Published on: June 6, 2022
ಗ್ರಾಮ ಒನ್ ಕೇಂದ್ರ
ಗ್ರಾಮ ಒನ್ ಕೇಂದ್ರ
ಸುದ್ಧಿಯಲ್ಲಿ ಏಕಿದೆ?
ಮುಂಬರುವ ದಿನಗಳಲ್ಲಿ ಗ್ರಾಮ ಒನ್ ಕೇಂದ್ರವನ್ನು ರಾಜ್ಯಾದ್ಯಂತ ಪ್ರಾರಂಭಿಸಲು ಸೂಕ್ತ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಗ್ರಾಮ ಒನ್ ಬಗ್ಗೆ
- ಗ್ರಾಮ-ಒನ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸೇವಸಿಂಧು ಯೋಜನೆಯಡಿಯಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ಅಂದರೆ ಸುಮಾರು 750 ಕ್ಕೂ ಹೆಚ್ಚು ನಾಗರೀಕ ಸೇವೆಗಳನ್ನು ಪಡೆಯಲು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಅದೇ ರೀತಿ ಸಕಾಲ, ಮಾಹಿತಿ ಹಕ್ಕು ಅಧಿನಿಯಮ , ಬ್ಯಾಂಕಿಂಗ್ ಸೇವೆಗಳು ಹಾಗೂ ಸಾರ್ವಜನಿಕರ ಕುಂದು-ಕೊರತೆ ನಿವಾರಣೆ ಕೋರಿ ಅರ್ಜಿಗಳನ್ನು ಸಹ ಸ್ವೀಕರಿಸಲಾಗುವುದು
- ವಾರದ ಎಲ್ಲಾ ಏಳು ದಿನಗಳಲ್ಲಿ ಗ್ರಾಮ ಒನ್ ಕೇಂದ್ರಗಳು ಬೆಳಿಗ್ಗೆ 8 ರಿಂದ ಸಂಜೆ 8 ರವರೆಗೆ ಕಾರ್ಯನಿರ್ವಹಿಸಲಿವೆ.
ಗ್ರಾಮ ಒನ್ ಕೇಂದ್ರಗಳ ಪ್ರಯೋಜನಗಳು ಹೀಗಿವೆ:
- ಸರ್ಕಾರಿ ಸೇವೆಗಳನ್ನು ಪಡೆಯಲು ನಾಗರಿಕರು ಜಿಲ್ಲೆ,ತಾಲ್ಲೂಕು ಮತ್ತು ಹೋಬಳಿ ಕಚೇರಿಗಳಿಗೆ ಭೇಟಿ ನೀಡುವ ಅಗತ್ಯವಿಲ್ಲ.
- ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಕೇಂದ್ರದಲ್ಲಿ ಪಡೆಯಬಹುದಾಗಿದೆ .
- ಗ್ರಾಮ ಒನ್ ಕೇಂದ್ರಗಳ ಮೂಲಕ ಸೇವೆಗಳನ್ನು ಪಡೆಯುವ ಮೂಲಕ ನಾಗರಿಕರು ಸಮಯ ಮತ್ತು ಹಣವನ್ನು ಉಳಿಸಬಹುದು.
-
ಮಧ್ಯವರ್ತಿಗಳಿಂದ ಯಾವುದೇ ಅಪಾಯವಿಲ್ಲ.