Published on: March 11, 2023

ಚುಟುಕು ಸಮಾಚಾರ – 11 ಮಾರ್ಚ್ 2023

ಚುಟುಕು ಸಮಾಚಾರ – 11 ಮಾರ್ಚ್ 2023

  • can i buy Pregabalin over the counter in spain ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಸಂಬಂಧ ರಾಜ್ಯ ಸರ್ಕಾರ ಪರಿಷ್ಕೃತ ಕಾರ್ಯನೀತಿ ಪ್ರಕಟಿಸಿದ್ದು, ಆ ಮೂಲಕ ಈ ಯೋಜನೆಯಡಿ ಸರ್ಕಾರದಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ನೌಕರರು (ಉದಾ: ಪತಿ, ಪತ್ನಿ, ತಂದೆ, ತಾಯಿ ಮತ್ತು ಮಕ್ಕಳು) ನಗದು ರಹಿತವಾಗಿ ಆರೋಗ್ಯ ಸೇವಾ ಸೌಲಭ್ಯವನ್ನು ಪಡೆಯಬಹುದಾಗಿದೆ.
    • 2021ರ ಜುಲೈ 22 ರಂದು Khārān ಕರ್ನಾಟಕ ರಾಜ್ಯ ಸಚಿವ ಸಮಿತಿ ಕರ್ನಾಟಕ ಆರೋಗ್ಯ ಸಂಜೀವನಿ ಯೋಜನೆ (ಕೆಎಎಸ್ಎಸ್) ಅನುಷ್ಠಾನಕ್ಕೆ ಅನುಮೋದನೆ ನೀಡಿತು. ಈ ಯೋಜನೆಯಡಿ ಸರ್ಕಾರಿ ನೌಕರರು ಮತ್ತು ಅವರ ಕುಟುಂಬ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ಒದಗಿಸಲು ನಿರ್ಧರಿಸಿದೆ.
  • ಬೆಂಗಳೂರಿನಲ್ಲಿ ಡ್ರ್ಯಾಗನ್ ಫ್ರೂಟ್ ಸಂಶೋಧನೆ ಹಾಗೂ ಉತ್ಕೃಷ್ಟತಾ ಕೇಂದ್ರ ಸ್ಥಾಪಿಸುವುದಾಗಿ ಕೇಂದ್ರ ಕೃಷಿ ಸಚಿವಾಲಯ ಪ್ರಕಟಿಸಿದೆ. ಬೆಂಗಳೂರಿನ ಹಿರೇಹಳ್ಳಿಯ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಪ್ರಾಯೋಗಿಕ ಕೇಂದ್ರದಲ್ಲಿ ಸ್ಥಾಪನೆಯಾಗಲಿದೆ.
    • ಕೇಂದ್ರ ಸರ್ಕಾರದ ಪ್ರಾಯೋಜಿತ ಇಂಟೆಗ್ರೇಟೆಡ್ ಡೆವಲಪ್ಮೆಂಟ್ ಆಫ್ ಹಾರ್ಟಿಕಲ್ಚರ್ ಯೋಜನೆಯಡಿ ಈ ಕೇಂದ್ರವನ್ನು ಪ್ರಾರಂಭಿಸಲಾಗುತ್ತದೆ.
  • ದೇಶದ ಭೂಕುಸಿತ ಅಪಾಯದ ಪ್ರದೇಶಗಳ ಬಗ್ಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ ) ಮತ್ತೊಂದು ವರದಿ ಬಿಡುಗಡೆ ಮಾಡಿದೆ. ದೇಶದಲ್ಲಿರುವ 17 ರಾಜ್ಯಗಳ  ಭೂಕುಸಿತದ 147 ಸೂಕ್ಷ್ಮ ಜಿಲ್ಲೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇಸ್ರೋದ ರಾಷ್ಟ್ರೀಯ ದೂರಸಂವೇದಿ ಕೇಂದ್ರ (National Remote Sensing Centre – NRSC)ವು ಭೂಕುಸಿತದ ನಕ್ಷೆಗಳ ಅಟ್ಲಾಸ್ ಬಿಡುಗಡೆ ಮಾಡಿದೆ. ಇಸ್ರೋ ಸಮೀಕ್ಷೆಯ ಪ್ರಕಾರ, ರುದ್ರಪ್ರಯಾಗ ಮತ್ತು ತೆಹ್ರಿ ಜಿಲ್ಲೆಗಳು ಉತ್ತರಾಖಂಡದಲ್ಲಿ ಮಾತ್ರವಲ್ಲದೇ ಇಡೀ ಭಾರತದಲ್ಲೇ ಭೂಕುಸಿತದ ಅಪಾಯದಲ್ಲಿವೆ. ಕರ್ನಾಟಕದ ಎಂಟು ಜಿಲ್ಲೆಗಳು ಕೂಡ ಭೂಕುಸಿತ ಭೀತಿ ಪ್ರದೇಶಗಳನ್ನು ಒಳಗೊಂಡಿದೆ. ಕೊಡಗು 12ನೇ ಸ್ಥಾನದಲ್ಲಿದೆ.
  • ಸೆಮಿಕಂಡಕ್ಟರ್ ಪೂರೈಕೆ ವ್ಯವಸ್ಥೆಯನ್ನು ಸ್ಥಾಪಿಸಲು ಭಾರತ ಮತ್ತು ಅಮೆರಿಕ ಒಪ್ಪಂದಕ್ಕೆ ಸಹಿ ಮಾಡಿವೆ.
  • ಮಹಿಳಾ ವಿಜ್ಞಾನಿಗಳು ಕೈಗೊಳ್ಳುವ ಸಂಶೋಧನೆಗೆ ಹಣಕಾಸು ನೆರವು ಒದಗಿಸುವ ವಿಶೇಷ ವ್ಯವಸ್ಥೆಯನ್ನು (ಸಿಎಸ್‌ಐಆರ್‌–ಆಸ್ಪೈರ್) ಕೇಂದ್ರೀಯ ವೈಜ್ಞಾನಿಕ ಮತ್ತು ಔದ್ಯಮಿಕ ಸಂಶೋಧನಾ ಮಂಡಳಿ (ಸಿಎಸ್‌ಐಆರ್‌) ಘೋಷಿಸಿದೆ. ನೆರವಿನ ಮೊತ್ತವು ರೂ. 25 ಲಕ್ಷದಿಂದ ರೂ. 30 ಲಕ್ಷದ ವರೆಗೆ ಇರಲಿದೆ’. ಜೀವವಿಜ್ಞಾನ, ರಸಾಯನ ವಿಜ್ಞಾನ, ಭೌತವಿಜ್ಞಾನ, ಎಂಜಿನಿಯರಿಂಗ್ ಹಾಗೂ ಅಂತರ್ ಶಿಸ್ತೀಯ ವಿಜ್ಞಾನ ಕ್ಷೇತ್ರಗಳಲ್ಲಿ ಸಂಶೋಧನೆ ಕೈಗೊಳ್ಳುವ ಮಹಿಳಾ ವಿಜ್ಞಾನಿಗಳು ಈ ವ್ಯವಸ್ಥೆಯಡಿ ಹಣಕಾಸು ನೆರವು ಪಡೆಯಲು ಅರ್ಹರಾಗಿದ್ದಾರೆ.