Published on: January 13, 2023

ಚುಟುಕು ಸಮಾಚಾರ – 13 ಜನವರಿ 2023

ಚುಟುಕು ಸಮಾಚಾರ – 13 ಜನವರಿ 2023

  • ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವದ ಅತಿ ಉದ್ದದ Užice ನದಿ ವಿಹಾರ ಬೋಟ್ ಎಂವಿ Suriname ಗಂಗಾ ವಿಲಾಸ್ಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಲಿದ್ದಾರೆ. ಇದೇ ವೇಳೆ, ವಾರಣಾಸಿಯ ಗಂಗಾ ನದಿಯ ದಡದಲ್ಲಿ ‘ಟೆಂಟ್ ಸಿಟಿ’ ಕೂಡ ಉದ್ಘಾಟಿಸುವರು.
  • ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ ನಂತರ ಮೊದಲ ಬಾರಿಗೆ ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ದೂರದ ಮತ್ತು ಗುಡ್ಡಗಾಡು ಟೆಥಾನ್ ಹಳ್ಳಿಯ ಗ್ರಾಮಕ್ಕೆ ವಿದ್ಯುತ್ ತಲುಪಿದೆ. ಪ್ರಧಾನಮಂತ್ರಿ ಅಭಿವೃದ್ಧಿ ಕಾರ್ಯಕ್ರಮ ‘ಹರ್ ಘರ್ ಬಿಜ್ಲಿ ಯೋಜನೆ’ ಅಡಿಯಲ್ಲಿ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ.
  • ಸೇತುಸಮುದ್ರಂ ಹಡಗು ಕಾಲುವೆ ಯೋಜನೆಯನ್ನು ವಿಳಂಬವಿಲ್ಲದೆ ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸುವ ನಿರ್ಣಯವನ್ನು ತಮಿಳುನಾಡು ವಿಧಾನಸಭೆ ಸರ್ವಾನುಮತದಿಂದ ಅಂಗೀಕರಿಸಿದೆ. ಈ ಕಾಲುವೆಯು ಮುನ್ನಾರ್ ಕೊಲ್ಲಿಯಿಂದ ಪಾಲ್ಕ್ ಜಲಸಂಧಿಯವರೆಗೆ ಸಂಚಾರಕ್ಕೆ ಅನುವು ಮಾಡಿಕೊಡುತ್ತದೆ. ಆದ್ದರಿಂದ ಹಡಗುಗಳು ಶ್ರೀಲಂಕಾವನ್ನು ಸುತ್ತುವ ಅಗತ್ಯವಿಲ್ಲ, ಪ್ರಯಾಣದ ಸಮಯ ಮತ್ತು ದೂರವನ್ನು ಕಡಿಮೆ ಮಾಡುತ್ತದೆ.
  • ಕೇಂದ್ರದ ಮಾಜಿ ಸಚಿವ ಮತ್ತು ಹಿರಿಯ ಡಿಎಂಕೆ ನಾಯಕ ಟಿ ಆರ್ ಬಾಲು ಅವರ ಆತ್ಮಚರಿತ್ರೆ ‘ಪಥೈ ಮಾರ ಪಯನಂ’ ಬಿಡುಗಡೆ ಮಾಡಲಾಯಿತು.
