Published on: January 17, 2022

ಪೈಪ್ಲೈನ್ ಅನಿಲ ಸಂಪರ್ಕ

ಪೈಪ್ಲೈನ್ ಅನಿಲ ಸಂಪರ್ಕ

http://annedickson.co.uk/wp-json/oembed/1.0/embed?url=http://annedickson.co.uk/books/the-mirror-within/ ಸುದ್ಧಿಯಲ್ಲಿ ಏಕಿದೆ?  ಮನೆ ಮನೆಗೆ ಅನಿಲ ಸಂಪರ್ಕ ಒದಗಿಸುವ ಮೂಲಕ ಸಿಲಿಂಡರ್ ಗೊಡವೆ ತಪ್ಪಿಸುವ ಕೇಂದ್ರ ಸರ್ಕಾರದ ಅನಿಲ ಕೊಳವೆ ಸಂಪರ್ಕ ಯೋಜನೆಯಡಿ ರಾಜ್ಯದ Tivoli ಚಿಕ್ಕಬಳ್ಳಾಪುರ ಮತ್ತು ಯಾದಗಿರಿ ಆಯ್ಕೆಯಾಗಿದೆ.

  • ರಾಜ್ಯದ ಐದು ನಗರಗಳ ನಂತರ ರಾಜ್ಯದ ಮತ್ತೆರಡು ನಗರವನ್ನು ಈ ಯೋಜನೆಯ ವ್ಯಾಪ್ತಿಗೆ ತರಲು ಕೇಂದ್ರ ಸರಕಾರ ನಿರ್ಧರಿಸಿದೆ
  • ರಾಜಧಾನಿ ಬೆಂಗಳೂರು, ಬಂದರು ನಗರಿ ಮಂಗಳೂರು, ಸಾಂಸ್ಕೃತಿಕ ನಗರಿ ಮೈಸೂರು, ಕಲ್ಪತರು ನಗರಿ ತುಮಕೂರು, ಕುಂದಾ ನಗರಿ ಬೆಳಗಾವಿಯ ಆಯ್ದ ಭೌಗೋಳಿಕ ಪ್ರದೇಶಗಳ ಮನೆಮನೆಗೆ ಪೈಪ್ ಲೈನ್ ಮುಖಾಂತರ ಅಡುಗೆ ಅನಿಲ ಪೂರೈಸುವ ಯೋಜನೆಯ ಕಾಮಗಾರಿ ಈಗಾಗಲೇ ಆರಂಭವಾಗಿದೆ.

ಮುಖ್ಯಾಂಶಗಳು

  • ಹೈದರಾಬಾದ್ ಮೂಲದ ಬಹು ಕ್ಷೇತ್ರದ ಜಾಗತಿಕ ಸಂಸ್ಥೆ ಮೆಘಾ ಇಂಜಿನಿಯರಿಂಗ್ ಅಂಡ್ ಇನ್ಪಾಸ್ಟ್ರಕ್ಚರ್ ಯೋಜನೆ ಜಾರಿ ಅವಕಾಶವನ್ನು ತನ್ನದಾಗಿಸಿಕೊಂಡಿದೆ.
  • ಈಗಾಗಲೇ ರಾಜ್ಯದ ತುಮಕೂರು ಮತ್ತು ಬೆಳಗಾವಿಯಲ್ಲಿ ನೈಸರ್ಗಿಕ ಅನಿಲ ಸಂಪರ್ಕವನ್ನು ಸಾಧ್ಯವಾಗಿಸಿದ ಅನುಭವ ಹೊಂದಿರುವ ಎಂಇಐಎಲ್ ‘ನಗರ ಅಥವಾ ತಾಯಿ ಕೇಂದ್ರ (ಸಿಟಿ ಅಥವಾ ಮದರ್ ಕೇಂದ್ರ)ಗಳನ್ನು, ಮನೆ ಮನೆ ಸಂಪರ್ಕಕ್ಕೆ ಮುಖ್ಯ ಪೈಪ್‌ಲೈನ್‌ಗಳ ಅವಳಡಿಕೆ ಜತೆಗೆ ಸಿಎನ್‌ಜಿ ಕೇಂದ್ರಗಳನ್ನು ಸ್ಥಾಪಿಸಲಿದೆ.
  • ಈಗಾಗಲೇ ದೇಶದ ಮೂರು ರಾಜ್ಯಗಳಲ್ಲಿ ಎಂಇಐಎಲ್ ‘ಮೆಘಾ ಗ್ಯಾಸ್’ ಹೆಸರಿನಡಿ 32 ಸಿಎನ್‌ಜಿ ಕೇಂದ್ರಗಳನ್ನು ಯಶಸ್ವಿಯಾಗಿ ನಡೆಸುತ್ತಿದೆ.

ಯೋಜನೆಯ ಉದ್ದೇಶ

  • ಹಸಿರು ಅನಿಲ ಬಳಕೆಗೆ ಉತ್ತೇಜನ ನೀಡುವ ಸಲುವಾಗಿ ಕೇಂದ್ರ ಸರ್ಕಾರದ ನೈಸರ್ಗಿಕ ಅನಿಲ ನಿಯಂತ್ರಣ ಮಂಡಳಿ ಈ ಯೋಜನೆಯನ್ನು ಜಾರಿಗೊಳಿಸುತ್ತಿದ್ದು, ಪೈಪ್‌ಗಳ ಮೂಲಕ ಗೃಹೋಪಯೋಗಿ ಮತ್ತು ಕೈಗಾರಿಕಾ ಉದ್ದೇಶಕ್ಕಾಗಿ ಅನಿಲ ಸಂಪರ್ಕ (ಪಿಎನ್‌ಜಿ), ವಾಹನ ಮತ್ತು ಆಟೋಮೋಬೈಲ್ ಕ್ಷೇತ್ರದ ಬಳಕೆಗಾಗಿ ಪಿಎನ್‌ಜಿ ಅನಿಲವನ್ನು ಒದಗಿಸುತ್ತಿದೆ.