದು ಹೇಳಿದರು.

ಮುಖ್ಯಾಂಶಗಳು

  • ದೇವಳದಿಂದ ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಕಳಿಸಿ, ಅಲ್ಲಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಬಂದರೆ ಖಂಡಿತವಾಗಿಯೂ ಯೋಜನೆ ಜಾರಿಗೊಳಿಸಲಾಗುತ್ತದೆ’

ಸ್ವದೇಶ್ ದರ್ಶನ್ ಯೋಜನೆ

  • ದೇಶದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವ ಮೂಲ ಉದ್ದೇಶದೊಂದಿಗೆ ಕೇಂದ್ರ ಸರ್ಕಾರವು ಸ್ವದೇಶ್ ದರ್ಶನ್ ಯೋಜನೆ ಆರಂಭಿಸಿದೆ.
  • ಸಚಿವಾಲಯ :ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ
  • ಪ್ರಾರಂಭ :2014-15
  • ಯೋಜನೆ: ಪ್ರವಾಸೋದ್ಯಮ ವರ್ತುಲ ಯೋಜನೆ
  • ವಿಭಿನ್ನ ವಿಷಯದ ಪ್ರವಾಸಿ ಸರ್ಕ್ಯೂಟ್‌ಗಳನ್ನು ಸಂಯೋಜಿಸುವ ಮೂಲಕ ಒಟ್ಟಾರೆ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಯೋಜನೆಯನ್ನು ಪ್ರಾರಂಭಿಸಲಾಗಿದೆ.

ಯೋಜನೆಯ ಉದ್ದೇಶಗಳು:

  • ಪ್ರವಾಸೋದ್ಯಮದ ಮೂಲಕ ಆರ್ಥಿಕ ಬೆಳವಣಿಗೆ. ಜೊತೆಗೆ ಉದ್ಯೋಗ ಸೃಷ್ಟಿ.
  • ಸಂಭಾವ್ಯ ಪ್ರವಾಸಿ ತಾಣಗಳ ಯೋಜಿತ ಮತ್ತು ಆದ್ಯತೆಯ ಅಭಿವೃದ್ಧಿ.
  • ಪ್ರವಾಸಿ ಕೇಂದ್ರಗಳ ಆಕರ್ಷಣೆಯನ್ನು ಹೆಚ್ಚಿಸುವುದು ಮತ್ತು ಮೂಲಸೌಕರ್ಯ ಅಭಿವೃದ್ಧಿ.
  • ಸಮುದಾಯ ಆಧಾರಿತ ಅಭಿವೃದ್ಧಿ. ಪ್ರವಾಸಿ ಕೇಂದ್ರಗಳ ಅಭಿವೃದ್ಧಿ ಮೂಲಕ ಬಡವರ ಆರ್ಥಿಕ ಅಭಿವೃದ್ಧಿ.
  • ಪ್ರವಾಸೋದ್ಯಮದ ಮಹತ್ವದ ಬಗ್ಗೆ ಸ್ಥಳೀಯ ಸಮುದಾಯದಲ್ಲಿ ಜಾಗೃತಿ ಮೂಡಿಸಲು ಮತ್ತು ಸ್ಥಳೀಯರ ಆರ್ಥಿಕ ಅಭಿವೃದ್ಧಿ ಮತ್ತು ಜೀವನಮಟ್ಟ ಸುಧಾರಣೆ.
  • ವಿಷಯಾಧಾರಿತ ಪ್ರವಾಸೋದ್ಯಮದ ಅಭಿವೃದ್ಧಿಯ ಮೂಲಕ ದೇಶದ ರಾಷ್ಟ್ರೀಯ ಸಾಂಸ್ಕೃತಿಕ ಪರಂಪರೆಯನ್ನು ಎತ್ತಿ ತೋರಿಸುವುದು.
  • ಪ್ರವಾಸಿಗರ ಸಂಖ್ಯೆಯನ್ನು ಹೆಚ್ಚಿಸಲು ಪ್ರವಾಸಿ ಕೇಂದ್ರಗಳಲ್ಲಿ ಸೇವಾ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವುದು.

