Published on: July 13, 2022

ಪಶ್ಚಿಮ ಘಟ್ಟ: 56,825 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶ

ಪಶ್ಚಿಮ ಘಟ್ಟ: 56,825 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶ

buy gabapentin 300 mg ಸುದ್ದಿಯಲ್ಲಿ ಏಕಿದೆ?

http://partnersforselfemployment.org/today/ ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ, ತಮಿಳುನಾಡು ರಾಜ್ಯಗಳಲ್ಲಿ ವ್ಯಾಪಿಸಿರುವ ಪಶ್ಚಿಮ ಘಟ್ಟ ಪ್ರದೇಶದ 56,825 ಚದರ ಕಿ.ಮೀ ವಿಸ್ತೀರ್ಣವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಮತ್ತೊಮ್ಮೆ ಕರಡು ಅಧಿಸೂಚನೆ ಹೊರಡಿಸಿದೆ. ಈ ಹಿಂದೆ ಮೂರು ಬಾರಿ ಕರಡು ಅಧಿಸೂಚನೆ ಹೊರಡಿಸಲಾಗಿತ್ತು.

ಮುಖ್ಯಾಂಶಗಳು

  • ಅಳಿವಿನ ಅಂಚಿನಲ್ಲಿರುವ ಅಪರೂಪದ ಸಸ್ಯ ಮತ್ತು ಪ್ರಾಣಿ ಸಂಕುಲ, ನದಿ ಮೂಲಗಳನ್ನು ಹೊಂದಿರುವ ಪಶ್ಚಿಮ ಘಟ್ಟದ ಕೆಲ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಿದ ಬಳಿಕವಷ್ಟೇ ಈ ಪ್ರದೇಶಕ್ಕೆ ಯುನೆಸ್ಕೊ ವಿಶ್ವಪಾರಂಪರಿಕ ತಾಣಗಳ ಮಾನ್ಯತೆ ದೊರಕುತ್ತದೆ. ಈ ನಿಟ್ಟಿನಲ್ಲಿ ಕೇಂದ್ರದ ಪ್ರಯತ್ನ ಸಾಗಿದೆ.
  • ಆದರೆ ಕೇಂದ್ರದ ಈ ಪ್ರಯತ್ನಕ್ಕೆ ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯಗಳು ನಿರಂತರವಾಗಿ ವಿರೋಧ ವ್ಯಕ್ತಪಡಿಸುತ್ತಲೇ ಇವೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಹೊಸದಾಗಿ ಕರಡು ಅಧಿಸೂಚನೆ ಹೊರಡಿಸಿದೆ. 1986ರ ಪರಿಸರ ಸಂರಕ್ಷಣಾ ಕಾಯ್ದೆಯಡಿ ಈ ಅಧಿಸೂಚನೆ ಹೊರಡಿಸಿದ್ದು, ಆಕ್ಷೇಪಣೆ ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಲಾಗಿದೆ.
  • ಪಶ್ಚಿಮ ಘಟ್ಟದ ಜೀವ ವೈವಿಧ್ಯ ಉಳಿಸಲು ಘಟ್ಟದ 59,940 ಚ.ಕಿ.ಮೀ ವಿಸ್ತೀರ್ಣವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಿ ಸಂರಕ್ಷಿಸಬೇಕು ಎಂದು ಕೇಂದ್ರ ಸರ್ಕಾರ ರಚಿಸಿದ್ದ ಉನ್ನತ ಮಟ್ಟದ ಸಮಿತಿಯು 2013ರಲ್ಲಿ ವರದಿ ಸಲ್ಲಿಸಿತ್ತು.

ನಿಷೇಧಿಸಲಾದ ಚಟುವಟಿಕೆಗಳು

  • ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕೆಲ ಬಗೆಯ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಗಣಿಗಾರಿಕೆ, ಕಲ್ಲುಗಣಿಗಾರಿಕೆ ಮತ್ತು ಮರಳು ಗಣಿಗಾರಿಕೆಯನ್ನು ಪೂರ್ಣ ನಿಷೇಧಿಸಲಾಗಿದೆ.
  • ಹಾಲಿ ನಡೆಯುತ್ತಿರುವ ಗಣಿಗಾರಿಕೆಗಳನ್ನು ಅಂತಿಮ ಅಧಿಸೂಚನೆ ಹೊರಬಿದ್ದ ದಿನದಿಂದ ಐದು ವರ್ಷದೊಳಗೆ ತೆರವುಗೊಳಿಸಲಾಗುತ್ತದೆ. ಹೊಸದಾಗಿ ಯಾವುದೇ ಉಷ್ಣ ವಿದ್ಯುತ್ ಯೋಜನೆಗಳನ್ನು ಕೈಗೆತ್ತಿಕೊಳ್ಳುವಂತಿಲ್ಲ. ಅಸ್ತಿತ್ವದಲ್ಲಿರುವ ಸ್ಥಾವರಗಳ ವಿಸ್ತರಣೆಗೂ ಅವಕಾಶವಿಲ್ಲ.
  • ಕೇಂದ್ರ ಅಥವಾ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳು ‘ಕೆಂಪು’ ಪಟ್ಟಿಯಲ್ಲಿ ನಿಗದಿಪಡಿಸಿರುವ ಕೈಗಾರಿಕೆಗಳ ಸ್ಥಾಪನೆ ಮತ್ತು ವಿಸ್ತರಣೆಯನ್ನು ನಿಷೇಧಿಸಲಾಗಿದೆ.
  • ಆರೋಗ್ಯ ರಕ್ಷಣಾ ಸಂಸ್ಥೆಗಳೂ ಸೇರಿದಂತೆ ಅಸ್ತಿತ್ವದಲ್ಲಿರುವ ‘ಕೆಂಪು’ ಪಟ್ಟಿಯ ಎಲ್ಲ ಕೈಗಾರಿಕೆಗಳ ಮುಂದುವರಿಕೆಗೆ ಅವಕಾಶ ಕಲ್ಪಿಸಲಾಗಿದೆ.
  • 20,000 ಚ.ಮೀಟರ್ ವಿಸ್ತೀರ್ಣಕ್ಕೂ ಹೆಚ್ಚಿನ ಕಟ್ಟಡ, ನಿರ್ಮಾಣಕ್ಕೆ ಸಂಬಂಧಿಸಿದ ಹೊಸ ಯೋಜನೆಗಳು, 50 ಹೆಕ್ಟೇರ್ ಅಥವಾ 1,50,000 ಚ.ಮೀಟರ್ಗಿಂತ ಹೆಚ್ಚಿನ ವಿಸ್ತೀರ್ಣದ ಟೌನ್ಶಿಪ್ ಮತ್ತು ಪ್ರದೇಶಾಭಿವೃದ್ಧಿ ಯೋಜನೆಗಳನ್ನು ನಿಷೇಧಿಸಲಾಗಿದೆ.
  • ಆದರೆ, ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಈಗಾಗಲೇ ಇರುವ ವಸತಿಗಳ ದುರಸ್ತಿ, ವಿಸ್ತರಣೆ, ನವೀಕರಣಕ್ಕೆ ನಿರ್ಬಂಧವಿಲ್ಲ.

