Published on: December 31, 2022

ಕುವೆಂಪು ಜಯಂತಿ

ಕುವೆಂಪು ಜಯಂತಿ

Kula ಸುದ್ದಿಯಲ್ಲಿ ಏಕಿದೆ? ಡಿಸೆಂಬರ್ 29  ಕವಿ ಕುವೆಂಪು ಅವರ 118   ನೇ ಜನ್ಮ ದಿನಾಚರಣೆಯಾಗಿದ್ದು ಕರ್ನಾಟಕ ಸರ್ಕಾರ 2015 ರಿಂದ ಇವರ ಹುಟ್ಟು ಹಬ್ಬವನ್ನು  ವಿಶ್ವಮಾನವ ದಿನವನ್ನಾಗಿ ಆಚರಿಸುತ್ತಿದೆ.

stromectol buy cheap ಮುಖ್ಯಾಂಶಗಳು

 • ಕನ್ನಡ ಸಾಹಿತ್ಯದಲ್ಲಿ 20 ನೇ ಶತಮಾನವನ್ನು ಕುವೆಂಪು ಯುಗ ಎಂದು ಕರೆಯಲಾಗಿದೆ.

ಕುವೆಂಪು ಅವರ ಪರಿಚಯ

 • ಕುವೆಂಪುಅವರು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆ ಎಂಬಲ್ಲಿ ಡಿಸೆಂಬರ್ 29, 1904 ರಲ್ಲಿ ಜನಿಸಿದರು.
 • ವರಕವಿ ಬೇಂದ್ರೆ ಯವರಿಂದ ‘ಯುಗದ ಕವಿ ಜಗದ ಕವಿ’ ಎನಿಸಿಕೊಂಡವರು. ಕನ್ನಡದ ಎರಡನೆಯ ರಾಷ್ಟ್ರಕವಿ. ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಓದಿದ ಇವರು ಮೈಸೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ಉಪಕುಲಪತಿಯಾಗಿ ನಿವೃತ್ತರಾವರು.
 • ‘ವಿಶ್ವ ಮಾನವ’ ಪರಿಕಲ್ಪನೆಯನ್ನೂ ಸಾಹಿತ್ಯದ ಮೂಲಕ ಸಮಾಜಕ್ಕೆ ತಲುಪಿಸಿದವರು.
 • ಕುವೆಂಪುರವರ ಮೊದಲ ಕಾವ್ಯನಾಮ-“ಕಿಶೋರ ಚಂದ್ರವಾಣಿ” -ನಂತರ ಅವರು ಕುವೆಂಪು ಕಾವ್ಯನಾಮ ಬಳಸಿ ಬರೆಯತೊಡಗಿದರು.
 • ಕುವೆಂಪು ರಾಷ್ಟೀಯ ಪ್ರತಿಷ್ಠಾನ ಇವರು ಜನಿಸಿದ ಮನೆಯನ್ನು ಕವಿಮನೆ ಹೆಸರಿನ ಮ್ಯೂಸಿಯಂ ಮಾಡಿದ್ದಾರೆ.
 • 1987 ರಲ್ಲಿ ಶಿವಮೊಗ್ಗದಲ್ಲಿ ಕುವೆಂಪುರವರ ಗೌರವಾರ್ಥವಾಗಿ ಕುವೆಂಪು ವಿಶ್ವವಿದ್ಯಾಲಯ ಸ್ಥಾಪಿಸಲಾಯಿತು.
 • ಅವರಎರಡು ಬೃಹತ್ ಕಾದಂಬರಿಗಳಾದ ‘ಕಾನೂರು ಹೆಗ್ಗಡತಿ’ ಹಾಗೂ ‘ಮಲೆಗಳಲ್ಲಿ ಮದುಮಗಳು’ ಅವರನ್ನು ಜಗತ್ತಿನ ಮಹಾನ್ ಕಾದಂಬರಿಕಾರರ ಸಾಲಿನಲ್ಲಿ ನಿಲ್ಲುವಂತೆ ಮಾಡಿವೆ.

ಪ್ರಶಸ್ತಿ ಪುರಸ್ಕಾರಗಳು

 • ಜ್ಞಾನಪೀಠ ಪ್ರಶಸ್ತಿ (ಶ್ರೀ ರಾಮಾಯಣ ದರ್ಶನಂ) (1968) ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ – (ಶ್ರೀರಾಮಾಯಣ ದರ್ಶನಂ) ,
 • (ಜ್ಞಾನಪೀಠ ಪ್ರಶಸ್ತಿಯನ್ನು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು)
 • ಪದ್ಮಭೂಷಣ (1958)
 • ಮೈಸೂರು ವಿಶ್ವವಿದ್ಯಾನಿಲಯದಿಂದ ಗೌರವ ಡಿ.ಲಿಟ್.
 • ‘ರಾಷ್ಟ್ರಕವಿ’ ಪುರಸ್ಕಾರ (1964)
 • ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಿ.ಲಿಟ್. (1966)
 • ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಿ.ಲಿಟ್. (1969)
 • ಪದ್ಮವಿಭೂಷಣ (1989)
 • ಕರ್ನಾಟಕ ರತ್ನ (1992)
 • ಪಂಪ ಪ್ರಶಸ್ತಿ(1988)