  • ರಜೆಯಲ್ಲಿರುವ ಸಹೋದ್ಯೋಗಿಗೆ ಕರೆ ಮಾಡಿ ತೊಂದರೆ ನೀಡಿದಲ್ಲಿ ಒಂದು ಲಕ್ಷ ರೂಪಾಯಿ ದಂಡ ವಿಧಿಸುವ ಹೊಸ ನಿಯಮವೊಂದನ್ನು ಮುಂಬೈ ಮೂಲದ ಆನ್ಲೈ ನ್ ಫ್ಯಾಂಟಸಿ ಗೇಮ್ ಸಂಸ್ಥೆ ‘ಡ್ರೀಮ್ 11‘ಕಂಪನಿ ಈ ನಿಯಮವನ್ನು ಜಾರಿಗೆ ತಂದಿದೆ. ‘ವರ್ಷದಲ್ಲಿ ಒಂದು ಬಾರಿ ಒಂದು ವಾರಗಳ ಕಾಲ ಉದ್ಯೋ ಗಿಗಳಿಗೆ ರಜೆ ನೀಡಲಾಗುವುದು. ನಮ್ಮ ಉದ್ಯಮ ಯಾರ ಮೇಲೆಯೂ ಅವಲಂಬಿತವಾಗಿಲ್ಲ ಎನ್ನುವುದನ್ನು ತಿಳಿದುಕೊಳ್ಳಲು ಇದು ಸಹಾಯವಾಗುತ್ತದೆ‘ಎಂದು ಕಂಪನಿಯು ಹೇಳಿದೆ.
  • ಉಜ್ಬೇಕಿಸ್ತಾನದಲ್ಲಿರುವ ಮಕ್ಕಳಿಗೆ ಭಾರತದ ಔಷಧೀಯ ಸಂಸ್ಥೆ ಮರಿಯನ್ ಬಯೋಟೆಕ್ ತಯಾರಿಸಿರುವ ಎರಡು ಕೆಮ್ಮಿನ ಸಿರಪ್ ಗಳಾದ ಅಬ್ರೊನಾಲ್ ಮತ್ತು ಡಾಕ್-1 ಮ್ಯಾಕ್ಸ್ ಬಳಕೆ ಮಾಡಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯು ಎಚ್ಒ) ಸೂಚನೆ ನೀಡಿದೆ. ಕಾರಣ : ಇತ್ತೀಚೆಗೆ ಮರಿಯನ್ ಬಯೋಟೆಕ್ ತಯಾರಿಸಿದ ಕೆಮ್ಮಿನ ಸಿರಪ್ ಸೇವನೆಯಿಂದ ಉಜ್ಬೇಕಿಸ್ತಾನದಲ್ಲಿ 18 ಮಕ್ಕಳು ಮೃತಪಟ್ಟಿದ್ದರು. ಉಜ್ಬೇ ಕಿಸ್ತಾನದ ಆರೋಗ್ಯ ಸಚಿವಾಲಯದ ಪರೀಶೀಲನೆಯಲ್ಲಿ ಕೆಮ್ಮಿನ ಸಿರಪ್ಗಳಲ್ಲಿ ಎಥಿಲೀನ್ ಗ್ಲೈ ಕೋಲ್ನ ವಿಷಕಾರಿ ರಾಸಾಯನಿಕ ಪತ್ತೆಯಾಗಿತ್ತು.
  • ಭಾರತೀಯ ಮೂಲದ ಮನ್ಪ್ರೀ ತ್ ಮೋನಿಕಾ ಸಿಂಗ್ ಅವರು ಹ್ಯಾರಿಸ್ ನ್ಯಾಯಾಲಯದ ನ್ಯಾಯಾಧೀಶೆಯಾಗಿ ಪ್ರಮಾಣವಚನ ಸ್ವೀ ಕರಿಸಿದರು. ಅಮೆರಿಕದಲ್ಲಿ ಸಿಖ್ ಸಮುದಾಯಕ್ಕೆ ಸೇರಿದ ಮೊದಲ ನ್ಯಾಯಾಧೀಶೆ ಎಂಬ ಖ್ಯಾತಿಗೆ ಮನ್ಪ್ರೀತ್ ಪಾತ್ರರಾಗಿದ್ದಾರೆ.
  • ಸರ್ಬಿಯಾದ ನೊವಾಕ್ ಜೊಕೊವಿಚ್‌ ಅವರು ಅಮೇರಿಕಾದ ಸೆಬಾಸ್ಟಿಯನ್ ಕೊರ್ಬಾ ಅವರನ್ನು ಸೋಲಿಸಿ ಅಡಿಲೇಡ್‌ ಇಂಟರ್‌ನ್ಯಾಷನಲ್‌ ಟೆನಿಸ್‌ ಟೂರ್ನಿಯಲ್ಲಿ ಚಾಂಪಿಯನ್ ಆದರು.