Published on: November 24, 2022

‘ನಾಡದೇವತೆ’

‘ನಾಡದೇವತೆ’

 ಸುದ್ದಿಯಲ್ಲಿ ಏಕಿದೆ?

ಚಿತ್ರ ಕಲಾವಿದ ಕೆ. ಸೋಮಶೇಖರ್‌ ಸಿದ್ಧಪಡಿಸಿರುವ ರಾಜ್ಯದ ಸಾಂಪ್ರದಾಯಿಕ ಕಲೆ ಹಾಗೂ ನಾಡಗೀತೆಯಲ್ಲಿರುವ ಕೆಲವು ಅಂಶಗಳನ್ನು ಸಾಂಕೇತಿಕವಾಗಿ ಬಿಂಬಿಸುವ ‘ನಾಡದೇವತೆ’ಯ ಚಿತ್ರವನ್ನು ಅಧಿಕೃತವೆಂದು ಪರಿಗಣಿಸುವಂತೆ ಲಲಿತ ಕಲಾ ಅಕಾಡೆಮಿ ಮಾಜಿ ಅಧ್ಯಕ್ಷ ಡಿ. ಮಹೇಂದ್ರ ಅಧ್ಯಕ್ಷತೆಯ ಸಮಿತಿಯು ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಮುಖ್ಯಾಂಶಗಳು

  • ಬೆಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಸ್ಥಾಪಿಸಲಾಗುವ ನಾಡದೇವತೆಯ ಪ್ರತಿಮೆಯು ಇದೇ ಚಿತ್ರದಂತೆ ಇರಲಿದೆ.
  • ‘ಕಾರ್ಯಕ್ರಮಗಳಲ್ಲಿ ರಾಜ್ಯದ ನಾಡದೇವತೆಯ ಬೇರೆ ಬೇರೆ ಚಿತ್ರಗಳನ್ನು ಸದ್ಯ ಬಳಸಲಾಗುತ್ತಿದೆ. ಸರ್ಕಾರದ ಸೂಚನೆಯಂತೆ ಅಧಿಕೃತವಾದ ಚಿತ್ರವನ್ನು ಸರ್ಕಾರ ಒಪ್ಪಿಗೆ ನೀಡಿದ ಬಳಿಕ ಜಾರಿಗೆ ಬರಲಿದೆ’

ಸಮಿತಿಯನ್ನು ರಚಿಸಿದ ಉದ್ದೇಶ

  • ಸರ್ಕಾರಿ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಬಳಸುವಂತೆ ಮಾಡಲು ಮತ್ತು ಶಾಲಾ– ಕಾಲೇಜುಗಳ ಗೋಡೆಗಳಲ್ಲಿ ಅಳವಡಿಸಲು ನಾಡದೇವತೆಯ ಪ್ರಮಾಣಿತ ಹಾಗೂ ಅಧಿಕೃತ ಚಿತ್ರವನ್ನು ಆಯ್ಕೆ ಮಾಡಿ ಶಿಫಾರಸು ಮಾಡಲು 2021ರ ಸೆ. 23ರಂದು ಮಹೇಂದ್ರ ನೇತೃತ್ವದಲ್ಲಿ ಚಿತ್ರ ಕಲಾವಿದರ ಸಮಿತಿಯನ್ನು ರಚಿಸಲಾಗಿತ್ತು.
  • ಹಿಂದೆ ರಚಿಸಿರುವ ಚಿತ್ರಗಳು ಸುಂದರವಾಗಿದ್ದರೂ, ಅಲ್ಲಿ ಕರ್ನಾಟಕದ ವೈಶಿಷ್ಟ್ಯತೆಯನ್ನು ಬಿಂಬಿಸುವಲ್ಲಿ ಕೊರತೆ ಎದ್ದು ಕಾಣುತ್ತಿತ್ತು. ಹೀಗಾಗಿ ಒಂದು ಅಧಿಕೃತ ಕರ್ನಾಟಕ ರಾಜ್ಯದ ನಾಡದೇವತೆಯ ಚಿತ್ರದ ಅವಶ್ಯಕತೆ ಹಿನ್ನೆಲೆಯಲ್ಲಿ ಸದರಿ ಚಿತ್ರವನ್ನು ರಚಿಸಲಾಗಿರುತ್ತದೆ.

