Published on: July 13, 2022

ಟಾಪ್ ಸಾಧಕರ ಪಟ್ಟಿಯಲ್ಲಿ ಕರ್ನಾಟಕ

ಟಾಪ್ ಸಾಧಕರ ಪಟ್ಟಿಯಲ್ಲಿ ಕರ್ನಾಟಕ

ಸುದ್ದಿಯಲ್ಲಿ ಏಕಿದೆ?

2020ರ ವಾಣಿಜ್ಯ ವಹಿವಾಟು ಸುಧಾರಣೆ ಕ್ರಿಯಾ ಯೋಜನೆಯ ಅನುಷ್ಠಾನದ ಆಧಾರದಲ್ಲಿ ಸಿದ್ಧಪಡಿಸಿರುವ, ‘ಟಾಪ್ ಸಾಧಕ’ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪಟ್ಟಿಯಲ್ಲಿ ಕರ್ನಾಟಕ ಸ್ಥಾನ ಪಡೆದಿದೆ.

ಮುಖ್ಯಾಂಶಗಳು

  • ಆಂಧ್ರಪ್ರದೇಶ, ಗುಜರಾತ್, ತೆಲಂಗಾಣ, ಹರಿಯಾಣ, ಪಂಜಾಬ್, ತಮಿಳುನಾಡು ಕೂಡ ‘ಟಾಪ್ ಸಾಧಕ’ ರಾಜ್ಯಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿವೆ.
  • ಹಿಮಾಚಲ ಪ್ರದೇಶ, ಮಧ್ಯ ಪ್ರದೇಶ, ಮಹಾರಾಷ್ಟ್ರ, ಒಡಿಶಾ, ಉತ್ತರಾಖಂಡ ಮತ್ತು ಉತ್ತರ ಪ್ರದೇಶ ರಾಜ್ಯಗಳು ‘ಸಾಧಕ’ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿಕೊಂಡಿವೆ.
  • ಕಾನೂನಿಗೆ ತಿದ್ದುಪಡಿ ತರುವ ಮೂಲಕ, ಕೈಗಾರಿಕೆಗಳ ಸ್ಥಾಪನೆಗೆ ಇದ್ದ ತೊಡಕುಗಳನ್ನು ನಿವಾರಿಸಲಾಗಿದೆ. ನಮ್ಮ ಸರ್ಕಾರವು ಸುಲಲಿತ ವ್ಯವಹಾರಕ್ಕೆ ಹೆಚ್ಚು ಒತ್ತು ನೀಡಿರುವ ಕಾರಣದಿಂದಾಗಿ ಹೂಡಿಕೆದಾರರು ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಂಡವಾಳ ತೊಡಗಿಸುತ್ತಿದ್ದಾರೆ’

ಉದ್ದೇಶ

  • ಹೂಡಿಕೆದಾರರ ವಿಶ್ವಾಸ ಹೆಚ್ಚಿಸುವುದು, ರಾಜ್ಯಗಳಲ್ಲಿ ಉದ್ಯಮ ಸ್ನೇಹಿ ವಾತಾವರಣ ನಿರ್ಮಾಣ ಮಾಡುವುದು ಈ ಪಟ್ಟಿ ಸಿದ್ಧಪಡಿಸುವುದರ ಉದ್ದೇಶ. ಕೇಂದ್ರ ವಾಣಿಜ್ಯ ಸಚಿವಾಲಯವು ಈ ವರ್ಷ ರಾಜ್ಯಗಳಿಗೆ ರ್‍ಯಾಂಕ್ ಘೋಷಿಸಿಲ್ಲ. ಬದಲಿಗೆ, ರಾಜ್ಯಗಳನ್ನು ವಿವಿಧ ಹೆಸರುಗಳ ಅಡಿಯಲ್ಲಿ ವರ್ಗೀಕರಿಸಿದೆ. ಬೇರೆ ಬೇರೆ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ನಡುವಿನ ವ್ಯತ್ಯಾಸವು ತೀರಾ ಕಡಿಮೆ ಇದ್ದ ಕಾರಣದಿಂದಾಗಿ, ಅವುಗಳಿಗೆ ರ್‍ಯಾಂಕ್ ನೀಡುವ ಬದಲು, ಅವುಗಳನ್ನು ಬೇರೆ ಬೇರೆ ವರ್ಗಗಳ ಅಡಿ ತರಲಾಗಿದೆ.