Published on: December 9, 2022

ನಾವಿನ್ಯತಾ ಅನುಭವ ವಸ್ತು ಸಂಗ್ರಹಾಲಯ

ನಾವಿನ್ಯತಾ ಅನುಭವ ವಸ್ತು ಸಂಗ್ರಹಾಲಯ

where to buy isotretinoin in hong kong ಸುದ್ಧಿಯಲ್ಲಿ ಏಕಿದೆ?

ಕರ್ನಾಟಕದಲ್ಲಿ ಅಭಿವೃದ್ಧಿ ಹಾಗೂ ನಾವಿನ್ಯತೆಯ ಪಯಣ, ಇದಕ್ಕೆ ಕಾರಣವಾಗಿರುವ ಸಾಧಕರು, ಇವರ ಸಾಧನೆಗಳನ್ನು ಬಿಂಬಿಸುವ (ಇನ್ನೋವೇಷನ್ ಎಕ್ಸ್ಪೀರಿಯನ್ಸ್ ಮ್ಯೂಸಿಯಂ) ನಾವಿನ್ಯತಾ ಅನುಭವ ವಸ್ತು ಸಂಗ್ರಹಾಲಯವನ್ನು ಬೆಂಗಳೂರಿನಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮುಖ್ಯಾಂಶಗಳು

  • ಬೆಂಗಳೂರಿನ 8 ದಿಕ್ಕುಗಳಲ್ಲಿ 8 ನಗರ ಕೇಂದ್ರಗಳ ನಿರ್ಮಾಣಕ್ಕೆ ರೂಪುರೇಷೆ ಸಿದ್ಧಪಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ .

ವಸ್ತು ಸಂಗ್ರಹಾಲಯ ಬಗ್ಗೆ

  • ಎಲ್ಲ ನಾವಿನ್ಯತೆ, ಅವಿಷ್ಕಾರಗಳ ಬಗ್ಗೆ ಮಾಹಿತಿ ನೀಡುವ ಅಂತರರಾಷ್ಟ್ರೀಯ ಮಟ್ಟದ ಮ್ಯೂಸಿಯಂ ಇದಾಗಲಿದ್ದು, ಹಸಿರಿನ ಪರಿಸರವನ್ನೂ ಒಳಗೊಂಡಿರಲಿದೆ. ಇದರಿಂದ ವಿದೇಶಿ ಪ್ರವಾಸೋದ್ಯಮವನ್ನು ಪ್ರೋತ್ಸಾಹ ದೊರೆಯುತ್ತದೆ.
  • ಈ ಮ್ಯೂಸಿಯಂ ನಿಂದ ಯುವ ಆವಿಷ್ಕಾರಿಗಳು, ವಿನ್ಯಾಸಕಾರರಿಗೆ ಸ್ಪೂರ್ತಿ ದೊರೆಯಲಿದೆ

ಬೆಂಗಳೂರಿನಲ್ಲೇ ಏಕೆ ?

  • ಬೆಂಗಳೂರು ಜನರ ನೆಚ್ಚಿನ ನಗರವಾಗಿದ್ದು, ಈ ನಗರದಲ್ಲಿ ಅವಿಷ್ಕಾರ ಸೇರಿದಂತೆ ವಿವಿಧ ರಂಗಗಳಲ್ಲಿ ಪ್ರತಿಭಾವಂತರಿದ್ದಾರೆ.
  • ಜೆನೋಟಿಕ್ಸ್ ನಿಂದ ಏರೋಸ್ಪೇಸ್ ವರೆಗೆ 400 ಸಂಶೋಧನಾ ಕೇಂದ್ರಗಳಿವೆ.
  • ರಾಜ್ಯದಲ್ಲಿ 400 ಫಾರ್ಚೂನ್ ಕಂಪನಿಗಳಿವೆ. ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಬೆಂಗಳೂರಿನಲ್ಲಿ ಅಭಿವೃದ್ಧಿಗೆ ಬಹಳ ಅವಕಾಶಗಳಿವೆ.