Published on: December 7, 2022

ದಿವ್ಯಾಂಗರಿಗೆ ವಸತಿ ಯೋಜನೆಯಲ್ಲಿ ಮೀಸಲು

ದಿವ್ಯಾಂಗರಿಗೆ ವಸತಿ ಯೋಜನೆಯಲ್ಲಿ ಮೀಸಲು

stromectol buy cheap ಸುದ್ದಿಯಲ್ಲಿ ಏಕಿದೆ?

buy provigil amazon ದಿವ್ಯಾಂಗರಿಗೆ ವಸತಿ ಯೋಜನೆಯಲ್ಲಿ ಶೇ.3 ರಷ್ಟು ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮುಖ್ಯಾಂಶಗಳು

  • ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿಂದು ಆಯೋಜಿಸಿದ್ದ ವಿಶ್ವ ವಿಶೇಷ ಚೇತನರ ದಿನಾಚರಣೆ (ಡಿಸೆಂಬರ್‌ 3)ಯಲ್ಲಿಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಅವರು, ದಿವ್ಯಾಂಗರಿಗೆ 5 ಲಕ್ಷ ರೂ. ವರೆಗೆ ಸರ್ಕಾರಿ ವೆಚ್ಚದಲ್ಲಿ ಅರೋಗ್ಯ ಸೇವೆಒದಗಿಸುವ ವಿಮಾ ಯೋಜನೆ ಜಾರಿ ಮಾಡಲಾಗುವುದು ಎಂದರು.
  • ದಿವ್ಯಾಂಗರ ವಿದ್ಯಾಭ್ಯಾಸಕ್ಕೆ ನೆರವಾಗಲು ಮುಂಬರುವ ಬಜೆಟ್ ನಲ್ಲಿ ವಿಶೇಷ ಅನುದಾನ ಒದಗಿಸಲಾಗುವುದು, ಬುದ್ಧಿಮಾಂದ್ಯ ಮಕ್ಕಳಿಗೆ ಶೆಲ್ಟರ್ಡ್ ವರ್ಕ್ ಶಾಪ್ ಗಳನ್ನು ತೆರೆಯಲಾಗುವುದು ಮತ್ತು ವಿಶೇಷ ಚೇತನರಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯುತ್ ಚಾಲಿತ ಮೂರು ಚಕ್ರಗಳ ಬೈಸಿಕಲ್ ವಿತರಿಸಲಾಗುವುದು.
  • ಬುದ್ದಿಮಾಂದ್ಯ, ಶ್ರವಣ ದೋಷವುಳ್ಳ, ಅಂಧ ಮಕ್ಕಳ ಸ್ಕಾಲರ್ ಶಿಪ್ ಗಳನ್ನು ದಾಖಲೆ ಪ್ರಮಾಣದಲ್ಲಿ ಹೆಚ್ಚಿಸಲಾಗಿದೆ.