Published on: June 10, 2023
ಗೃಹಲಕ್ಷ್ಮಿ ಯೋಜನೆ
ಗೃಹಲಕ್ಷ್ಮಿ ಯೋಜನೆ
ಸುದ್ದಿಯಲ್ಲಿ ಏಕಿದೆ? ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿ 2000 ರೂಪಾಯಿ ಸಹಾಯಧನ ಪಡೆಯಲು ರಾಜ್ಯ ಸರ್ಕಾರ ಹಲವು ಷರತ್ತುಗಳನ್ನು ವಿಧಿಸಿದೆ. ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕವಾಗಲಿ ಅಥವಾ ಭೌತಿಕವಾಗಿಯಾಗಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಪ್ರಮುಖ ಷರತ್ತುಗಳೇನು?
- ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
2. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಬ್ಬ ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಿದೆ.
3. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್ ಖಾತೆ ಮತ್ತು ಆಧಾರ ಕಾರ್ಡ್ ಗಳನ್ನು ಜೋಡಣೆ ಮಾಡಬೇಕು. - ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ಪಾವತಿದಾರರಾಗಿದ್ದಲ್ಲಿ ಸೌಲಭ್ಯ ಸಿಗುವುದಿಲ್ಲ.
5. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿಯು ಜಿಎಸ್ಟಿ ರಿಟರ್ನ್ ಸಲ್ಲಿಸುವವರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗಿರುವುದಿಲ್ಲ.