Published on: November 10, 2021

ಪದ್ಮ ಪುರಸ್ಕೃತರು

ಪದ್ಮ ಪುರಸ್ಕೃತರು

ಸುದ್ಧಿಯಲ್ಲಿ ಏಕಿದೆ ?  ನಾಡಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಲವು ಮಹನೀಯರಿಗೆ 2020ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರದಾನ ಮಾಡಿದರು.

  • ಕರ್ನಾಟಕದ ಖ್ಯಾತ ವೈದ್ಯ ಹಾಗೂ ಶಿಕ್ಷಣ ತಜ್ಞ ಬಿ.ಎಂ. ಹೆಗ್ಡೆ, ಪುರಾತತ್ವ ಶಾಸ್ತ್ರದ ದಂತಕಥೆ ಬಿ.ಬಿ.ಲಾಲ್ ಅವರಿಗೆ ’ಪದ್ಮವಿಭೂಷಣ, ಶಿಲ್ಪಕಲಾ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಒಡಿಶಾದ ಖ್ಯಾತ ಶಿಲ್ಪಿ ಸುದರ್ಶನ್ ಸಾಹೂ, ಲೋಕಸಭೆಯ ಮಾಜಿ ಸ್ಪೀಕರ್ ಸುಮಿತ್ರಾ ಮಹಾಜನ್ ಅವರಿಗೆ ’ಪದ್ಮಶ್ರೀ’ ಪ್ರಶಸ್ತಿ ಪ್ರದಾನ ಮಾಡಿದರು.
  • ಪೇಜಾವರ ಮಠದ ಹಿರಿಯ ಶ್ರೀಗಳಾದ ವಿಶ್ವೇಶತೀರ್ಥ ಸ್ವಾಮೀಜಿಯವರಿಗೆ ಮರಣೋತ್ತರ ಪದ್ಮವಿಭೂಷಣ ಪ್ರದಾನ ಮಾಡಲಾಗಿದೆ.
  • ದಕ್ಷಿಣ ಕನ್ನಡದ ಅಕ್ಷರ ಸಂತ’ ಹರೇಕಳ ಹಾಜಬ್ಬ, ಕನ್ನಡತಿ ಮಂಜಮ್ಮ ಜೋಗತಿ, ರಂಗಸ್ವಾಮಿ ಲಕ್ಷ್ಮೀನಾರಾಯಣ ಕಶ್ಯಪ್, ಪರಿಸರ ಪ್ರೇಮಿ ತುಳಸಿ ಗೋವಿಂದೇಗೌಡ, ಮಾಜಿ ಹಾಕಿ ಪಟು ಎಂಪಿ ಗಣೇಶ್​​ ಮತ್ತು ಉದ್ಯಮಿ ವಿಜಯ್​ ಸಂಕೇಶ್ವರ್​ ಅವರು ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು.
  • ವಿವಿಧ ಕ್ಷೇತ್ರದ 119 ಸಾಧಕರಿಗೆ 7 ಪದ್ಮವಿಭೂಷಣ, 10 ಪದ್ಮಭೂಷಣ ಮತ್ತು 102 ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಪ್ರಖ್ಯಾತ ಗಾಯಕ ಎಸ್ .ಪಿ. ಬಾಲ ಸುಬ್ರಹ್ಮಣ್ಯಂ ಅವರಿಗೆ ಮರಣೋತ್ತರವಾಗಿ ಪದ್ಮ ವಿಭೂಷಣ ಪ್ರಶಸ್ತಿ ನೀಡಲಾಯಿತು.
  • ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದು, ಅವರ ಪುತ್ರಿ ಬಾನ್ಸುರಿ ಸ್ವರಾಜ್ ಪ್ರಶಸ್ತಿ ಸ್ವೀಕರಿಸಿದರು.
  • ಒಲಿಂಪಿಯನ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಪದ್ಮಭೂಷಣ ಪ್ರಶಸ್ತಿ, ಐಸಿಎಂಆರ್ ಮಾಜಿ ಮುಖ್ಯ ವಿಜ್ಞಾನಿ ಡಾ ರಾಮನ್ ಗಂಗಾಖೇಡ್ಕರ್, ನಟಿ ಕಂಗನಾ ರಣಾವತ್ ಅವರಿಗೆ ಪದ್ಮಶ್ರೀ, ಪ್ರಶಸ್ತಿ ನೀಡಲಾಯಿತು