ಭಾವಚಿತ್ರದಲ್ಲಿರುವ ಅಂಶಗಳು

೧. ನಾಡದೇವತೆಯ ಹಿನ್ನೆಲೆಯಲ್ಲಿ ಕರ್ನಾಟಕದ ನಕ್ಷೆ ಇರುತ್ತದೆ.

 ೨. ಮುಖದಲ್ಲಿ ಸ್ವಾಭಾವಿಕ ಸೌಂದರ್ಯ ಮತ್ತು ದೈವಿ ಭಾವ ಕಂಗೊಳಿಸಿದೆ.

೩. ದ್ವಿಭುಜ ಅಂದರೆ ಎರಡು ಕೈಗಳು ವಾಸ್ತವಿಕತೆಗೆ ಹತ್ತಿರವಾಗಿದೆ.

೪. ಬಲಗೈಯಲ್ಲಿ ಅಭಯ ಮುದ್ರೆ ಸಾಂಕೇತಿಕವಾಗಿ ರಕ್ಷಣೆ ನೀಡುತ್ತಿದ್ದರೆ, ಎಡಗೈಯಲ್ಲಿರುವ ತಾಳೆಗರಿ ಕನ್ನಡ ಭಾಷಾ ಸಂಪತ್ತು, ಜ್ಞಾನ ಸಮೃದ್ಧಿಯನ್ನು ಪ್ರವಹಿಸುವ ನಿಟ್ಟನ್ನು ಸೂಚಿಸುತ್ತಿದೆ.

೫. ನಾಡದೇವತೆಯು ಕುಳಿತಿರುವ ಭಂಗಿಯು ಭವ್ಯತೆಯನ್ನು ಹಾಗೂ ಸಾಕ್ಷ್ಯ ತೆಯನ್ನು ಪ್ರತಿಬಿಂಬಿಸುತ್ತಿದೆ.

೬. ಕರ್ನಾಟಕದ ಧ್ವ ಜ ಕನ್ನಡಾಭಿಮಾನದ ಸಂಕೇತವಾಗಿ ರಾರಾಜಿಸುತ್ತಿದೆ.

೭. ಹಸಿರು ಸೀರೆಯು ಸಿರಿ ಸಂಪದ ಸಮೃದ್ಧಿಯನ್ನು ಸೂಚಿಸುತ್ತಿದೆ.

೮. ಕರ್ನಾಟಕದ ಭವ್ಯ ವೈಶಿಷ್ಟ್ಯ ವನ್ನು ಸಾರುವ ಆಭರಣಗಳು ನಮ್ಮ ನಾಡನ್ನು ಆಳಿದ ಸಾಮ್ರಾಜ್ಯಗಳ ವೈಭವವನ್ನು ಸಾರುತ್ತಿವೆ.

 ೯. ಚಾಲುಕ್ಯರ ಕಾಲದ ಕರಂಡ ಮುಕುಟೋಪಾದಿಯಲ್ಲಿ ಕಿರೀಟ, ಕಿವಿಯಲ್ಲಿ ಸುಂದರ-ಕೌಶಲ್ಯ ಕರ್ಣಪರ್ಯಗಳು, ಭುಜದ ಮೇಲೆ ಕರ್ನಾಟಕ ವೈಶಿಷ್ಟ್ಯ ದ ಸಿಂಹ ಲಾಂಛನ ಭುಜಕೀರ್ತಿಗಳು, ಕುತ್ತಿಗೆಯಲ್ಲಿ ಕಂಠಿ, ಕಟ್ಟಾಣಿ, ಹಾರಗಳು,ಕರ್ನಾಟಕ ಲಾಂಛನ – ಗಂಡ ಭೇರುಂಡ ಪದಕ, ಕಟಿಯ ಆಭರಣವಾದ ಬೆಳ್ಳಿಯ ಡಾಬು, ಕಟಿಯಲ್ಲಿ ಕೀರ್ತಿಮುಖ ಲಾಂಛನದ ವಡ್ಯಾಣ, ಉದ್ದನೆಯ ವೈಜಯಂತಿ ಹಾರ, ನಡುವೆ ಹೊಯ್ಸಳ ಲಾಂಛನದ ಪದಕ ನಾಡದೇವತೆಯನ್ನು ಅಲಂಕರಿಸಿದೆ.