ಚಟುವಟಿಕೆಗಳ ನಿಯಂತ್ರಣ ಹೇಗೆ?

  • ಪರಿಸರದ ಮೇಲೆ ಬೀರುವ ಪರಿಣಾಮವನ್ನು ಅವಲೋಕಿಸಿ ಹೊಸ ಜಲವಿದ್ಯುತ್ ಯೋಜನೆಗಳಿಗೆ ಅವಕಾಶ ನೀಡಬಹುದು. 2006ರ ಸೆಪ್ಟೆಂಬರ್ 14ರಂದು ಹೊರಡಿಸಲಾಗಿರುವ ಆದೇಶಕ್ಕೆ ಅನುಗುಣವಾಗಿ ಈ ಯೋಜನೆಯ ಮೌಲ್ಯಮಾಪನ ಆಗಬೇಕು.
  • ಪಶ್ಚಿಮ ಘಟ್ಟಗಳ ಪ್ರದೇಶಕ್ಕೆ ಸಂಬಂಧಿಸಿದ ಈ ಅಧಿಸೂಚನೆಯ ನಿಯಮ ಜಾರಿ ಮತ್ತು ಮೇಲ್ವಿಚಾರಣೆ ಅಧಿಕಾರ ರಾಜ್ಯ ಸರ್ಕಾರದ್ದು.
  • ಪಶ್ಚಿಮ ಘಟ್ಟ ವ್ಯಾಪ್ತಿಯ ಆರು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಕೇಂದ್ರ ಪರಿಸರ, ಅರಣ್ಯ ಸಚಿವಾಲಯವು ಪಶ್ಚಿಮ ಘಟ್ಟಗಳಿಗೆ ಸಂಬಂಧಿಸಿದ ಮೇಲ್ವಿಚಾರಣಾ ಕೇಂದ್ರ ಸ್ಥಾಪಿಸುತ್ತದೆ.

ಗಾಡ್ಗೀಳ್, ಕಸ್ತೂರಿರಂಗನ್ ಸಮಿತಿ ಹೇಳಿದ್ದೇನು?

  • ಪಶ್ಚಿಮ ಘಟ್ಟದ ಜೀವ ವೈವಿಧ್ಯದ ಸಂರಕ್ಷಣೆಗೆ ಉದ್ದೇಶದಿಂದ ಹಿರಿಯ ವಿಜ್ಞಾನಿ ಮಾಧವ ಗಾಡ್ಗೀಳ್ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಈ ಹಿಂದೆ ಸಮಿತಿ ರಚಿಸಿತ್ತು. ಈ ಸಮಿತಿಯು ಆಗಸ್ಟ್ 31ರ 2011ರಲ್ಲಿ ಘಟ್ಟದ 1,29,037 ಚದರ ಕಿ.ಮೀ ವ್ಯಾಪ್ತಿಯಲ್ಲಿ ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಬಹುದು ಎನ್ನುವ ಶಿಫಾರಸು ಮಾಡಿತ್ತು.
  • ಘಟ್ಟದ ಶೇ 64ರಷ್ಟು ಪ್ರದೇಶದಲ್ಲಿ ಅಭಿವೃದ್ಧಿಗೆ ಕೆಲ ನಿಯಂತ್ರಣ ಹೇರಬೇಕು ಎಂದು ಶಿಫಾರಸು ಮಾಡಿತ್ತು. ಇದಕ್ಕೆರಾಜಕೀಯವಾಗಿ ವಿರೋಧ ಎದುರಾದಾಗ ಕೇಂದ್ರ ಸರ್ಕಾರ ಗಾಡ್ಗೀಳ್ ವರದಿ ಪರಿಶೀಲನೆಗೆ 2013ರ ಏಪ್ರಿಲ್ 15ರಂದು ಡಾ.ಕೆ.ಕಸ್ತೂರಿ ರಂಗನ್ ಸಮಿತಿ ರಚಿಸಿತ್ತು.
  • ಈ ಸಮಿತಿ ಅದೇ ವರ್ಷದ ನ. 13ರಂದು ವರದಿ ನೀಡಿ, ಘಟ್ಟದ ಶೇ 37ರಷ್ಟು ಅರಣ್ಯ ಪ್ರದೇಶವನ್ನು ಅಂದರೆ 59,940 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಿತ್ತು.