ಆರ್ಥಿಕ ನೆರವು

  • ಸ್ವದೇಶ್ ದರ್ಶನ್ ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳ ಸಹಯೋಗದಲ್ಲಿ ಅನುಷ್ಠಾನ ಮಾಡಲಾಗುತ್ತಿದೆ. ಈ ಯೋಜನೆಯು ಶೇ.100 ರಷ್ಟು ಕೇಂದ್ರ ಪುರಸ್ಕೃತವಾಗಿದೆ.
  • ರಾಜ್ಯ ಸರ್ಕಾರವು ಇತರ ಯೋಜನೆಗಳೊಂದಿಗೆ ‘ಸಿಎಸ್‌ಆರ್’ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆಯ ಮೂಲಕವೂ ನಿಧಿಯನ್ನು ಸಂಗ್ರಹಿಸಬಹುದು.
  • ಯೋಜನೆಗೆ ಹಣಕಾಸು ಒದಗಿಸಲು ಸರ್ಕಾರಿ- ಖಾಸಗಿ ಪಾಲುದಾರಿಕೆ (ಪಿಪಿಪಿ) ಮಾದರಿಯಲ್ಲಿಯೂ ಹೂಡಿಕೆ ಮಾಡಬಹುದು.

ಪ್ರವಾಸಿ ಸರ್ಕ್ಯೂಟ್

  • ಕನಿಷ್ಠ ಮೂರು ಪ್ರಮುಖ ಪ್ರವಾಸಿ ಸ್ಥಳಗಳನ್ನು ಹೊಂದಿರುವ ಮಾರ್ಗಕ್ಕೆ ಪ್ರವಾಸಿ ಸರ್ಕ್ಯೂಟ್ ಎಂದು ವ್ಯಾಖ್ಯಾನಿಸಲಾಗಿದೆ. ಪ್ರವಾಸಿಗರು ಆರಾಮದಾಯಕ ಪ್ರಯಾಣ ಮತ್ತು ಪ್ರವಾಸಿ ಸ್ಥಳದ ಆಕರ್ಷಣೆಯನ್ನು ಆನಂದಿಸಬಹುದು. ಸರ್ಕ್ಯೂಟ್ ಒಂದು ರಾಜ್ಯಕ್ಕೆ ಸೀಮಿತವಾಗಿರಬಹುದು ಅಥವಾ ಹಲವಾರು ರಾಜ್ಯಗಳಿಗೆ ವಿಸ್ತರಿಸಬಹುದು.

ಕುಕ್ಕೆ ಸುಬ್ರಹ್ಮಣ್ಯ ದೇವಾಲಯ

  • ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಸುಬ್ರಹ್ಮಣ್ಯ ಗ್ರಾಮದಲ್ಲಿರುವ ಹಿಂದೂ ದೇವಾಲಯವಾಗಿದೆ.
  • ಈ ದೇವಾಲಯವು ಪಶ್ಚಿಮ ಘಟ್ಟಗಳ ಶ್ರೇಣಿಯಲ್ಲಿ ಕುಮಾರ ಧಾರಾ ನದಿ ದಂಡೆಯಲ್ಲಿದೆ. ನದಿಯ ಮೂಲವು ಕುಮಾರ ಪರ್ವತದಲ್ಲಿದೆ.
  • ಕುಕ್ಕೆ ಸುಬ್ರಹ್ಮಣ್ಯವು ನಾಗದೋಷಕ್ಕೆ ಸಂಬಂಧಿಸಿದ ಪೂಜೆಗಳಿಗೆ ಹೆಚ್ಚು ಹೆಸರುವಾಸಿಯಾಗಿದೆ. ಅವುಗಳಲ್ಲಿ ಮುಖ್ಯವಾಗಿ ಆಶ್ಲೇಷ ಬಲಿ ಪೂಜೆ ಮತ್ತು ಸರ್ಪ ಸಂಸ್ಕಾರ ಈ 2 ಪೂಜೆಯನ್ನು ವಿಶೇಷವಾಗಿ ನೆರವೇರಿಸಲಾಗುತ್ತದೆ.