    • ಕಾಲಿನಲ್ಲಿ ಕಡಗ, ಋಳಿ ಮತ್ತು ಕಾಲುಂಗುರಗಳು, ಹಣೆಯ ಲಲಾಟ ತಿಲಕ, ಶಿರದಲ್ಲಿ ಮುಡಿದಿರುವ ಹೂವು ಸೌಭಾಗ್ಯದ್ಯೋ ತಕಗಳಾ ಗಿವೆ ತೆಳುವಾದ-ಮೃದುವಾದ ಹೂವಿನ ಮೃದುವಾದ ಹೂವಿನ ತೋಮಾಲೆಯು ನಾಡದೇವತೆಯ ಸಂಪೂರ್ಣ ಅಲಂಕಾರಕ್ಕೆ ಒಂದು ರೀತಿಯ ಮೆರುಗು ನೀಡಿದೆ. ಕೆಳಗೆ ಸುಂದರ ಸದೃಢ ತಾವರೆ ಹೂವು(ಕಮಲ) ದೇವಿಯ ಮೃದುವಾದ ಕಾಲುಗಳಿಗೆ ಆಸರೆ ನೀಡಿದೆ.

೧೦. ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟ, ಸಸ್ಯಕಾಶಿಯು ಸೊಬಗನ್ನು ಹೆಚ್ಚಿಸಿವೆ.

ಏನನ್ನು ಪ್ರತಿಬಿಂಬಿಸುತ್ತದೆ?

  • ಈ ಚಿತ್ರವು ಸುಲಕ್ಷಣವಾಗಿ ಕರ್ನಾಟಕದ ಅಭಿಮಾನ, ಜ್ಙಾನ ಸಂಪತ್ತು, ಸಸ್ಯ ಸಮೃದ್ಧಿ, ಸಿರಿಸಂಪದವನ್ನು ಪ್ರತಿಬಿಂಬಿಸುವ ನೈಜ ಸ್ವರೂಪವಾಗಿದೆ. ಹೀಗಾಗಿ ಈ ಚಿತ್ರ ದಿವ್ಯ-ಭವ್ಯ ಕರ್ನಾಟಕ ನಾಡದೇವತೆಯ, ಕನ್ನಡಾಂಬೆಯ, ಕರ್ನಾಟಕ ಮಾತೆಯ ಚಿತ್ರದ ವೈಶಿಷ್ಟ್ಯ ಗಳಾ ಗಿವೆ.

ಈಗಿರುವ ನಾಡದೇವತೆ ಚಿತ್ರ

  • 1953ರ ಜನವರಿ 11ರಂದು ಜಕ್ಕಲಿಯ ಅನ್ನದಾನೇಶ್ವರ ಮಠದಲ್ಲಿ, ಏಕೀಕರಣದ ರೂವಾರಿ ದಿ.ಅಂದಾನಪ್ಪ ದೊಡ್ಡಮೇಟಿ ಕಲ್ಪನೆಯಂತೆ ಗದುಗಿನ ಚಿತ್ರಕಲಾವಿದ ಸಿ.ಎನ್.ಪಾಟೀಲ ಆರು ಅಡಿ ಎತ್ತರದ ಭುವನೇಶ್ವರಿ ತೈಲವರ್ಣದ ಚಿತ್ರ ರಚಿಸಿದ್ದರು. ಮುಖ್ಯವಾಗಿ ಭುವನೇಶ್ವರಿ ನಿಂತ ಭಂಗಿಯೇ ಕರ್ನಾಟಕ ನಕ್ಷೆಯಾಗಿದೆ.