Published on: September 19, 2022
ಕೆಂಪೇಗೌಡರ ಪ್ರತಿಮೆ: ಉದ್ಘಾಟನಾ ಅಭಿಯಾನ
ಕೆಂಪೇಗೌಡರ ಪ್ರತಿಮೆ: ಉದ್ಘಾಟನಾ ಅಭಿಯಾನ

Jamestown ಸುದ್ದಿಯಲ್ಲಿ ಏಕಿದೆ?
http://dnasab.net/types/video-2/ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯ ಉದ್ಘಾಟನೆಗೆ ಪೂರ್ವಭಾವಿಯಾಗಿ ರಾಜ್ಯಾದ್ಯಂತದಿಂದ ಪವಿತ್ರ ಮೃತ್ತಿಕೆ (ಮಣ್ಣು) ಮತ್ತು ಜಲವನ್ನು ಸಂಗ್ರಹಿಸುವ ವಿಶಿಷ್ಟ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.
ಮುಖ್ಯಾಂಶಗಳು
- ರಾಜ್ಯ ಸರಕಾರವು ವಿಧಾನಸೌಧದ ಆವರಣದಲ್ಲೂ ರೂ. 50 ಕೋಟಿ ವೆಚ್ಚದಲ್ಲಿ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಲಾಗುತ್ತಿದೆ. ಜೊತೆಗೆ ಲಾಲ್ ಬಾಗ್ ಆವರಣದಲ್ಲೂ ನಾಡಪ್ರಭುವಿನ ಪ್ರತಿಮೆ ಸ್ಥಾಪಿಸಲಾಗುವುದು.
- ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ ಮತ್ತು ಥೀಮ್ ಪಾರ್ಕ್ ಸ್ಥಾಪನೆಗೆ ಸರಕಾರವು ₹84 ಕೋಟಿ ವಿನಿಯೋಗಿಸುತ್ತಿದೆ. ಈ ಪ್ರತಿಮೆಗೆ ಕೆಂಪೇಗೌಡರ ಆಶಯಗಳನ್ನು ಸಂಕೇತಿಸುವಂತೆ ‘ಪ್ರಗತಿ ಪ್ರತಿಮೆ’ (Statue of Prosperity) ಎಂದು ನಾಮಕರಣ ಮಾಡಲಾಗುತ್ತಿದೆ.
- ಅಭಿಯಾನದ ಅಂಗವಾಗಿ 31 ಜಿಲ್ಲೆಗಳಿಗೂ ತಲಾ ಒಂದು ಎಲ್ಇಡಿ ಅಲಂಕೃತ ವಾಹನ ಹೋಗಲಿದೆ. ಇದರಲ್ಲಿ ಪುಣ್ಯಪುರುಷರ ಸಂದೇಶಗಳು ಇರಲಿದ್ದು, ಕೆಂಪೇಗೌಡರನ್ನು ಕುರಿತ ಸಾಕ್ಷ್ಯಚಿತ್ರ ಪ್ರಸಾರ ಆಗಲಿದೆ.
- ಪಾರಂಪರಿಕ ತಾಣಗಳ ಅಭಿವೃದ್ಧಿ ಪ್ರಾಧಿಕಾರವು ಕೆಂಪೇಗೌಡರ ಜೀವನಕ್ಕೆ ಸಂಬಂಧಿಸಿದ 46 ಸ್ಥಳಗಳಿಗೆ ಕಾಯಕಲ್ಪ ನೀಡುತ್ತಿದೆ. ಮಾಗಡಿ ತಾಲ್ಲೂಕಿನ ಕೆಂಪಾಪುರವನ್ನು ವೀರಸಮಾಧಿ ತಾಣವನ್ನಾಗಿ ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ
ಕೆಂಪೇಗೌಡರ ಅಧ್ಯಯನ ಕೇಂದ್ರ:
- ಐವತ್ತು ಕೋಟಿ ವೆಚ್ಚದಲ್ಲಿ ಕೆಂಪೇಗೌಡರ ಅಧ್ಯಯನ ಕೇಂದ್ರ ಬೆಂಗಳೂರು ವಿವಿ ಆವರಣದಲ್ಲಿ ತಲೆಎತ್ತಲಿದೆ. ಇದು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯ ಮುಂಭಾಗದಲ್ಲಿ ಮೈದಾಳಲಿದೆ.
- ಇದರಲ್ಲಿ ಗುಣಮಟ್ಟದ ಆ್ಯಂಪಿ ಥಿಯೇಟರ್, ಪಾತ್ ವೇ, ಸುರಂಗ ನಿರ್ಮಾಣ, ಎವಿ ಎಕ್ಸಿಬಿಷನ್ ವ್ಯವಸ್ಥೆ, ತ್ರೀ-ಡಿ ಪ್ರೊಜೆಕ್ಷನ್, ಚಕ್ರಾಕಾರದ ಕಾರಂಜಿ, ಹೂದೋಟ, ವಿಐಪಿ ಲಾಂಜ್, ಕಿಯೋಸ್ಕ್, ವಿಶ್ರಾಂತಿ ಕೊಠಡಿಗಳು, ಅತ್ಯುತ್ತಮ ಹಾಸುಗಲ್ಲುಗಳು, ಪೆವಿಲಿಯನ್ ಗಳು, ಕಾಂಕ್ರೀಟ್ ತಡೆಗೋಡೆ ಇರಲಿವೆ
ಪರಿಕಲ್ಪನೆ:
- ವಿಶ್ವದ ಎಲ್ಲೆಡೆಯಿಂದ ಮತ್ತು ಭಾರತದ ನಾನಾ ಭಾಗಗಳಿಂದ ಬರುವವರಿಗೆ ಬೆಂಗಳೂರಿನಲ್ಲಿ ಇಳಿದ ಕೂಡಲೇ ಇದು ವಿಶಿಷ್ಟ ಅನುಭವ ಕೊಡುವಂತಹ ವಿಶಿಷ್ಟ ಪರಿಕಲ್ಪನೆ ಆಗಿದೆ.
ಉದ್ದೇಶ
ಅಭಿಯಾನವು ರಾಜ್ಯದ ಎಲ್ಲರನ್ನೂ ಒಳಗೊಳ್ಳಲಿದ್ದು, ನವ ಕರ್ನಾಟಕ ನಿರ್ಮಾಣದ ದೊಡ್ಡ ಹೆಜ್ಜೆಯಾಗಿದೆ. ಬೆಂಗಳೂರನ್ನು ಐಟಿ-ಬಿಟಿ ನಗರದ ಜತೆಗೆ ಪರಂಪರೆಯೊಂದಿಗೆ ಬೆಸೆಯಬೇಕಾಗಿದೆ. ಈ ಥೀಮ್ ಪಾರ್ಕ್ ಮತ್ತು ಪ್ರತಿಮೆ ಸ್ಥಾಪನೆಯು ಅಂತಹ ಒಂದು ಉಪಕ್ರಮವಾಗಿದೆ.